Breaking News

Yearly Archives: 2024

ಸಿಎಂ ತಪ್ಪು ಮಾಡಿಲ್ಲ, ಇದೊಂದು ಷಡ್ಯಂತ್ರ: ಸಿದ್ದು ಬೆನ್ನಿಗೆ ನಿಂತ ‘ಕೈ’ ಪಡೆ

ಬೆಂಗಳೂರು: ಮುಡಾ ಹಗರಣ ಪ್ರಕರಣದ ರಿಟ್ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದ ಹೊರತಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ. ಆದರೆ, ತನಿಖೆಯ ಭಾಗವಾಗಿ ಎಫ್‌ಐಆರ್ ದಾಖಲಾಗಿದ್ದೇ ಆದರೆ, ಈ ಬೆಂಬಲ ಇದೇ ರೀತಿ ಮುಂದುವರೆಯುತ್ತದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.   ಈ ಹಂತದಲ್ಲಿ ಯಾವುದೇ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿಲ್ಲ. ಬದಲಾವಣೆಗೆ ಮುಂದಾದರೆ ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದು …

Read More »

ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್

ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು. ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ..   ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು …

Read More »

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ವಂಚನೆ ಪ್ರಕರಣ

ಚಾಮರಾಜನಗರ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ 3 ವರ್ಷಗಳ ಹಿಂದಿನ ವಂಚನೆ ಆರೋಪ ಪ್ರಕರಣ ಸಂಬಂಧ ಇಂದು ಕೋರ್ಟ್​​ಗೆ ಕೃಷ್ಣ ಅವರು ವಿಚಾರಣೆಗೆ ಹಾಜರಾದರು.     ಕರುಣಾಕರ ಎಂಬುವವರಿಂದ ಕೃಷ್ಣ 2018, 2019 ಹಾಗೂ 2020ರಲ್ಲಿ ತಲಾ ಒಂದು ಲಕ್ಷ ರೂಪಾಯಿಯನ್ನು ಸಾಲ ಪಡೆದು ಸಾಲ ಹಿಂದುರುಗಿಸದೇ ವಂಚನೆ ಮಾಡಿರುವ ಆರೋಪದ ಪ್ರಕರಣ ಇದಾಗಿದೆ. …

Read More »

ಗ್ಯಾರಂಟಿ ಸಮಾವೇಶದಲ್ಲೂ ಗೋಲ್‌ಮಾಲ್..?-‌ ಲೋಕಾಯುಕ್ತಕ್ಕೆ ದೂರು..!

ಧಾರವಾಡ: ಗ್ಯಾರಂಟಿ ಸಮಾವೇಶದಲ್ಲಿ ಗೋಲ್​ಮಾಲ್ ನಡೆದಿರುವ ಅನುಮಾನವೊಂದು ಎದ್ದಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಧಾರವಾಡದ ಕೆಸಿಡಿ ಮೈದಾನ, ಹುಬ್ಬಳ್ಳಿಯ ರೈಲ್ವೆ ಮೈದಾನ, ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನ ಹಾಗೂ ಕುಂದಗೋಳ, ಕಲಘಟಗಿಯಲ್ಲಿ ಗ್ಯಾರಂಟಿ ಸಮಾವೇಶ ನಡೆದಿತ್ತು.   ಫೆಬ್ರವರಿ 24ರಂದು ನವಲಗುಂದದಲ್ಲಿ ಸಿಎಂ ಭಾವಹಿಸಿದ್ದ ಸಮಾವೇಶದ ಲೆಕ್ಕಪತ್ರದಲ್ಲಿಯೇ ಏರುಪೇರಾಗಿದ್ದು, ಅನೇಕ ಸಂಶಯಗಳು ಬರುತ್ತಿವೆ ಎಂದು ನವಲಗುಂದದ ಸಾಮಾಜಿಕ ಹೋರಾಟಗಾರ …

Read More »

ಸಾರ್ವಜನಿಕ ಹುದ್ದೆಗಳಿಗೆ ಬರಲು ಬ್ರಾಹ್ಮಣರು ಮುಂದಾಗಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಡಾಕ್ಟರ್​, ಇಂಜಿನಿಯರ್​​​ ಎಂಬ ಹುದ್ದೆಗಳಿಗೆ ಮಾತ್ರ ಸೀಮಿತವಾಗದೇ, ಸಾರ್ವಜನಿಕ ಸೇವೆಗಳಿರುವ ಹುದ್ದೆಗಳಲ್ಲಿಯೂ ಬ್ರಾಹ್ಮಣರು ಹೆಚ್ಚೆಚ್ಚು ಆಸಕ್ತಿವಹಿಸಬೇಕು ಎಂದು ಸಚಿವ ದಿನೇಶ್​ ಗುಂಡೂರಾವ್​ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ಆಯೋಜಿಸಿದ್ದ ವಿಶ್ಚಾಮಿತ್ರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸಿದ್ದಾಂತಕ್ಕಿಂತ ಒಳ್ಳೇ ಉದ್ದೇಶ ನಮ್ಮಲ್ಲಿ ಇರಬೇಕು ಎಂದಿದ್ದಾರೆ.     ಸಾರ್ವಜನಿಕ ಹುದ್ದೆಗಳಲ್ಲಿಯೂ ನಮ್ಮವರೇ ಇದ್ದರೆ, ಆಗ ಎಲ್ಲ ಸಮುದಾಯಗಳಿಗೆ ಸ್ಪಂದಿಸುವ ಮೂಲಕ ನಮ್ಮ …

Read More »

ಜನ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ:ಸಿಟಿ ರವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನ ಹೇಳಿಕೊಂಡಷ್ಟು ಪರಿಶುದ್ಧವೇನಲ್ಲ. ತಮ್ಮ ಭ್ರಷ್ಟಾಚಾರ ಹೊರಗೆ ಬರಬಾರದು ಎಂದು ಪೂರ್ವ ತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡುವವರು ಎಂದು ಬಿಜೆಪಿ ನಾಯಕ ಸಿಟಿ ರವಿ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ. ಅವರ ಮೇಲೆ 65 ಕ್ಕೂ ಹೆಚ್ಚು ಭ್ರಷ್ಟಾಚಾರ ದ ಆರೋಪಗಳಿವೆ. ತನಿಖೆ ಆಗದಂತೆ ಮುನ್ನೆಚ್ಚರಿಕೆವಹಿಸಿ ಅವರಿಗೆ ಅವರೇ ಪ್ರಾಮಾಣಿಕರೆಂದು …

Read More »

ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.

>ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …

Read More »

ಶೀಘ್ರದಲ್ಲೆ ಏಪಿಎಂಸಿಗಳ ಡಿಜಟಲೀಕರಣ ಕಾರ್ಯ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿರುವ ಏಪಿಎಂಸಿಗಳ ಡಿಜಟಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವರಾದ ಶಿವಾನಂದ ಪಾಟೀಲ್‌ ಅವರು ತಿಳಿಸಿದರು.   ಇಂದು ಎಫ್‌ಕೆಸಿಸಿಐ ನ 107 ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ …

Read More »

ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.   ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ …

Read More »

ಹಾವೇರಿಗೆ ವಂದೇ ಭಾರತ್ ರೈಲು ನಿಲುಗಡೆ ಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಸೆಪ್ಟಂಬರ್ 27: ಬೆಂಗಳೂರಿನಿಂದ ತೆರಳುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು (Vande Bharat Express Rail) ಬೆಳಗಾವಿವರೆಗೆ ವಿಸ್ತರಣೆ ಮಾಡಬೇಕು ಎಂಬ ಕೂಗಿನ ಜೊತೆಗೆ ಇದೀಗ ಈ ಜಿಲ್ಲೆಯಲ್ಲಿ ನಿಲುಗಡೆ ನೀಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಖುದ್ದು ಕ್ರಮ ವಹಿಸುವಂತೆ ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.   ಹಾವೇರಿ-ಗದಗ ಜಿಲ್ಲೆಗಳ ವ್ಯಾಪ್ತಿಯ ನಡೆಯುತ್ತಿರುವ ವಿವಿಧ ರೈಲ್ವೇ ಕಾಮಗಾರಿಗಳ ಕುರಿತು …

Read More »