ಗಾಂಧಿನಗರ: ಗುಜರಾತ್‌ನ ಭುಜ್ ನಗರದ ಹೊರವಲಯದಲ್ಲಿರುವ ಮಾಧಾಪರ್ ಏಷ್ಯಾದಲ್ಲೇ ಅತ್ಯಂತ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. 2011ರಲ್ಲಿ 17 ಸಾವಿರವಿದ್ದ ಈ ಗ್ರಾಮದ ಒಟ್ಟು ಜನಸಂಖ್ಯೆ ಈಗ 32 ಸಾವಿರ ಎಂದು ಅಂದಾಜಿಸಲಾಗಿದೆ. ಬ್ಯಾಂಕ್‌ನಲ್ಲಿರುವ ಗ್ರಾಮಸ್ಥರ ಒಟ್ಟು ಹೂಡಿಕೆಯು ₹7 ಸಾವಿರ ಕೋಟಿಯಷ್ಟಿದೆ. ಇದರಲ್ಲಿ ವಿದೇಶದಲ್ಲಿರುವ ಅನಿವಾಸಿ ಭಾರತೀಯರ ಕೊಡುಗೆಯೇ ದೊಡ್ಡದು. ಪ್ರತಿ ವರ್ಷ ಇವರು ಕೋಟಿಗಟ್ಟಲೆ ಹಣವನ್ನು ಈ ಗ್ರಾಮದಲ್ಲಿರುವ ಬ್ಯಾಂಕ್‌ನಲ್ಲಿ ಇರಿಸುತ್ತಿದ್ದಾರೆ. ಮಾಧಾಪರ್‌ದಲ್ಲಿ …
Read More »Yearly Archives: 2024
ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ | ರಾಜಕೀಯಗೊಳಿಸಬೇಡಿ: ಸುಪ್ರೀಂ ಕೋರ್ಟ್
ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿರುವ ಸುಪ್ರೀಂ ಕೋರ್ಟ್, ಕಾನೂನು ತನ್ನ ಕೆಲಸ ಮಾಡಲಿದೆ ಎಂದು ಹೇಳಿದೆ. ಕಾನೂನು ತನ್ನ ಕೆಲಸ ಮಾಡಲಿದೆ ಎಂಬುದನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕು ಎಂದು ಸಿಬಿಐ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಪಶ್ಚಿಮ ಬಂಗಾಳ ಸರ್ಕಾರದ …
Read More »ಅತಿಯಾದ ಮಳೆಯಿಂದ ಬೆಳೆಗೆ ರೋಗ ಬಾಧೆ’
ರಾಣೆಬೆನ್ನೂರು: ಅತೀ ಹೆಚ್ಚು ಮಳೆಯಾದ ಸಂದರ್ಭದಲ್ಲಿ ಮಣ್ಣಿನಲ್ಲಿ ನೀರಿನ ಜೊತೆ ಪೋಷಕಾಂಶಗಳು ಕೊಚ್ಚಿಕೊಂಡು ಹೋಗುತ್ತವೆ. ಆಗ ಸಸ್ಯಗಳಲ್ಲಿ ಪೋಷಕಾಂಶಗಳ ಕೊರತೆ ಹೆಚ್ಚಾಗಿ ಬೆಳೆಗಳು ಕೀಟ ಹಾಗೂ ರೋಗಕ್ಕೆ ತುತ್ತಾಗುತ್ತದೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ರಶ್ಮಿ ಸಿ.ಎಂ. ಹೇಳಿದರು. ತಾಲ್ಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಿಂದ ನಿಕ್ರಾ ಯೋಜನೆ ಅಡಿಯಲ್ಲಿ ಗುರುವಾರ ಮಣ್ಣು ಹಾಗೂ ನೀರಿನ ಸಂರಕ್ಷಣಾ ಕ್ರಮಗಳ ಕುರಿತು ಹೊರ …
Read More »ದೇವರಹಿಪ್ಪರಗಿ | ಮಳೆಗೆ ಶಾಲಾ ಆವರಣ
ದೇವರಹಿಪ್ಪರಗಿ: ತಾಲ್ಲೂಕಿನ ಕಡ್ಲೇವಾಡ ಗ್ರಾಮದ ಪಿಸಿಎಚ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣ ಬುಧವಾರ ಸುರಿದ ಮಳೆಯ ನೀರಿನಿಂದ ಆವೃತವಾಗಿದ್ದು, ತರಗತಿ, ಪಠ್ಯ ಚಟುವಟಿಕೆಗಳಿಗೆ ತೊಂದರೆಯಾಯಿತು. ನಾಲ್ಕು ಕೊಠಡಿಗಳ ಚಾವಣಿಯಿಂದ ನೀರು ಸೋರುತ್ತಿದ್ದರಿಂದ ಪಾಠಗಳು ನಡೆಯದಂತಾದವು. ಶಿಕ್ಷಕರು ಮಕ್ಕಳೊಂದಿಗೆ ಸೇರಿ ಆವರಣದ ನೀರು ಖಾಲಿ ಮಾಡಲು ಹರಸಾಹಸಪಟ್ಟರು. ಸಮಸ್ಯೆ ಕುರಿತಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ರತಿವರ್ಷ ಮಳೆಗಾಲದಲ್ಲಿ ಮಕ್ಕಳು ಈ …
Read More »ರಾಘವೇಂದ್ರಸ್ವಾಮಿ ಆರಾಧನಾ ಮಹೋತ್ಸವ
ಬಾಗೇಪಲ್ಲಿ: ಪಟ್ಟಣದ ಗುರು ರಾಘವೇಂದ್ರಸ್ವಾಮಿ ಮಠದಲ್ಲಿ ರಾಘವೇಂದ್ರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ರಾಘವೇಂದ್ರಸ್ವಾಮಿಯ 353ನೇ ಆರಾಧನ ಮಹೋತ್ಸವ ಮೂರು ದಿನಗಳ ಕಾಲ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಿಂದ ನಡೆಯಿತು. ಪಟ್ಟಣದ ಮುಖ್ಯರಸ್ತೆಯಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ತಳಿರು ತೋರಣಗಳಿಂದ ಹಾಗೂ ವಿದ್ಯೂತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಆರಾಧನಾ ಮಹೋತ್ಸವದ ಅಂಗವಾಗಿ ರಾಘವೇಂದ್ರಸ್ವಾಮಿ ಬೃಂದಾವನಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಯಿತು. ರಾಘವೇಂದ್ರಸ್ವಾಮಿ ಮಠದ ಸುತ್ತ ಪ್ರಾಕಾರ ರಥೋತ್ಸವ, ತೊಟ್ಟಿಲಸೇವೆ, ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ …
Read More »ಮಳೆಗೆ ಕೊಚ್ಚಿಹೋದ ಬಿ.ಯದ್ಲಾಪುರು ರಸ್ತೆ
ರಾಯಚೂರು: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ …
Read More »ರಾಜ್ಯಕ್ಕೆ ಅಕ್ಕಿ ಪೂರೈಸಲು ಕೇಂದ್ರದ ಒಪ್ಪಿಗೆ
ಬೆಂಗಳೂರು:ರಾಜ್ಯಕ್ಕೆ ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು 2025ರ ಮಾರ್ಚ್ವರೆಗೆ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಬಿಪಿಎಲ್ ಕಾರ್ಡ್ನ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರುವ ಕಾಲ ಸನ್ನೀಹಿತವಾಗಿದೆ. ಆಹಾರ ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ ( ಎಫ್ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶ್ರೀದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ …
Read More »ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ‘ಸಿದ್ದರಾಮಯ್ಯ’ ಬೆನ್ನಿಗೆ ನಿಂತಿದ್ದೇವೆ: DKS
ಬೆಂಗಳೂರು : “ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಲಾಯಿತು ಹಾಗೂ ಎಲ್ಲಾ ಶಾಸಕರು ಸರ್ವಾನುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಕ್ಕೆ ನಿಲ್ಲುವ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಾಥಮಿಕ ತನಿಖೆ ನಡೆಯದೇ ಮುಖ್ಯಮಂತ್ರಿಗಳ ವಿರುದ್ಧ ಸೆಕ್ಷನ್ 17 (ಎ) ಅಡಿಯಲ್ಲಿ …
Read More »ಮುಂದಿನ 4 ದಿನ ಕರಾವಳಿ, ಉ.ಕ.ದಲ್ಲಿ ಮಳೆ
ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರದಲ್ಲಿ ಆ.23ರಂದು …
Read More »ವೈದ್ಯಕೀಯ ಕೇಸ್ ಅಂತೇಳಿ ಅಕ್ರಮವಾಗಿ 46 ಬಿಪಿಎಲ್ ಕಾರ್ಡ್ ಕೊಟ್ಟ ಆಹಾರ ಶಿರಸ್ತುದಾರ
ಬೆಂಗಳೂರು:ಹೊಸ ಕಾರ್ಡ್ಗಾಗಿ ಅರ್ಜಿದಾರರು 3 ವರ್ಷದಿಂದ ಜಾತಕಪಕ್ಷಿಯಂತೆ ಕಾಯುತ್ತಿರುವ ನಡುವೆಯೂ ಅರ್ಹತೆ ಹೊಂದಿಲ್ಲದ 46 ಮಂದಿಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಮಂಜೂರು ಮಾಡಿರುವುದು ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ. ತಿಮ್ಮಯ್ಯ ಎಂಬುವರು, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 ಬಿಪಿಎಲ್ ಚೀಟಿ ಕೊಟ್ಟಿರುವುದು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಆಹಾರ ಇಲಾಖೆ ಆಯುಕ್ತರಿಗೆ ಕೊಟ್ಟಿರುವ ವರದಿಯಲ್ಲಿ …
Read More »