Breaking News

Yearly Archives: 2024

ಬೆಳಗಾವಿ ಪಾಲಿಕೆ ಕಂಗಾಲು- ಅನುದಾನಕ್ಕಾಗಿ ಬೆಂಗಳೂರಿಗೆ ಸದಸ್ಯನ ಸೈಕಲ್‌ ಸವಾರಿ

ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಅನುದಾನ ಇಲ್ಲದೇ ಬೆಳಗಾವಿ ನಗರದ ಅಭಿವೃದ್ಧಿ ಸಂಪೂರ್ಣ ಮರೀಚಿಕೆ ಆಗಿದ್ದು, ರಾಜ್ಯ ಸರ್ಕಾರ ಅನುದಾನ ನೀಡಿ ಗಡಿ ಭಾಗ ಬೆಳಗಾವಿ ಅಭಿವೃದ್ಧಿಯತ್ತ ಗಮನಹರಿಸುವಂತೆ ಆಗ್ರಹಿಸಿ ಪಾಲಿಕೆ ಪಕ್ಷೇತರ ಸದಸ್ಯ ಶಂಕರ ಪಾಟೀಲ ಸೈಕಲ್‌ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲು ನಿರ್ಧರಿಸಿದ್ದಾರೆ. ಸದ್ಯ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಾಕಿ ಉಳಿದಿರುವ 9.30 ಕೋಟಿ ರೂ. ಅನುದಾನದ ಹಂಚಿಕೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಜಟಾಪಟಿ ಶುರುವಾಗಿದ್ದು, …

Read More »

ಜೈಲಲ್ಲಿರುವ ದರ್ಶನ್‌ ಮತ್ತೊಂದು ಫೋಟೋ ಲೀಕ್; ನಿನ್ನೆ ಕೈಲಿ ಸಿಗ್ರೇಟ್​ ಇಂದು ಮೊಬೈಲ್

ಬೆಂಗಳೂರು:​ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ಮೂಲವ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಸಹಿಸಿದ್ದಾನೆ ಎಂದು ಸ್ಯಾಂಡಲ್​ವುಡ್ ನಟ ದರ್ಶನ್ ಆತನನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪದಲ್ಲಿ ಡಿ ಗ್ಯಾಂಗ್​ ಜೈಲಿನಲ್ಲಿದೆ. ಈ ಪ್ರಕರಣ ತನಿಕೆ ಹಂತದಲ್ಲಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವಾಗ ಈಗ ಕೆಲವು ಫೋಟೋ ಹಾಗೂ ವಿಡಿಯೋಗಳು ಮತ್ತೊಂದು ಹಂತದಲ್ಲಿ ಸುದ್ದಿ ಮಾಡುತ್ತಿವೆ. ನಿನ್ನೆ ಒಂದು ಫೋಟೋ ವಿಡಿಯೋ ಆದ್ರೆ ಇಂದೂ ಒಂದು ಫೋಟೋ ವೈರಲ್​​ ಆಗಿದೆ. ಕೊಲೆ ಪ್ರಕರಣದಲ್ಲಿ …

Read More »

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ಪ್ರಕ್ರಿಯೆ ಪೂರ್ಣಗೊಳ್ಳಲಿದೆ.   ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ …

Read More »

ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಂಚನೆ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ. ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ …

Read More »

ರಾಜ್ಯಾದ್ಯಂತ ‘ ಶ್ರೀಕೃಷ್ಣ ಜನ್ಮಾಷ್ಟಮಿ’ ಆಚರಣೆ

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ …

Read More »

ಬೆಳಗಾವಿ: ‘ಚತುರ್ಥಿಗೆ ಗಣೇಶ ಮೂರ್ತಿಗಳ ಸಿದ್ಧತೆ

ಬೆಳಗಾವಿ: ‘ವಿಘ್ನ ನಿವಾರಕ’ ಗಣೇಶನ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಒಂದೆಡೆ ಅದ್ದೂರಿಯಾಗಿ ‘ಚೌತಿ’ ಆಚರಣೆಗೆ ಜನರು ತಯಾರಿ ನಡೆಸಿದ್ದರೆ, ಮತ್ತೊಂದೆಡೆ ಮೂರ್ತಿಕಾರರು ತಾವು ಸಿದ್ಧಪಡಿಸಿದ ಮೂರ್ತಿಗಳಿಗೆ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ‘ಪ್ಲಾಸ್ಟಿಕ್‌ ಆಫ್‌ ಪ್ಯಾರೀಸ್‌(ಪಿಒಪಿ)ನಿಂದ ತಯಾರಿಸಿದ ಗಣೇಶನ ಮೂರ್ತಿ ನಿಷೇಧಿಸಲಾಗುವುದು’ ಎನ್ನುವ ಈ ಸಲವೂ ಕಡತಕ್ಕೇ ಸೀಮಿತವಾಗಿದೆ. ಹಲವು ಮೂರ್ತಿಕಾರರು ನಿಯಮ ಗಾಳಿಗೆ ತೂರಿ, ಇಂಥ ಮೂರ್ತಿ ತಯಾರಿಕೆಯಲ್ಲಿ ನಿರತವಾಗಿದ್ದಾರೆ. ಜತೆಗೆ, ಮಹಾರಾಷ್ಟ್ರದಿಂದಲೂ ಅಪಾರ ಪ್ರಮಾಣದಲ್ಲಿ ಪಿಒಪಿ ಮೂರ್ತಿಗಳು ಬೆಳಗಾವಿ …

Read More »

ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನ: ಆರು ನಿರ್ಣಯಗಳ ಅಂಗೀಕಾರ

ಬೆಳಗಾವಿ: ಇಲ್ಲಿ ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಕನ್ನಡ ವೈದ್ಯ ಬರಹಗಾರರ ರಾಜ್ಯಮಟ್ಟದ 5ನೇ ಸಮ್ಮೇಳನದಲ್ಲಿ ಭಾನುವಾರ ಆರು ನಿರ್ಣಯಗಳ ಅಂಗೀಕರಿಸಲಾಯಿತು. ‘ಕನ್ನಡ ಸಂಘ ಮತ್ತು ಕನ್ನಡ ಬಳಗಗಳ ಮೂಲಕ ಕನ್ನಡ ವೈದ್ಯಕೀಯ ಸಾಹಿತ್ಯದ ಬೆಳವಣಿಗೆಗೆ ಕ್ರಮ ವಹಿಸಬೇಕು. ವೈದ್ಯರು ರಚಿಸಿದ ಕಥೆಗಳನ್ನು ಆಹ್ವಾನಿಸಿ, ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಿಸಬೇಕು. ವೈದ್ಯಕೀಯ ಸಾಹಿತ್ಯಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಲು ಪ್ರಸಾರಾಂಗ ಸ್ಥಾಪಿಸಬೇಕು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳ ಪ್ರಸಾರಾಂಗಗಳ …

Read More »

ಸದ್ದಿಲ್ಲದೆ ಆಪರೇಷನ್‌ ಕಮಲ?ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ರೂ. ಆಫರ್‌? ಗಂಭೀರ ಆರೋಪ

ಒಂದೆಡೆ ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿವಯವರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಉರುಳಿಸಲು ಕಸರತ್ತು ನಡೆಸುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸದ್ದಿಲ್ಲದೆ ಆಪರೇಷನ್‌ ಕಮಲ ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಶಾಸಕರಾದ ಗಣಿಗ ರವಿ ಈ ರೀತಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದು, ಕಾಂಗ್ರೆಸ್‌ ಶಾಸಕರನ್ನು ಸೆಳೆಯಲು ಬಿಜೆಪಿಯವರು ಬರೋಬ್ಬರಿ 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಈ ಬಗ್ಗೆ ಇಂದು …

Read More »

ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ

ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ದಡ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರ “ವಿಶ್ವಗುರು ಶ್ರೀ ಬಸವಣ್ಣನವರಿಗೆ” “ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ಪ್ರಯುಕ್ತ ಸೆ. 5 ರಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಯಮನಮರಡಿಯ …

Read More »

ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು

ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ. 31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ …

Read More »