Breaking News

Yearly Archives: 2024

ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ ‘ಕುರ್ಚಿ’ರಾಜಕೀಯ ಆರಂಭ?

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಬಗ್ಗೆ ನಿರ್ಣಾಯಕ ಪ್ರಶ್ನೆ ಎದ್ದಿದೆ.   ಈ ಬೆಳವಣಿಗೆಗೆ ಪ್ರತಿಯಾಗಿ, ಕಾಂಗ್ರೆಸ್‌ ಪಕ್ಷದೊಳಗೆ ಆಂತರಿಕ ಬೆಳವಣಿಗೆಗಳು ಮತ್ತೊಂದೆಡೆ ನಡೆಯುತ್ತಿದೆ. …

Read More »

ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಇಳಿಕೆ!

ನವದೆಹಲಿ : ಮನೆ ಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಪ್ರಸ್ತುತ, ದೇಶದಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ಬಾರ್ ಗಳ ಬೆಲೆಗಳು ಕುಸಿಯುತ್ತಿವೆ. ಹೌದು, ದೇಶದಲ್ಲಿ ಸಿಮೆಂಟ್ ನ ಮಾರುಕಟ್ಟೆ ಬೆಲೆಯನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯಾದ ಐಸಿಆರ್ ಎ ವರದಿ ಮಾಡಿದ್ದು, ಮನೆ ನಿರ್ಮಾಣದಲ್ಲಿ ಬಳಸುವ ಸಿಮೆಂಟ್‌ ಹಾಗೂ ಕಬ್ಬಿಣದ ಎರಡೂ ವಸ್ತುಗಳ ಬೆಲೆಗಳು ಕುಸಿದಿವೆ. ಇತ್ತೀಚಿನ ತಿಂಗಳುಗಳಲ್ಲಿ ಅವುಗಳ ಬೆಲೆಗಳಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಇಂದು ಬಾರ್ ಮತ್ತು ಸಿಮೆಂಟ್ ನ …

Read More »

ಸಿಲಿಕಾನ್ ಸಿಟಿ ‘ಕ್ರೈಮ್ ಸಿಟಿ’ ಆಗ್ತಿದ್ಯಾ..?

ಬೆಂಗಳೂರು : ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಮೇಲೆ ಬೈಕ್ ಸವಾರನೊಬ್ಬ ತಾಳ್ಮೆ ಕಳೆದುಕೊಂಡು ಅವರ ವಾಹನದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯ ಕೋಪಕ್ಕೆ ಬೆಚ್ಚಿಬಿದ್ದ ಸವಾರರು ಕಾರಿನ ಒಳಭಾಗದಿಂದ ಇಡೀ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದರು ಮತ್ತು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು, ಇದು ನೆಟ್ಟಿಗರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು.   ದಾಳಿಕೋರನು ಕಾರಿನ ಗ್ಲಾಸ್ ಬಡಿದು ಚಾಲಕನಿಗೆ ಕೂಗಾಡಿ ರಂಪಾಟ ನಡೆಸಿದ್ದಾನೆ. …

Read More »

ಸಮಸ್ಯೆಗಳ ಸುಳಿಯಲ್ಲಿ ‘ಹೆಗ್ಗೇರಿ’

ಹುಬ್ಬಳ್ಳಿ: ಈ ನಗರದ ಬೀದಿಗೆ ಕಾಲಿಟ್ಟರೆ ಸಾಕು ದುರ್ವಾಸನೆ ಮೂಗಿಗೆ ಅಸಹನೀಯವಾಗುತ್ತದೆ. ಮನೆ ಮುಂದೆ ಬಾಯ್ತೆರೆದ ದೊಡ್ಡ ಚರಂಡಿ ನಾಲಾ. ಚರಂಡಿ ಪಕ್ಕದಲ್ಲೇ ಆಡುವ ಮಕ್ಕಳು. ಸಂಜೆ ವಿಪರೀತ ಸೊಳ್ಳೆಗಳ ಕಾಟ.. ಈ ದುಸ್ಥಿತಿಯ ಚಿತ್ರಣವನ್ನು ಹಳೇಹುಬ್ಬಳ್ಳಿಯ ಹೆಗ್ಗೇರಿಯಲ್ಲಿ ಕಾಣಬಹುದು. ನಗರದ ಮಧ್ಯಭಾಗದಲ್ಲಿರುವ ಈ ಬಡಾವಣೆ ಸಮಸ್ಯೆಗಳ ಸರಮಾಲೆ ಹೊದ್ದು ಕೂತಿದೆ. 2 ಸಾವಿರಕ್ಕೂ ಹೆಚ್ಚು ಜನ ವಾಸಿಸುವ ಈ ಪ್ರದೇಶದಲ್ಲಿ ಸ್ವಚ್ಛತೆ ಇಲ್ಲ. ಮನೆ ಎದುರೇ ಬೀಳುವ ತ್ಯಾಜ್ಯ, ಮನೆ …

Read More »

ವೇಶ್ಯಾವಾಟಿಕೆ ಆರೋಪ; ಸ್ಪಾ ಮೇಲೆ ದಾಳಿ

ಶಿವಮೊಗ್ಗ: ಇಲ್ಲಿನ ವೀರಣ್ಣ ಲೇಔಟ್ 3ನೇ ಕ್ರಾಸ್‌ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೊ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ ಸೋಮವಾರ ಸಂಜೆ ವಿನೋಬ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ವಿನೋಬನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್‌ಸ್ಪೆಕ್ಟರ್‌ ಭರತ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.   ವೇಶ್ಯಾವಾಟಿಕೆ ನಡೆಸುತ್ತಿದ್ದ …

Read More »

ಮಹಾರಾಷ್ಟ್ರದಲ್ಲಿ ಶಿಕ್ಷಕನಿಂದ ಪೈಶಾಚಿಕ ಕೃತ್ಯ : 6 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಅಕೋಲಾ: ಥಾಣೆಯ ಬದ್ಲಾಪುರದಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಘಟನೆಯ ನಂತರ, ಈಗ ಅಕೋಲಾದಿಂದ ಇದೇ ರೀತಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿ ಶಾಲಾ ಶಿಕ್ಷಕಿಯೊಬ್ಬರು 6 ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣವನ್ನು ವರದಿ ಮಾಡಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಆರೋಪಿ ಶಿಕ್ಷಕ ಪ್ರಮೋದ್ ಮನೋಹರ್ ಸರ್ದಾರ್ ಖಾಜಿಖೇಡ್ನ ಜಿಲ್ಲಾ ಪಂಚಾಯತ್ ಶಾಲೆಯಲ್ಲಿ ಶಿಕ್ಷಕನಾಗಿದ್ದ. ಆರೋಪಿ ಶಿಕ್ಷಕನು …

Read More »

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು ಚನ್ನಮ್ಮನ ಕಿತ್ತೂರು: ತೆನೆಗಟ್ಟಿರುವ ಗೋವಿನ ಜೋಳ, ಎದೆ ಎತ್ತರ ಬೆಳೆದು ನಿಂತಿರುವ ಕಬ್ಬು ಬೆಳೆ ನಾಶ ಮಾಡಿ ಒಕ್ಕಲೆಬ್ಬಿಸಲು ಆಗಮಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ತಾಲ್ಲೂಕಿನ ದೇವಗಾಂವ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಲವು ಮಹಿಳೆಯರು ವಿಷದ ಬಾಟಲಿಗಳನ್ನೂ ಹಿಡಿದು ಕುಳಿತರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯಾಧಿಕಾರಿಗಳನ್ನು ಜಮೀನಿನ ಬಳಿ ತಡೆದರು. ಪೊಲೀಸ್ ಅಧಿಕಾರಿಗಳು ಸಂಧಾನಕ್ಕೆ ಯತ್ನಿಸಿದರು. ಬೆಳೆ …

Read More »

ಕಾರುಗಳ ಡಿಕ್ಕಿ: ಒಬ್ಬ ಸಾವು

ಖಾನಾಪುರ: ತಾಲ್ಲೂಕಿನ ನಾಗರಗಾಳಿ ಗ್ರಾಮದ ಹೊರವಲಯದ ರಾಮನಗರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಚಾಲಕ ಮೃತಪಟ್ಟು ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ತೆಲಂಗಾಣ ರಾಜ್ಯದತ್ತ ಹೊರಟಿದ್ದ ಪ್ರಯಾಣಿಕರ ಕಾರು ಅಳ್ನಾವರದಿಂದ ರಾಮನಗರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದು ವೇಗವಾಗಿ ಅಪ್ಪಳಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ಮೃತರನ್ನು ವಾಸ್ಕೋ ನಿವಾಸಿ ಅಮೀರಖಾನ …

Read More »

ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ

ಡಿ.ದೇವರಾಜ ಅರಸುಗೆ ಭಾರತರತ್ನ ಶಿಫಾರಸು: ಸಿಎಂ ಸಿದ್ದರಾಮಯ್ಯ ಬೆಂಗಳೂರು: ದಿವಂಗತ ಮಾಜಿ ಮುಖ್ಯಮಂತ್ರಿ ಡಾ. ಡಿ.ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇವರಾಜ ಅರಸು ಸಾಮಾಜಿಕ ನ್ಯಾಯದ ಪರ ಇದ್ದವರು. ಬಡವರು, ದಲಿತರು, ರೈತರು, ಮಹಿಳೆಯರ ಪರ …

Read More »

ಮಂಡ್ಯದಲ್ಲಿ ಸಿಡಿದೆದ್ದ ಕೈ ಕಾರ್ಯಕರ್ತರು; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ

ಮಂಡ್ಯ : ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ಮಂಗಳವಾರ ಮದ್ದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮದ್ದೂರು ಪಟ್ಟಣದ ಕೊಲ್ಲಿ ವೃತ್ತದಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ತಾಲೂಕು ಕಚೇರಿ ಮುಂಭಾಗ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ …

Read More »