ನವದೆಹಲಿ : ಕೇಂದ್ರ ಸರ್ಕಾರವು ಮುಂದಿನ ತಿಂಗಳು ಶೇಕಡಾ 3ರಷ್ಟು ಡಿಎ ಹೆಚ್ಚಳವನ್ನ ಘೋಷಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ನಲ್ಲಿ ಈ ಶೇಕಡಾ 3ರಷ್ಟು ಹೆಚ್ಚಳದೊಂದಿಗೆ, ಒಟ್ಟು ತುಟ್ಟಿಭತ್ಯೆ ಶೇಕಡಾ 53ಕ್ಕೆ ತಲುಪುತ್ತದೆ. ಆದಾಗ್ಯೂ, ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಿಲ್ಲಿಸಲಾದ ಡಿಎ ಮತ್ತು ತುಟ್ಟಿಭತ್ಯೆ ಪರಿಹಾರ (DR)ಗಾಗಿ 18 ತಿಂಗಳ ಬಾಕಿಯನ್ನ ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿಲ್ಲ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ, ಇಬ್ಬರು ಸದಸ್ಯರು ಇತ್ತೀಚೆಗೆ ಡಿಎ ಬಾಕಿಯ ಬಗ್ಗೆ ಸರ್ಕಾರದ …
Read More »Yearly Archives: 2024
ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ
ಬೆಳಗಾವಿ: ಯಾವುದೇ ಸೂಚನೆಯನ್ನು ನೀಡದೆ ಬರುವ ಜವರಾಯನ ಅಟ್ಟಹಾಸಕ್ಕೆ ಮಧ್ಯಮ ವಯಸ್ಸಿನವರ ಪ್ರಾಣಪಕ್ಷಿ ಹಾರಿಹೋಗುತ್ತಿದೆ. ಬದುಕು ಹೇಗೆಲ್ಲ ಅಂತ್ಯವಾಗುತ್ತೆ ಎಂಬುದನ್ನು ಅಂದಾಜಿಸಲೂ ಸಾಧ್ಯವಿಲ್ಲ. ಹೃದಯವು ಯಾವ ಕ್ಷಣದಲ್ಲಿ ಕೈಕೊಡುತ್ತೆ ಎಂಬುದು ಊಹಿಸಲು ಆಗುತ್ತಿಲ್ಲ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ನಿರ್ನಾಮ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ (Heart Attack) ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದೀಗ …
Read More »ಆಗಸ್ಟ್ 21ಕ್ಕೆ ಭಾರತ್ ಬಂದ್: ?ದೇಶಾದ್ಯಂತ ಪ್ರತಿಭಟನೆ ಕಾರಣ ಯಾವ ಸೇವೆ ಅಲಭ್ಯ?
ನವದೆಹಲಿ:ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ‘#21_August_Bharat_Bandh’ ಹ್ಯಾಶ್ ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ನಲ್ಲಿದೆ. ಈ ಹ್ಯಾಶ್ ಟ್ಯಾಗ್ ನೊಂದಿಗೆ ಎಕ್ಸ್ ನಲ್ಲಿ 15.4 ಸಾವಿರ ಪೋಸ್ಟ್ ಗಳನ್ನು ಪೋಸ್ಟ್ ಮಾಡಲಾಗಿದೆ. ಭಾರತ್ ಬಂದ್ ಹಿಂದಿನ ಕಾರಣ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ …
Read More »ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ, ಸಿಎಂ ಪರ ಶಕ್ತಿ ಪ್ರದರ್ಶನ
ಬೆಂಗಳೂರು: ಮುಡಾ ಪ್ರಕರಣ ದಲ್ಲಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಿಎಂ ಪರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆ. 22ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ, “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ಪ್ರಮಾದ ಮಾಡಿಲ್ಲ. ಆದರೂ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದೆ. ಈ ಸಂದರ್ಭದಲ್ಲಿ ಸರಕಾರ ಮತ್ತು ಪಕ್ಷ ಒಗ್ಗಟ್ಟು ಪ್ರದರ್ಶಿಸಬೇಕು. ಜತೆಗೆ …
Read More »2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ
2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು. ಬೆಳಗಾವಿಯಲ್ಲಿಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕರು ವಿರುದ್ದ …
Read More »ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆಯ ಜತೆಗೆ ದೇಶ ಉದ್ಧಾರ: ಶ್ರೀ ನಿರ್ಮಲಾನಾಥಶ್ರೀ
ಮಂಡ್ಯ, ಆಗಸ್ಟ್ 19: ಮನೆಯಲ್ಲಿ ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿಯನ್ನು ಕೊಟ್ಟದ್ದೇ ಆದರೆ ಮನೆಯೂ ಉದ್ದಾರವಾಗುತ್ತದೆ ದೇಶವೂ ಉದ್ಧಾರವಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳು ಹೇಳಿದರು. ನಾಗಮಂಗಲ ತಾಲೂಕಿನ ಕಂಚನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಮನೆಯಲ್ಲಿರುವ ಹೆಣ್ಣು ಮಕ್ಕಳು ದೇಶಕಟ್ಟುವ ಕಾಯಕಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಾಮಾಜಿಕ ವ್ಯವಸ್ಥೆ ಬಿಡುವುದಿಲ್ಲವೋ ಅಲ್ಲಿಯವರಗೆ ದೇಶದ ಉದ್ದಾರವಾಗದು …
Read More »ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಫೈಟ್; ಸಿದ್ದು ಪರ ಘಟನಾಘಟಿ ವಕೀಲರು ಕಣಕ್ಕೆ,
ಬೆಂಗಳೂರು: ಬಿಜೆಪಿಗರನ್ನೇ (BJP) ಬಗ್ಗು ಬಡಿದು ಬಲೆ ಹಾಕ್ತೀನಿ ಎಂದಿದ್ದ ಸಿದ್ದರಾಮಯ್ಯ (Siddaramaiah) ಸೈಟ್ ಸುಳಿಗೆ ಸಿಲುಕಿ ಪರದಾಡ್ತಿದ್ದಾರೆ. ಪ್ರಾಸಿಕ್ಯೂಷನ್ (Prosecution) ಬಲೆಯಿಂದ ಹೊರಬರಲು ಕಾನೂನು ಸಮರ ಸಾರಿದ್ದಾರೆ. ಇಂದು ಸಿಎಂ ಪರ ಕಪಿಲ್ ಸಿಬಲ್ (Kapil Sibal), ಕಾಂಗ್ರೆಸ್ ಪರ ಅಭಿಷೇಕ್ ಮನು ಸಿಂಘ್ವಿ (Abhishek Singhvi) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸೋದಕ್ಕೆ ಸಜ್ಜಾಗಿದ್ದಾರೆ. ಇದರ ನಡುವೆಯೇ ಸಿದ್ದರಾಮಯ್ಯ ದೆಹಲಿ ದಂಡಯಾತ್ರೆಗೆ ಮುಂದಾಗಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಕಾನೂನು …
Read More »ವರ್ಷದ 2 ನೇ ಸೂರ್ಯಗ್ರಹಣ
ನವದೆಹಲಿ : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ಮೇಲಿನ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಈ ವಿದ್ಯಮಾನವನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ …
Read More »ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ
ಯಾದಗಿರಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಕಾರಣಕ್ಕೆ ಯಾದಗಿರಿ ನಗರದಲ್ಲಿ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ ಏಕಾಂಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ ನಗರದ ಸುಭಾಷ್ಚಂದ್ರ ಬೋಸ್ ವೃತ್ತದ ಬಳಿ ಸಿದ್ದರಾಮಯ್ಯನವರ ಅಭಿಮಾನಿ ರಾಜಕುಮಾರ ಎಂಬಾತ ಏಕಾಂಗಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾನೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಸತ್ಯಾಗ್ರಹ ಕೈಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜಭವನವನ್ನು ದುರುಪಯೋಗಿಸಿಕೊಂಡು ರಾಜ್ಯ ಮುಖ್ಯಮಂತ್ರಿಗಳ …
Read More »ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿ 14 ವರ್ಷದ ಬಳಿಕ ಮತ್ತೆ ಬಂಧನ !
ಕೊಪ್ಪಳ: ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧಿಯಾಗಿ 2010 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಲಕಲ್ ಮೂಲದ ನಿವಾಸಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಎಂಬ ಖೈದಿಯನ್ನು ಜಿಲ್ಲಾ ಪೊಲೀಸರು ಬರೊಬ್ಬರಿ 14 ವರ್ಷಗಳ ಬಳಿಕ ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ವಿಚಾರಣಾ ಖೈದಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಇಲಕಲ್ ನಿವಾಸಿಯಾಗಿದ್ದ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ದ 2009ರಲ್ಲಿ ಕೇಸ್ ದಾಖಲಾಗಿತ್ತು. ಈತನನ್ನು ಕೊಪ್ಪಳ …
Read More »