ನಿಪ್ಪಾಣಿ: ‘ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ(ಬಹುರಾಜ್ಯ)ಯು ವಿವಿಧ ಹಂತಗಳಲ್ಲಿ ನ್ಯಾನೊ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಿದ್ದು, ಇದರಿಂದ ರೈತರು ಕಡಿಮೆ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಕಬ್ಬು ಉತ್ಪಾದಿಸಬಹುದು. ಅಲ್ಲದೆ ರೈತರಿಗೆ ಹಾಗೂ ಸದಸ್ಯರಿಗೆ ವಿವಿಧ ನ್ಯಾನೋ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು. ವೇದಗಂಗಾ ರೈತ ಉತ್ಪಾದಕರ ಒಕ್ಕೂಟ ಹಾಗೂ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಡ್ರೋನ್ ಮೂಲಕ …
Read More »Yearly Archives: 2024
ಕಿತ್ತೂರು ಉತ್ಸವಕ್ಕೆ 5 ಕೋಟಿ
ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ 2024 ರ ಪೂರ್ವಭಾವಿ ಸಭೆ ಸೋಮವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಸಲಾಯಿತು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಂದಾಯ ಸಚಿವ ಕೃಷ್ಣಭೈರೆಗೌಡ ಸಭೆಯಲ್ಲಿ ಈ ಬಾರಿ 200 ನೇ ಅದ್ಧೂರಿ ಕಿತ್ತೂರು ಉತ್ಸವಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ಅನುದಾನ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ …
Read More »ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ
ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು …
Read More »ಸಚಿವ ಎಚ್‌ಡಿಕೆ ಮತ್ತು ಸಂಬಂಧಿಕರಿಂದ ಗೋಮಾಳ ಜಾಗ ಕಬಳಿಕೆ; ಹಿರೇಮಠ ಆರೋಪ
ಧಾರವಾಡ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಗೋಮಾಳದ ಜಾಗವನ್ನು ಅತಿಕ್ರಮಣ ಮಾಡಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್.ಆರ್.ಹಿರೇಮಠ ಆರೋಪಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕುಮಾರಸ್ವಾಮಿ, ಅವರ ಚಿಕ್ಕಮ್ಮ ಸಾವಿತ್ರಮ್ಮ ಹಾಗೂ ಸಂಬಂಧಿಕ ಡಿ.ಸಿ.ತಮ್ಮಣ್ಣ ಕುಟುಂಬದವರು ಜಾಗವನ್ನು ಕಬಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಂದಾಯ ಇಲಾಖೆಯ ಉನ್ನತಧಿಕಾರಿ 2014 ಆಗಸ್ಟ್ …
Read More »ಹುಕ್ಕೇರಿ | ರಿಯಾಯಿತಿ ದರದಲ್ಲಿ ಕೀಟನಾಶಕ ಔಷಧ: ಸದ್ಬಳಕೆಗೆ ಸಲಹೆ
ಹುಕ್ಕೇರಿ: ‘ರೈತರಿಗೆ ಅಗತ್ಯವಿರುವ ಕೀಟನಾಶಕ ಔಷಧ ಕೈಗೆಟುಕುವ ದರದಲ್ಲಿ ದೊರೆಯುವ ಸದುದ್ದೇಶದಿಂದ ಕೀಟನಾಶಕ ಔಷಧ ಮಳಿಗೆ ಉದ್ಘಾಟಿಸಲಾಗಿದೆ’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು. ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಕೀಟನಾಶಕ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ಶೇ30ರಷ್ಟು ರಿಯಾಯಿತಿ ದರದಲ್ಲಿಕೀಟನಾಶಕ ಔಷಧ ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು ‘ರೈತರು ಸಂದಿಗ್ದ ಪರಿಸ್ಥಿತಿಗೆ ಸಿಲುಕಿದ್ದಾರೆ. ನರೇಗಾ ಯೋಜನೆಯಡಿ ಸರ್ಕಾರ ಕೂಲಿ ಕೆಲಸ ಒದಗಿಸುತ್ತಿದ್ದು, ಹೊಲ-ಗದ್ದೆಗಳಲ್ಲಿ ಕೂಲಿ …
Read More »ರಡ್ಡೆರಹಟ್ಟಿ ಸರ್ಕಾರಿ ಶಾಲೆಗೆ ₹1ಲಕ್ಷ ಬಹುಮಾನ
ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು. ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು …
Read More »ತಾಯಿ- ಮಕ್ಕಳಿಗೆ ಇನ್ನೂ ಸಿಗದ ಆಸ್ಪತ್ರೆಗಳು
ಬೆಳಗಾವಿ: ಜಿಲ್ಲೆಗೆ ಮಂಜೂರಾದ ಒಟ್ಟು ಏಳು ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಇನ್ನೂ ಎರಡು ಆಸ್ಪತ್ರೆಗಳು ಕಾರ್ಯಾರಂಭ ಮಾಡಿಲ್ಲ. ಚಿಕ್ಕೋಡಿ ಹಾಗೂ ಖಾನಾಪುರದದಲ್ಲಿ ಮೂಲಸೌಕರ್ಯಗಳು ಸಿದ್ಧಗೊಂಡರೂ ಸಿಬ್ಬಂದಿ ನೇಮಕ ಹಾಗೂ ಸಣ್ಣಪುಟ್ಟ ಕೆಲಸಗಳಿಂದಾಗಿ ಇನ್ನೂ ಜನರ ಉಪಯೋಗಕ್ಕೆ ಬಂದಿಲ್ಲ. ಉಳಿದಂತೆ, ಗೋಕಾಕದಲ್ಲಿ 100 ಬೆಡ್, ಒಂಟಮೂರಿಯಲ್ಲಿ 30 ಬೆಡ್, ನಿಪ್ಪಾಣಿ 30 ಬೆಡ್, ಸವದತ್ತಿ 60 ಬೆಡ್, ಬೈಲಹೊಂಗಲ 100 ಬೆಡ್‌ನ ಆಸ್ಪತ್ರೆಗಳು ಕೆಲಸ ಆರಂಭಿಸಿವೆ. ಚಿಕ್ಕೋಡಿಯಲ್ಲಿ 100 ಹಾಸಿಗೆ …
Read More »ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ. ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ. ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ …
Read More »ರಾಜ್ಯಪಾಲರ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಬಿಜೆಪಿ ನಾಯಕರು ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ ಇತರರಿದ್ದರು.
Read More »ರಕ್ಷಾಬಂಧನದ ಇತಿಹಾಸ ಹೇಳಿದ ಸುಧಾಮೂರ್ತಿ; ವಿಡಿಯೋ ನೋಡಿ ನೆಟ್ಟಿಗರು ಕಿಡಿ..
ಬೆಂಗಳೂರು: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಪತ್ನಿ, ರಾಜ್ಯಸಭಾ ಸಂಸೆ ಸುಧಾಮೂರ್ತಿ ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಗೆ ಸುದ್ದಿಯಲ್ಲಿರುತ್ತಾರೆ. ಪ್ರಸಿದ್ಧ ಬರಹಗಾರರು ಆದ ಸುಧಾಮೂರ್ತಿ ಅವರು ಬಹುಪಾಲು ಸಮಯ ಸಮಾಜಸೇವೆಯಲ್ಲಿ ತೊಡಗಿರುತ್ತಾರೆ. ಇಂದು (ಆಗಸ್ಟ್ 19) ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಅಣ್ಣ-ತಂಗಿಯರ ಈ ಪವಿತ್ರ ಹಬ್ಬದ ಕುರಿತು ಸುಧಾಮೂರ್ತಿ ಅವರು ಹೇಳಿರುವ ಮಾತುಗಳು ಜಾಲತಾಣದಲ್ಲಿ ವೈರಲ್ ಆಗುತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಸುಧಾಮೂರ್ತಿ ಅವರು ರಕ್ಷಾಬಂಧನ ಆಚರಣೆಯ ಮೂಲವನ್ನು …
Read More »