Breaking News

Yearly Archives: 2024

ಇನ್ನೆರಡು ದಿನದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ; ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಇನ್ನೆರಡು ದಿನಗಳಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಟ ದರ್ಶನ್ ತೂಗುದೀಪ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು. ತನಿಖೆ ಮುಕ್ತಾಯವಾಗಿದ್ದು, ಕೆಲವು ವರದಿಗಳು ಬರಬೇಕಿದೆ ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ …

Read More »

ಮುಡಾ ಹಗರಣ ಬಯಲಿಗೆ ಎಳೆದಿದ್ದ `RTI’ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ!

ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.   ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ …

Read More »

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ:C.M.

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌.   ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ …

Read More »

ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ

ಬೆಂಗಳೂರು,ಸೆಪ್ಟೆಂಬರ್‌ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್‌ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.   ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …

Read More »

ಕಲಬುರಗಿ | ಮೂರು ಸೇತುವೆ ಮುಳುಗಡೆ: ಹಲವೆಡೆ ಸಂಪರ್ಕ ಕಡಿತ

ಕಾಳಗಿ: ಕಳೆದ ಮೂರುದಿನಗಳಿಂದ ತಾಲ್ಲೂಕಿನೆಲ್ಲೆಡೆ ಸುರಿಯುತ್ತಿರುವ ಮಳೆ ಮತ್ತು ಹೇರೂರ ಬೆಣ್ಣೆತೊರಾ ಜಲಾಶಯದ ನೀರಿನ ಪ್ರವಾಹಕ್ಕೆ ಮೂರು ಸೇತುವೆಗಳು ಮುಳುಗಡೆಯಾಗಿ ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಮಲಘಾಣ-ಕಾಳಗಿ, ಕಲಗುರ್ತಿ-ಡೊಣ್ಣೂರ ಮತ್ತು ತೆಂಗಳಿ-ತೆಂಗಳಿ ಕ್ರಾಸ್ ನಡುವಿನ ರಸ್ತೆ ಸಂಪರ್ಕದ ಹಳ್ಳದ ಸೇತುವೆಗಳು ನೀರಿನ ಪ್ರವಾಹಕ್ಕೆ ಭಾನುವಾರದಿಂದಲೇ ಮುಳುಗಿ ಹೋಗಿವೆ. ಪರಿಣಾಮ ಮಲಘಾಣ, ಕಲಗುರ್ತಿ, ಚಿತ್ತಾಪುರ ರಸ್ತೆ ಮಾರ್ಗದ ಸಂಪರ್ಕ ಕಡಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಕಣಸೂರ, ಹೆಬ್ಬಾಳ, ಶೆಳ್ಳಗಿ, ಹೇರೂರ, ಮಲಘಾಣ, ಡೊಣ್ಣೂರ, …

Read More »

ಕರ್ನಾಟಕ ಸೇರಿದಂತೆ ಭಾರತದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ

ಕರ್ನಾಟಕ ಸೇರಿದಂತೆ ಭಾರತದ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಇಂದು ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ವರ್ಷ ಮುಂಗಾರು ಮಳೆಯು ದೇಶದ ಅನೇಕ ರಾಜ್ಯಗಳಲ್ಲಿ ವಿನಾಶವನ್ನು ಉಂಟುಮಾಡಿದೆ. ಅಸ್ಸಾಂ ಮತ್ತು ಗುಜರಾತ್ ನಂತರ ದಕ್ಷಿಣ ಭಾರತದ ಹಲವು ರಾಜ್ಯಗಳು ಪ್ರವಾಹದಲ್ಲಿ ಮುಳುಗಿವೆ. ಆಂಧ್ರ ಹಾಗೂ ತೆಲಂಗಾಣ 2 ರಾಜ್ಯಗಳಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. …

Read More »

BMTC ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಸಿಕ್ಕಿಬಿದ್ದ ಅಭ್ಯರ್ಥಿ

ಧಾರವಾಡ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ವಾಹಕ (ಬಿಎಂಟಿಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ನಗರದ ಬಾಶಲ್‌ ಮಿಷನ್‌ ವಿದ್ಯಾಲಯ ಕೇಂದ್ರದಲ್ಲಿ ಅಭ್ಯರ್ಥಿ ಸದಾಶಿವ ಸುಣದೊಳ್ಳಿ ನಕಲು ಮಾಡಿ ಸಿಕ್ಕಿಬಿದ್ದಿದ್ದಾರೆ. ಬೆಳಿಗ್ಗೆ 10.30 ರಿಂದ 1230ರವರೆಗೆ ನಡೆದ ಮೊದಲ ಅವಧಿಯ ಪತ್ರಿಕೆಯಲ್ಲಿ ಅಕ್ರಮ ಮಾಡಿ ಸಿಕ್ಕಿಬಿದ್ದಿದ್ದಾರೆ. ಸದಾಶಿವ ಅವರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದವರು. ‘ಅಭ್ಯರ್ಥಿಯು ವಾಂತಿ ಮಾಡಲು ಶೌಚಾಲಯಕ್ಕೆ ಹೋಗುವುದಾಗಿ ಕೊಠಡಿ ಮೇಲ್ವಿಚಾರಕರಿಗೆ ತಿಳಿಸಿ ಹೋಗಿ …

Read More »

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಜಮೀನು ಮಾರಾಟ: ಇಬ್ಬರ ಬಂಧನ

ನವಲಗುಂದ: ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಉದಯ ಶ್ರೀಧರ ಅವರ 5 ಎಕರೆ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿದ ಆರೋಪದ ಮೇಲೆ ನವಲಗುಂದ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಧಾರವಾಡದ ರಾಜೀವ್‌ ಗಾಂಧಿ ನಗರದ ಪರಶುರಾಮ ರಂಗರಾವ ನಾಡಕರಣಿ ಹಾಗೂ ಮೊರಬದ ದಸ್ತು ಬರಹಗಾರ ಎಂ.ಪಿ.ಅಜಗೊಂಡ ಬಂಧಿತರು.   ಆರೋಪಿಗಳು ಉದಯ ಶ್ರೀಧರ ತಂದೆ ನಾರಾಯಣ ಮುಳಗುಂದ ಹೆಸರಿನ ನಕಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿ ಗುಮ್ಮಗೊಳ ಗ್ರಾಮದ ಸರ್ವೆ ಸಂಖ್ಯೆ 255/8ರಲ್ಲಿನ …

Read More »

ಜಾನುವಾರು ಗಣತಿಗೆ ಸುಧಾರಿತ ತಂತ್ರಜ್ಞಾನ

ಬೆಳಗಾವಿ: ದೋಷರಹಿತ ಜಾನುವಾರು ಗಣತಿಗಾಗಿ ಕೇಂದ್ರ ಸರ್ಕಾರ ‘ಲೈವ್‌ಸ್ಟಾಕ್‌ ಸೆನ್ಸಸ್‌’ ಎಂಬ ‘ಆಯ‍ಪ್‌’ ಸಿದ್ಧಪಡಿಸಿದೆ. ಅದರ ನೆರವಿನಿಂದ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ರಾಜ್ಯದಲ್ಲಿ ಮೂರು ಹಂತದ ಜಾನುವಾರು ಗಣತಿ ನಡೆಯಲಿದೆ. ದೇಶದ ಜಿಡಿಪಿಯಲ್ಲಿ ಶೇ 4.1ರಷ್ಟು ಜಾನುವಾರುಗಳ ಕೊಡುಗೆ ಇದೆ. ಹಾಲು ಉತ್ಪಾದನೆಯಲ್ಲಿ ದೇಶ ಮೊದಲ ಸ್ಥಾನದಲ್ಲಿದೆ. ಇದರ ಮಹತ್ವ ಅರಿತ ಕೇಂದ್ರ ಸರ್ಕಾರ ನಿಖರ ಗಣತಿಗೆ ಸುಧಾರಿತ ತಂತ್ರಜ್ಞಾನ ಬಳಸುತ್ತಿದೆ. 1919ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಜಾನುವಾರು ಗಣತಿಯಂತೆ ಈವರೆಗೆ …

Read More »

ಗಣೇಶೋತ್ಸವದಲ್ಲಿ ‘ವಿಘ್ನ ನಿವಾರಕ’ನನ್ನು ಸ್ವಾಗತಿಸಲು ಜನರಷ್ಟೇ ಅಲ್ಲ; ಗುಂಡಿಗಳೂ ಸಜ್ಜಾಗಿವೆ.

ಬೆಳಗಾವಿ: ನಗರದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ‘ವಿಘ್ನ ನಿವಾರಕ’ನನ್ನು ಸ್ವಾಗತಿಸಲು ಜನರಷ್ಟೇ ಅಲ್ಲ; ಗುಂಡಿಗಳೂ ಸಜ್ಜಾಗಿವೆ. ಮುಂಬೈ, ಪುಣೆ ಬಿಟ್ಟರೆ ಸಂಭ್ರಮದ ಚೌತಿ ವೀಕ್ಷಣೆಗೆ ಜನರು ಮುಖಮಾಡುವುದೇ ಬೆಳಗಾವಿಯತ್ತ. ಗಣೇಶೋತ್ಸವದಲ್ಲಿ ಇಲ್ಲಿ 11 ದಿನಗಳ ಕಾಲ ಸಡಗರವೇ ಮೈದಳೆಯುತ್ತದೆ. ನಗರ ಮತ್ತು ಉಪನಗರ ವ್ಯಾಪ್ತಿಯಲ್ಲಿ 370ಕ್ಕೂ ಅಧಿಕ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಯವರು ಮೊದಲ ದಿನದಂದು ಮೆರವಣಿಗೆಯಲ್ಲಿ ಗಣೇಶನ ಮೂರ್ತಿ ತಂದು ಪ್ರತಿಷ್ಠಾಪಿಸುತ್ತಾರೆ. ವಿಸರ್ಜನಾ ಮೆರವಣಿಗೆಯೂ …

Read More »