Breaking News

Yearly Archives: 2024

ಸಂಚಾರ ನಿಯಮ ಉಲ್ಲಂಘಿಸಿದರೆ ಲೈಸನ್ಸ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಅತೀ ವೇಗವಾಗಿ ವಾಹನ ಚಲಾಯಿಸುವುದರ ಸಹಿತ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ಅಡಿಯಲ್ಲಿ ನೂತನ 65 ಆಯಂಬುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ ನಮ್ಮ ಸರಕಾರ ರಸ್ತೆ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದು, ಅಪಘಾತ …

Read More »

ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

ಬೆಂಗಳೂರು: ದಿನದಿಂದ ದಿನಕ್ಕೆ ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮದ ಕುಣಿಕೆ ಬಿಗಿಯಾಗುತ್ತಿದ್ದು, ಮುಂದುವರಿದ ಭಾಗವಾಗಿ ಅವರ ಮೇಲೆ ಈಗ ವಿಧಾನಸಭೆ ಸದಸ್ಯತ್ವ ಸ್ಥಾನದ ಅಮಾನತಿನ ತೂಗುಗತ್ತಿ ನೇತಾಡುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಸೋಮವಾರ ಮುನಿರತ್ನ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅಮಾನತುಗೊಳಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರಕಾರ ಮುನಿರತ್ನ ಶಾಸಕತ್ವ ಅಮಾನತು ಕ್ರಮಕ್ಕೆ ಮುಂದಡಿ ಇಟ್ಟಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ …

Read More »

ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ,

ಮುಧೋಳ: ಸೂಕ್ತ ನಿರ್ವಹಣೆ ಕೊರತೆಯಿಂದಾಗಿ‌ ನಗರದ ಮಧ್ಯಭಾಗದಲ್ಲಿರುವ ಸಮುದಾಯ ಭವನವೊಂದು ಪಾಳು ಕೊಂಪೆಯಂತಾಗುತ್ತಿದ್ದು, ಸಾರ್ವಜನಿಕರ ಅನೈತಿಕ ಚಟುವಟಿಕೆ‌ ತಾಣವಾಗಿ ಬದಲಾಗಿದೆ. ಬಸ್ ನಿಲ್ದಾದಿಂದ ಕೂಗಳತೆ ದೂರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ‌ ಭವನ‌ದ ನಿರ್ವಹಣೆಗೆ ನಗರಸಭೆ ಮುಂದಾಗದಿರುವ ಕಾರಣ ಭವನದ ಆವರಣ ಮತ್ತು ಭವನದೊಳಗೆ ಕಸಕಡ್ಡಿ‌ಯಥೇಚ್ಛವಾಗಿ ಬೆಳೆದುಕೊಂಡಿದೆ.   ಸುಂದರ ಸಮಾರಂಭ ಹಾಗೂ ವಿವಿಧ ಶುಭ ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಭವನಕ್ಕೆ ಗ್ರಹಣ ಹಿಡಿದಿದ್ದು ಅಧಿಕಾರಿಗಳು ಕನಿಷ್ಠ ಸ್ವಚ್ಛತೆಗೂ‌ ಮುಂದಾಗದಿರುವುದು‌ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. …

Read More »

ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

ಮೇಷ: ಮನಸ್ಸಿನ ಸ್ವಾಸ್ಥ್ಯವನ್ನು ಕಾಯ್ದುಕೊಳ್ಳುವ ಪ್ರಯತ್ನ. ಉದ್ಯೋಗಸ್ಥರು, ವ್ಯವಹಾರಸ್ಥರಿಗೆ ಶುಭ ಸೂಚನೆ. ಹಳೆಯದಾದ ಜಟಿಲ ಸಮಸ್ಯೆಗೆ ಪರಿಹಾರ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಗುರುಸಮಾನರ ಅಕಸ್ಮಾತ್‌ ಭೇಟಿ. ಸಂಗಾತಿಯ ಮನೋಗತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ಪರೀಕ್ಷಾ ತಯಾರಿಗೆ ಗಮನ. ಮಿಥುನ: ಪೂರ್ವಜರ ಸ್ಮರಣೆಯಿಂದ ಹಿತ. ಕುಟುಂಬದ ಕ್ಷೇಮದ ಕುರಿತು ಚಿಂತನೆ. ಜೀವನದಲ್ಲಿ ಹಿರಿಯರ ಆರೋಗ್ಯದತ್ತ ಗಮನವಿರಲಿ. ಉತ್ತರ ದಿಕ್ಕಿನಿಂದ ಶುಭ …

Read More »

ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.   ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …

Read More »

ಎಲ್ಲಾ ಮುಸ್ಲಿಂ ದೇಶಗಳೂ ಭಾರತದ ವಿರೋಧಿಗಳಲ್ಲ

ಚಿಕ್ಕೋಡಿ: ರಾಜ್ಯದ ಕೆಲವೆಡೆ ಈದ್ ಮಿಲಾದ್ (Eid Milad) ಮೆರವಣಿಗೆ ವೇಳೆ ಕಿಡಿಗೇಡಿಗಳು ಪ್ಯಾಲಿಸ್ತೇನ್ ಧ್ವಜ (Palestinian flag) ಹಾರಿಸಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿದ್ದರು. ಪಾಕಿಸ್ತಾನ, ಇರಾನ್ ಧ್ವಜವನ್ನೂ ಹಾರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಪ್ಯಾಲಿಸ್ತೇನ್ ಧ್ವಜ ಹಾರಾಟದ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ವಿರೋಧಿ ದೇಶದ ಧ್ವಜ ಹಾರಾಡಿದ್ರೆ ಕ್ರಮ ಕೈಗೊಳ್ಳಬಹುದು. ಆದರೆ ಎಲ್ಲಾ ಮುಸ್ಲಿಂ (Muslim) ಕಂಟ್ರಿಗಳೂ ಭಾರತ ದೇಶದ ವಿರೋಧಿಗಳಲ್ಲ. …

Read More »

ರಾಜ್ಯದಲ್ಲಿ ಅಕ್ರಮ ನೋಂದಣಿ, ತೆರಿಗೆ ವಂಚನೆಗೆ ಮಹತ್ವದ ಕ್ರಮ: ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮ ಜಾರಿ

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗೆಯೂ ಮಾಹಿತಿ ನೀಡಿದ ಅವರು, “ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ …

Read More »

ಅ.21ರಿಂದ ವಾರಾಂತ್ಯಗಳಲ್ಲೂ ‘ಉಪನೋಂದಣಿ ಕಚೇರಿ’ ಓಪನ್

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್.21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. …

Read More »

ಚಂದ್ರ ಬಾಬು ನಾಯಡು ಹೇಳಿಕೆಯಿಂದ ನಂದಿನಿ ತುಪ್ಪಕ್ಕೆ ಭಾರಿ ಡಿಮಾಂಡ್.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ತಿರುಪತಿ ಲಡ್ಡು ಬಗ್ಗೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ನೀಡುವ ಮೂಲಕ ದೇಶದಲ್ಲೇ ನಂದಿನಿ ತುಪ್ಪಕ್ಕೆ ಬಾರೀ ಬೇಡಿಕೆ ಬಂದಿದೆ ಎಂದು ಕೆಎಂಎಫ್‌ ಮಾಜಿ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅಧಿಕಾರವಧಿಯಲ್ಲಿ 4 ವರ್ಷದ ಹಿಂದೆ ಕೆಎಂಎಫ್‌ನ ನಂದಿನಿ ತುಪ್ಪ ದೇಶದ ದೊಡ್ಡ ದೇವಸ್ಥಾನ ತಿರುಪತಿ ಬಾಲಾಜಿ ಮಂದಿರದ ಲಡ್ಡು ಪ್ರಸಾದಕ್ಕೆ ಪೂರೈಕೆಯಾಗುತ್ತಿತ್ತು. ತಿರುಪತಿ ಬಾಲಾಜಿ ಮಂದಿರದ …

Read More »

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್

ಗೋಕಾಕ ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ ಪ್ರಕರಣ: 14 ಆರೋಪಿಗಳ ಆಸ್ತಿ ಜಪ್ತಿ : ಎಸ್ ಪಿ ಗುಳೇದ್ ಬೆಳಗಾವಿ: ಮಹಾಲಕ್ಷ್ಮೀ ಕೋ ಆಪ್ ರೇಟಿವ್ ಬ್ಯಾಂಕ್ ನ ಅವ್ಯವಹಾರಕ್ಕೆ ಸಂಬಂಧಿಸಿದಂತೆ 14 ಜನರ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ತಿಳಿಸಿದ ಅವರು, ಗೋಕಾಕ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಬ್ಯಾಂಕಿನಲ್ಲಿ 74.86 ಕೋಟಿ ಅವ್ಯವಹಾರ ನಡೆದಿರುವ …

Read More »