Breaking News

Yearly Archives: 2024

ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!

ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು ಮಾಡಲಾಗಿದೆ. ಆಗಸ್ಟ್ 9ರಂದು ಕದಿರೇನಹಳ್ಳಿಯ ಸೀಮೆಂಟ್ ರಸ್ತೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರ …

Read More »

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕೋಡಿ: ಶಾಲಾ ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರ ತೋರಿಸುವುದು ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೋರ್ವನನ್ನು ಚಿಕ್ಕೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿಕ್ಕೋಡಿ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುವ ಕುರಿತು ವಿದ್ಯಾರ್ಥಿನಿಯರು ಅಳುತ್ತಾ ಮನೆಗೆ ಹೋದಾಗ ಬಾಲಕಿಗೆ ಪೋಷಕರು ಪ್ರಶ್ನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ಇತರ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ …

Read More »

ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ

ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್‌ ಜಾರಕಿಹೊಳಿ ಬೆಳಗಾವಿ: ಮುನಿರತ್ನನವರಿಗೆ ನಾವು ಬೈಯ್ಯುವಂತೆ ಹೇಳಿದ್ದೇವಾ? ಸಿಕ್ಕ ಸಿಕ್ಕ ಹಾಗೆ ಬಾಯಿಗೆ ಬಂದ ಹಾಗೇ ಬೈಯ್ಯವಂತೆ ಹೇಳಿದ್ವಾ? ಬೈಯ್ಯುವಂತೆ ಕಾಂಗ್ರೆಸ್ ನವರು, ಬಿಜೆಪಿಯವರು, ಜೆಡಿಎಸ್ ನವರು ಹೇಳಿದ್ರಾ? ತರಾತುರಿಯಲ್ಲಿ ನಾವು ಮಾಡಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರೆಸ್ಟ್ ಮಾಡಿದರೆ ಮಾಡಿದ್ದೀರಿ ಅಂತಾರೆ, ಮಾಡಿಲ್ಲ ಅಂದರೆ ಮಾಡಿಲ್ಲ ಎಂದು ಹೇಳುತ್ತಾರೆ …

Read More »

ಪ್ರವಾಸಿಗರಿಬ್ಬರಿಂದ ತಾಜ್​ ಮಹಲ್​ ಗಾರ್ಡನ್​ನಲ್ಲಿ ಮೂತ್ರ ವಿಸರ್ಜನೆ! ತನಿಖೆಗೆ ಆದೇಶ

ನವದೆಹಲಿ: ಜಗತ್ತಿನ ಏಳು ಅದ್ಭುತಗಳಲ್ಲಿ ಒಂದಾದ ಐತಿಹಾಸಿಕ ಸ್ಮಾರಕ ತಾಜ್ ಮಹಲ್ ಉದ್ಯಾನವನದಲ್ಲಿ ಇಬ್ಬರು ಪ್ರವಾಸಿಗರು ಮೂತ್ರ ವಿಸರ್ಜನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಭಾರತೀಯ ಪುರಾತತ್ವ ಇಲಾಖೆ ತನಿಖೆಗೆ ಆದೇಶಿಸಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ವೈರಲ್​ ಆಗುತ್ತಿರುವ ವಿಡಿಯೋವನ್ನು ಯಾವಾಗ ಸೆರೆಹಿಡಿಯಲಾಗಿದೆ ಮತ್ತು ಯಾರು ಅದನ್ನು ವೈರಲ್ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಸಲಾಗುತ್ತಿದೆ. ವೈರಲ್​ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಉದ್ಯಾನಗಳಲ್ಲಿ ಭದ್ರತಾ ಸಿಬ್ಬಂದಿ …

Read More »

ಮುನಿರತ್ನಗೆ ಜಾಮೀನು ನೀಡದಿರಲು ಮನವಿ

ಮಂಡ್ಯ: ‘ಶಾಸಕ ಮುನಿರತ್ನ ಅವರು ದಲಿತ ನಿಂದನೆ ಮಾಡಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿಸಿದ್ದು, ಜಾಮೀನು ನೀಡಬಾರದು. ಶಾಸಕ ಸ್ಥಾನದಿಂದಲೂ ವಜಾ ಮಾಡಬೇಕು ಎಂದು ನಗರದ ಎಸ್ಪಿ ಕಚೇರಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಯಶ್ವಂತ್‌ ಮೂಲಕ ಭಾನುವಾರ ಕಾಂಗ್ರೆಸ್‌ ಸಮಿತಿ(ಪರಿಶಿಷ್ಟ ಜಾತಿ ವಿಭಾಗ) ಕಾರ್ಯಕರ್ತರು ಸರ್ಕಾರಕ್ಕೆ ಮನವಿ ನೀಡಿದರು.   ದಲಿತ(ಹೊಲೆಯ) ಮತ್ತು ಒಕ್ಕಲಿಗ ಜಾತಿ ಪದಗಳನ್ನು ಬಳಿಸಿ ಮುನಿರತ್ನ …

Read More »

ಮಕ್ಕಳಿಗೆ ‘ರಾಷ್ಟ್ರಪ್ರೇಮ’ದ ಪಾಠ

ಮೂಡಲಗಿ: ತಾಲ್ಲೂಕಿನ ಯಾದವಾಡದ ಸುಧೀಂದ್ರ ಇಟ್ನಾಳ ಭಾರತೀಯ ಸೇನೆಯಲ್ಲಿ 34 ವರ್ಷ ಸೇವೆ ಸಲ್ಲಿಸಿ, ಬ್ರಿಗೇಡಿಯರ್‌ ಆಗಿ ನಿವೃತ್ತಿ ಹೊಂದಿದ್ದಾರೆ. ಆದರೆ, ನಿವೃತ್ತಿ ನಂತರ ಮನೆಯಲ್ಲಿ ಕೈಕಟ್ಟಿ ಕುಳಿತಿಲ್ಲ. ಬದಲಿಗೆ ಸ್ವಯಂ ಪ್ರೇರಣೆಯಿಂದ ಶಾಲೆ-ಕಾಲೇಜುಗಳಿಗೆ ಹೋಗಿ, ಶಿಕ್ಷಕರು ಹಾಗೂ  ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ರಾಷ್ಟ್ರಾಭಿಮಾನ ಮತ್ತು ಬದುಕಿನಲ್ಲಿ ಶಿಸ್ತು ಮೂಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯುತ್ತಿಲ್ಲ. ನಿಸ್ವಾರ್ಥ ಮನೋಭಾವದಿಂದ ಉಚಿತವಾಗಿ ಇಂಥದ್ದೊಂದು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಕರ್ನಾಟಕ ಮಾತ್ರವಲ್ಲದೆ; …

Read More »

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: 145 ಕಿ.ಮೀ ಮಾನವ ಸರಪಳಿ

ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ‌.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗುತ್ತಿದೆ.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …

Read More »

ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ’ ಕಾರ್ಯಕ್ರಮಕ್ಕೆ `CM’ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ …

Read More »

ಇಂದು `ರಾಷ್ಟ್ರೀಯ ಇಂಜಿನಿಯರ್ಸ್ ಡೇ’ : ಇತಿಹಾಸ, ಮಹತ್ವ ತಿಳಿಯಿರಿ |

ನವದೆಹಲಿ : ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್‌ಗಳ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ದಿನವು ಸಮಾಜಕ್ಕೆ ಇಂಜಿನಿಯರ್‌ಗಳ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುತ್ತದೆ ಮತ್ತು ಗೌರವಿಸುತ್ತದೆ. ಇದು ಅವರ ವಿಶಿಷ್ಟ ಸಾಮರ್ಥ್ಯಗಳನ್ನು ಗುರುತಿಸುವುದು ಮಾತ್ರವಲ್ಲದೆ ನಾವು ವಾಸಿಸುವ ಜಗತ್ತನ್ನು ರೂಪಿಸುವಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸುತ್ತದೆ. ಈ ದಿನವು ವಿಶೇಷವಾಗಿ ಮಹತ್ವದ್ದಾಗಿದೆ ಏಕೆಂದರೆ ಇದು ಭಾರತದ ಅತ್ಯಂತ ಪ್ರಸಿದ್ಧ ಇಂಜಿನಿಯರ್ ಮತ್ತು ದಾರ್ಶನಿಕರಲ್ಲಿ ಒಬ್ಬರಾದ ಸರ್ …

Read More »

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಚಿಕ್ಕೋಡಿ: ‘ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಕಾಂಗ್ರೆಸ್ ಸರ್ಕಾರ ಮತೀಯ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಮತ್ತೊಂದು ತಾಲಿಬಾನ್, ಬಾಂಗ್ಲಾದೇಶ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಕಿಡಿಕಾರಿದರು.   ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ …

Read More »