Breaking News

Yearly Archives: 2024

ಒಂದು ದೇಶ, ಒಂದು ಚುನಾವಣೆ ಸಮರ್ಥ ನಿರ್ಧಾರ: ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರವು ‘ಒಂದು ದೇಶ, ಒಂದು ಚುನಾವಣೆ’ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸಿದ್ದಾರೆ.   ಗುರುವಾರ ಪ್ರಕಟಣೆ ನೀಡಿರುವ ಅವರು, ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ …

Read More »

ಕಲಾವಿದರ ಮಾಸಾಶನ ₹3 ಸಾವಿರಕ್ಕೆ ಹೆಚ್ಚಳ: ಸಿದ್ದರಾಮಯ್ಯ ಭರವಸೆ

ಬೆಂಗಳೂರು: ‘ಸಂಕಷ್ಟದಲ್ಲಿರುವ ಕಲಾವಿದರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ಮುಂದಿನ ವರ್ಷದಿಂದ ₹ 3 ಸಾವಿರಕ್ಕೆ ಹೆಚ್ಚಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿ ನಗರದಲ್ಲಿ ಗುರುವಾರ ಹಮ್ಮಿಕೊಂಡ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2022-23ನೇ ಸಾಲಿನ, 2023-24ನೇ ಸಾಲಿನ ಹಾಗೂ 2024-25ನೇ ಸಾಲಿನ ಪ್ರಶಸ್ತಿ ವಿತರಿಸಿ, ಮಾತನಾಡಿದರು.   ‘ಸದ್ಯ ಪ್ರತಿ ತಿಂಗಳು ₹ 2 ಸಾವಿರ ಮಾಸಾಶನ ನೀಡಲಾಗುತ್ತಿದೆ. 12 ಸಾವಿರಕ್ಕೂ ಅಧಿಕ ಕಲಾವಿದರು ಮಾಸಾಶನ …

Read More »

ದರ್ವೇಶ ಸಂಸ್ಥೆಯ ₹500 ಕೋಟಿಗೂ ಅಧಿಕ ವಂಚನೆ ಕೇಸ್: ಆರೋಪಿಗಳ ಜಾಮೀನು ಅರ್ಜಿ ವಜಾ

ರಾಯಚೂರು: ಸಾರ್ವಜನಿಕರ ₹ 500 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ವೇಶ ಸಂಸ್ಥೆಯ ಪಾಲುದಾರರು ಹಾಗೂ ಏಜೆಂಟರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ವಜಾಗೊಳಿಸಿದೆ. ದರ್ವೇಶ ಸಂಸ್ಥೆಯ ಪಾಲುದಾರರಾದ ಮಹ್ಮದ್ ಹುಸೇನ್ ಸುಜಾ, ಸೈಯದ್ ವಾಸಿಂ, ಸೈಯದ್ ಮಿಸ್ಕಿನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಾಗೂ ನ್ಯಾಯಾಂಗ ಬಂಧನಲ್ಲಿರುವ ದರ್ವೇಶ ಕಂಪನಿ ಏಜೆಂಟರಾದ ಅಜರ್ ಪಾಷಾ, ಸೈಯದ್ ಮೋಸಿನ್, ಶೇಖ್ ಮುಜಾಮಿಲ್ …

Read More »

ನಿವೇಶನ ವಿವಾದ: ಎರಡು ಗುಂಪುಗಳ ನಡುವೆ ಗಲಾಟೆ; ಕೊಂಡಸಕೊಪ್ಪದಲ್ಲಿ ಪೊಲೀಸ್‌ ಕಾವಲು

ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಗುರುವಾರ ನಿವೇಶನ ವಿಚಾರಕ್ಕೆ ನಡೆದ ಜಗಳದಲ್ಲಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ. ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಮೂವರು ಸ್ನೇಹಿತರು ಚಿಕಿತ್ಸೆ ಪಡೆದು ಮರಳಿದ್ದಾರೆ. ಕೊಂಡಸಕೊಪ್ಪದವರಾದ ಪುಂಡಲೀಕ ಕುಡಚೇಕರ, ಭೀಮಾ ದೇಮನ್ನವರ, ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ ಆರೋಪಿಗಳು. ಈಗಾಗಲೇ …

Read More »

74.87 ಕೋಟಿ ವಂಚನೆ: 14 ಸಿಬ್ಬಂದಿ ವಿರುದ್ಧ ದೂರು

ಬೆಳಗಾವಿ: ‘ಗೋಕಾಕದ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆ ಆಗಿದೆ. ಬ್ಯಾಂಕ್‌ನ ವ್ಯವಸ್ಥಾಪಕ, ಗುಮಾಸ್ತ ಸೇರಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.   ‘ಪ್ರಕರಣ ಸಂಬಂಧ ಬ್ಯಾಂಕ್‌ನ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ದೂರು ದಾಖಲಿಸಿದ್ದಾರೆ. ದೊಡ್ಡ ಮೊತ್ತದ ಪ್ರಕರಣವಾದ್ದರಿಂದ ಇದನ್ನು ಸಿಐಡಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. …

Read More »

ಸತ್ತವರ ಹೆಸರಿನಲ್ಲಿನ ನೂರು ಕೋಟಿ ಆಸ್ತಿಯನ್ನು BSY ಕೈಯಲ್ಲಿ HDK ಡಿನೋಟಿಫೈ: ಕೃಷ್ಣ ಭೈರೇಗೌಡ ಗಂಭೀರ ಆರೋಪ

ಬೆಂಗಳೂರು: ಸತ್ತವರ ಹೆಸರಿನಲ್ಲಿ ನೂರು ಕೋಟಿ ಬೆಳೆಬಾಳುವ ಆಸ್ತಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಯಲ್ಲಿ ಡಿ ನೋಟಿಫೈ ಮಾಡಿಸಿದ ಹೆಚ್ ಡಿ ಕುಮಾರಸ್ವಾಮಿ ಎಂಬುದಾಗಿ ಸಚಿವ ಕೃಷ್ಣಭೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಕ್ರಮದಲ್ಲಿ ಕುಮಾರಸ್ವಾಮಿ-ಯಡಿಯೂರಪ್ಪ ಜಂಟಿಯಾಗಿ ಬಾಗಿಯಾಗಿದ್ದಾರೆ. ಕುಮಾರಸ್ವಾಮಿ ಆದೇಶ ಯಡಿಯೂರಪ್ಪ ಅವಧಿಯಲ್ಲಿ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ನೂರಾರು ಕೋಟಿ ಆಸ್ತಿ ಕುಮಾರಸ್ವಾಮಿ ಬಾಮೈದನ ಪಾಲಾಗಿದೆ ಎಂಬುದಾಗಿ ಆರೋಪಿಸಿದರು. ಬಡವರ ನಿವೇಶನಗಳಿಗೆ ಹಂಚಿಕೆಯಾಗಿದ್ದ …

Read More »

ಈ ಇಬ್ಬರು ರಾಜಕೀಯ ಎದುರಾಳಿಗೆ ಏಡ್ಸ್‌ ರೋಗಿಯ ರಕ್ತ ಇಂಜೆಕ್ಷನ್‌ ಮಾಡಲು ಮುನಿರತ್ನ ಷಡ್ಯಂತ್ರ?: ಏನಿದು ಆರೋಪ?

ಬೆಂಗಳೂರು, ಸೆಪ್ಟೆಂಬರ್‌ 19: 2023ರ ವಿಧಾನಸಭಾ ಚುಣಾವಣೆಯಲ್ಲಿ ರಾಜರಾಜೇಶ್ವರಿ ನಗರದ ಕ್ಷೇತ್ರ ತೀವ್ರ ಜಿದ್ದಾಜಿದ್ದಿನ ಕಣವಾಗಿತ್ತು. ರಾಜರಾಜೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಬಿಜೆಪಿ ಪಕ್ಷದಿಂದ ಮುನಿರತ್ನ ಸ್ಪರ್ಧೆ ನಡೆಸಿದ್ದು, ಕಡಿಮೆ ಅಂತರದಲ್ಲಿ ಮುನಿರತ್ನ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭಾ ಚುಣಾವಣೆಯ ಸಂದರ್ಭದಲ್ಲಿ ರಾಜಕೀಯ ಎದುರಾಳಿಯಾಗಿದ್ದ ಡಿ ಕೆ ಸುರೇಶ್‌ ಹಾಗೂ ಕುಸುಮಾ ಹನುಮಂತರಾಯಪ್ಪ ಅವರ ವಿರುದ್ಧ ಹೊಸ ಷಡ್ಯಂತ್ರವನ್ನ ರೂಪಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮುನಿರತ್ನರಿಂದ …

Read More »

ಮೈಸೂರಿಗೆ ಫಿಲ್ಮ್‌ ಸಿಟಿ ನಿರ್ಮಾಣದ ಬಿಗ್‌ ಅಪ್ಡೇಟ್ಸ್?

ಕನ್ನಡ ಚಿತ್ರರಂಗದ ಬಹುದಿನಗಳ ಕನಸು ಇದೀಗ ನನಸಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ಫಿಲ್ಮ್‌ ಸಿಟಿ ಬೇಕು ಎನ್ನುವುದು ದಶಕಗಳ ಕನಸು. ಮೈಸೂರಿನಲ್ಲಿ ಫಿಲ್ಮ್‌ ಸಿಟಿ ಪ್ರಾರಂಭವಾಗಲಿದೆ ಎಂದು ಹೇಳಲಾಗಿತ್ತಾದರೂ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ಕನ್ನಡ ಚಿತ್ರರಂಗದ ಚಿತ್ರೀರಕಣ ಉದ್ದೇಶದಿಂದ ನಿರ್ಮಾಣವಾಗುತ್ತಿರುವ ಫಿಲ್ಮ್‌ ಸಿಟಿಯ ಜಾಗಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೇ ಮಧ್ಯಪ್ರವೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ.   ಹಿಂದಿ ಹಾಗೂ ತೆಲುಗು ಚಿತ್ರರಂಗಗಳಿಗೆ ಇರುವ ಮಾದರಿಯಲ್ಲೇ …

Read More »

ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾಂಗ್ರೆಸ್‌‍ ಆಗ್ರಹ

ಬೆಂಗಳೂರು,ಸೆ.19- ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌‍ ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಮುನಿರತ್ನ ಕಾಮುಕನಾಗಿದ್ದು, ಅತ್ಯಾಚಾರಿ, ಹನಿಟ್ರ್ಯಾಪ್‌ನ ರೂವಾರಿಯಾಗಿದ್ದಾನೆ. ಗುತ್ತಿಗೆದಾರರನ್ನು ಶೋಷಣೆ ಮಾಡಿದ್ದು, ಹಣ ವಸೂಲಿ ಮಾಡಿದ್ದಾನೆ. ಗುತ್ತಿಗೆದಾರರ ಜೊತೆ ಸಂಭಾಷಣೆಯಲ್ಲಿ ಹೆಣ್ಣುಮಕ್ಕಳ ವಿಷಯವಾಗಿ, ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ …

Read More »

ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ FIRʼ

ಬೆಂಗಳೂರು,ಸೆಪ್ಟೆಂಬರ್‌ 19: ಬಿಜೆಪಿ ಸಂಸದರು ಮತ್ತು ಶಾಸಕರ ಮೇಲೆ ನಿರಂತರವಾಗಿ ಎಫ್‍ಐಆರ್‍ಗಳು ದಾಖಲಾಗುತ್ತಿವೆ. ಕರ್ನಾಟಕ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ; ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನ ಸಂಸದ ತೇಜಸ್ವಿ …

Read More »