Breaking News

Yearly Archives: 2024

ಬಿಜೆಪಿ ಒಡೆದ ಮನೆಯಾಗಿದೆ.ವಿಜಯೇಂದ್ರ ಟೀಂ ಒಂದು ಕಡೆಯಾದರೆ ಯತ್ನಾಳ್‌ ರಮೇಶ್‌ ಜಾರಕಿಹೊಳಿ.ಬಣ ಮತ್ತೊಂದು ಕಡೆ.

ಬೆಂಗಳೂರು,ಆ.13- ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್‌ ನಿಷ್ಠ ಬಣ ಮಗದೊಂದು ಕಡೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

Read More »

ಬೆಚ್ಚಿ ಬೀಳಿಸುತ್ತೆ ಬಿಎಂಟಿಸಿ ವೋಲ್ವೋ ಬಸ್ ಆಕ್ಸಿಡೆಂಟ್ ವಿಡಿಯೋ

ಬೆಂಗಳೂರು ಆಗಸ್ಟ್ 13: ಬೆಂಗಳೂರು ಅಂದರೆ ಟ್ರಾಫಿಕ್ ಜಾಮ್. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಬೇಕಾದರೆ ಗಂಟೆಗಟ್ಟಲೆ ರಸ್ತೆಯಲ್ಲಿ ಕಾಯಬೇಕಾದ ಸ್ಥಿತಿ ಇದೆ. ಈ ನಡುವೆ ಅಪಘಾತಗಳು ಸಂಭವಿಸಿದರೆ ಮುಗಿತು ಜನ ತಾವಂದುಕೊಂಡ ಸ್ಥಳಕ್ಕೆ ಹೋಗುವುದು ಗಂಟೆಗಳವರೆಗೆ ತಡವಾಯಿತು ಅಂತಲೇ ಅರ್ಥ. ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಅಪಘಾತವೊಂದು ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ …

Read More »

ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರು,ಆ.13- ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟಿನ್‌ಗಳಿಗೆ ಡಿಜಿಟಲ್‌ ಸ್ಪರ್ಶ ನೀಡಲು ಬಿಬಿಎಂಪಿ ಮುಂದಾಗಿದೆ.ಇನ್ನು ಮುಂದೆ ಟಚ್‌ ಸ್ಕ್ರೀನ್‌ ಮೂಲಕ ತಿಂಡಿ ಬುಕ್ಕಿಂಗ್‌ ಮಾಡಲು ಇಂದಿರಾ ಕ್ಯಾಂಟಿನ್‌ಗಳಲ್ಲಿ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ರಾಜರಾಜೇಶ್ವರಿನಗರ ವಲಯದ 11 ಕ್ಯಾಂಟೀನ್‌ಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗುತ್ತಿದೆ. ಸಾಧಕ ಬಾಧಕ ಅಧ್ಯಯನದ ಬಳಿಕ 169 ಇಂದಿರಾ ಕ್ಯಾಂಟೀನ್‌ ಗೂ ಡಿಜಿಟಲ್‌ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಎಷ್ಟು ತಿಂಡಿ, ಎಷ್ಟು ಊಟ ಖರ್ಚಾಯ್ತು? ಗುಣಮಟ್ಟ …

Read More »

ತುಂಗಭದ್ರಾ ಜಲಾಶಯದಲ್ಲಿ ಲೋಪ: ಯಾರ ಮೇಲೂ ಗೂಬೆ ಕೂರಿಸುವುದಿಲ್ಲ: C.M.

ಕೊಪ್ಪಳ: ತುಂಗಭದ್ರಾ ಮಂಡಳಿ ಅಧ್ಯಕ್ಷ ಕೇಂದ್ರ ಸರ್ಕಾರದಿಂದ ನೇಮಕವಾಗುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿದೆ. ಅವರು ಏನು ಮಾಡಿದ್ದಾರೆ. ಜಲಾಶಯ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಯಾರ ಮೇಲೂ ಗೂಬೆ ಕೂರಿಸುವುದಿಲ್ಲ. ರೈತರ ಪರ ಇದ್ದೇವೆ‌. ರೈತರನ್ನು, ನೀರನ್ನು ಹಾಗೂ ಜಲಾಶಯವನ್ನು ಉಳಿಸುತ್ತೇವೆ. ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಬಸಾಪುರ ಬಳಿ ಏರ್ ಸ್ಟ್ರೀಪ್ ನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ …

Read More »

ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ: 9 ಜನರಿಗೆ ಗಂಭೀರ ಗಾಯ

ಬೆಳಗಾವಿ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದಿದ್ದ ಭಕ್ತರು ಹೋಟೆಲ್ ನಲ್ಲಿ ತಂಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾದಗಿರಿಯ ಐವರು ಹಾಗೂ ಬೆಂಗಳೂರಿನ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.   ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಸವದತ್ತಿ ಪಟ್ಟಣದ ಹೋಟೆಲ್ ರೂಂ ನಲ್ಲಿ ತಂಗಿದ್ದರು. ಈ ವೇಳೆ ಹೋಟೆಲ್ ರೂಂ …

Read More »

ವಿಜಯಪುರ: ಬಾಂಗ್ಲಾ ಹಿಂದೂಗಳಿಗೆ ರಕ್ಷಣೆ ನೀಡಿ

ವಿಜಯಪುರ(ದೇವನಹಳ್ಳಿ): ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಿಂಸಾತ್ಮಕ ಅಕ್ರಮಣ ಕೊನೆಗೊಳ್ಳಿಸಿ, ಅವರಿಗೆ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಸೋಮವಾರ ಹಿಂದೂ ಹಿತರಕ್ಷಣಾ ಸಮಿತಿಯ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.   ಪಟ್ಟಣದ ಶಿವಗಣೇಶ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿದ ಸಮಿತಿ ಸದಸ್ಯರು ಮೌನ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. …

Read More »

ದೇವನಹಳ್ಳಿ: ಸೇವಾ ಜೇಷ್ಠತೆ ಆಧಾರದಲ್ಲಿ ಶಿಕ್ಷಕರಿಗೆ ಬಡ್ತಿ ನೀಡಿ

ದೇವನಹಳ್ಳಿ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ಸಮಯದಲ್ಲಿ 2017ರಲ್ಲಿ ರೂಪಿಸಿರುವ ನಿಯಮವನ್ನು 2016ಕ್ಕೂ ಮುನ್ನ ನೇಮಕಗೊಂಡ ಶಿಕ್ಷಕರಿಗೆ ಅನ್ವಯಿಸಬಾರದು ಎಂದು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್‌ ಒತ್ತಾಯಿಸಿದರು. ಸೋಮವಾರ ಪಟ್ಟಣದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ಪ್ರೌಢಶಾಲೆಗಳಿಗೆ ಬಡ್ತಿ ನೀಡುವಾಗ ವಿದ್ಯಾರ್ಹತೆಯನ್ನೇ ಪರಿಗಣಿಸಬೇಕು ಎಂದು ಆಗ್ರಹಿಸಿದರು. 2017ರಲ್ಲಿ ರೂಪಿಸಿರುವ ನಿಯಮದಿಂದ 2016ಕ್ಕೂ ಮುನ್ನವೇ ನೇಮಕ ಆಗಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. …

Read More »

45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್‌: ಸಚಿವ ಸುಧಾಕರ್

ಕಲಬುರಗಿ: ‘ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲ ವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ ನಾಲ್ಕು ಹೊಸ ಕೋರ್ಸ್‌ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.   ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ಸ್ಕಿಲ್‌ ಸೆಕ್ಟರ್ ಕೌನ್ಸಿಲ್‌ ಅಡಿ ಬಿ.ಕಾಂ ಇನ್‌ ಲಾಜಿಸ್ಟಿಕ್, ಬಿ.ಕಾಂ ಇನ್‌ ಇ-ಕಾಮರ್ಸ್, ಬಿ.ಕಾಂ ಇನ್ ರಿಟೇಲ್‌ ಹಾಗೂ ಬ್ಯಾಂಕಿಂಗ್ ಆಯಂಡ್ …

Read More »

ಮುಳಬಾಗಿಲು: ಅರ್ಧಕ್ಕೆ ನಿಂತ ಮುಷ್ಟೂರು ಪಂಚಾಯಿತಿ ಕಟ್ಟಡ ಕಾಮಗಾರಿ

ಮುಳಬಾಗಿಲು: ತಾಲ್ಲೂಕಿನ ಮುಷ್ಟೂರು ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡ ಕಾಮಗಾರಿಯು ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಟ್ಟಡದ ಮೇಲೆ ನಾನಾ ಬಗೆಯ ಬಳ್ಳಿಗಳು ಹರಡಿಕೊಂಡಿವೆ. ಅಲ್ಲದೆ, ಕಟ್ಟಡ ಸುತ್ತಲಿನ ಆವರಣದಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ಮುಷ್ಟೂರು ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆ ₹21 ಲಕ್ಷ ವೆಚ್ಚದಲ್ಲಿ ಆಗಿನ ಶಾಸಕ ಎಚ್.ನಾಗೇಶ್, ಪಂಚಾಯಿತಿ ಕಾರ್ಯಾಲಯದ ಕಾಮಗಾರಿಗೆ ಚಾಲನೆ ನೀಡಿದ್ದರು. ತಮ್ಮ ಅಧಿಕಾರದ ಅವಧಿಯಲ್ಲೇ ಕಟ್ಟಡ ಉದ್ಘಾಟನೆ ಮಾಡಬೇಕು ಎಂಬ ಕಾರಣಕ್ಕೆ ತರಾತುರಿಯಲ್ಲಿ ಕಟ್ಟಡದ ಒಳಗೆ …

Read More »

ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು

ಮಾನನಷ್ಟ ಮೊಕದ್ದಮೆ ಹೂಡಲಿ, ಎದುರಿಸಲು ಸಿದ್ಧ -ವೀರಣ್ಣ ಚರಂತಿಮಠ ಸವಾಲು ಬಾಗಲಕೋಟೆ: ‘ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾನನಷ್ಟ ಮೊಕದ್ದಮೆ ಹಾಕಲಿ. ಅದನ್ನು ಎದುರಿಸುವ ಶಕ್ತಿ ಇದೆ. ಕಾನೂನಿನ ಮೂಲಕ ಉತ್ತರ ನೀಡುತ್ತೇನೆ’ ಎಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಸವಾಲು ಹಾಕಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಘಕ್ಕೆ ನೀಡಲಾಗಿದ್ದ ಜಾಗೆ ರದ್ದು ವಿಚಾರದಲ್ಲಿ ಹೆಸರು ಪ್ರಸ್ತಾಪಿಸಿರುವುದಕ್ಕೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಹೇಳಿದ್ದಾರೆ. ಇಂತಹ …

Read More »