ಬೆಳಗಾವಿ: ‘ಇಲ್ಲಿನ ಹಿಂದವಾಡಿಯ ಮಹಾವೀರ ಭವನದಲ್ಲಿ ಜೈನ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್(ಜಿತೋ) ಬೆಳಗಾವಿ ಘಟಕದ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆ.15ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ’ ಎಂದು ಸಂಯೋಜಕ ಕುಂತಿನಾಥ ಕಲಮನಿ ಹೇಳಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಕಷ್ಟ ಸಮಯದಲ್ಲಿ ಜನರಿಗೆ ನೆರವಾಗುವ ದೃಷ್ಟಿಯಿಂದ ನಾಲ್ಕು ವರ್ಷಗಳಿಂದ ಈ ಶಿಬಿರ ಆಯೋಜಿಸುತ್ತಿದ್ದೇವೆ. ಕಳೆದ ವರ್ಷ 936 ಯೂನಿಟ್ ರಕ್ತ ಸಂಗ್ರಹವಾಗಿತ್ತು. ಈ …
Read More »Yearly Archives: 2024
ಮಳೆಗಾಲದಲ್ಲಿ ‘ಟ್ಯೂಬ್ ತೆಪ್ಪ’ದಲ್ಲೇ ಶಾಲಾ ಮಕ್ಕಳ ಪಯಣ
ಕಿತ್ತೂರು: ಎರಡು ಲಾರಿ ಟ್ಯೂಬ್ ಗಳಿಗೆ ಗಾಳಿ ತುಂಬಿಸಿ ಅದರ ಮೇಲೆ ಕಟ್ಟಿಗೆಯಿಟ್ಟು, ಎರಡೂ ದಂಡೆಗೆ ನೆಡಲಾಗಿರುವ ಗೂಟಗಳಿಗೆ ಹಗ್ಗ ಕಟ್ಟಿ ಮಾಡಿರುವ ‘ಜಗ್ಗುವ ಟ್ಯೂಬ್ ತೆಪ್ಪ’ದಲ್ಲಿ ತಾಲ್ಲೂಕಿನ ಕುಲವಳ್ಳಿಯ ನಿಂಗಾಪುರ ಗ್ರಾಮಸ್ಥರು, ಶಾಲಾ ಮಕ್ಕಳು, ಮಹಿಳೆಯರು, ರೈತರಿಗೆ ಇದೇ ಸಂಚಾರದ ಜಲಮಾರ್ಗವಾಗಿದೆ. ‘ಧಾರವಾಡ ತಾಲ್ಲೂಕಿನ ಅಳ್ನಾವರ ಬಳಿಯ ಹುಲಿಕೆರೆ ಭರ್ತಿಯಾದರೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ನಿಂಗಾಪುರಕ್ಕೆ ಈ ಅಪಾಯಕಾರಿ ನೀರ ಮೇಲಿನ ಸಂಚಾರ ತಪ್ಪಿದ್ದಲ್ಲ’ ಎನ್ನುತ್ತಾರೆ ಗ್ರಾಮಸ್ಥರು. ‘ಅಲ್ಲದೇ, …
Read More »ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು
ಮತ್ತೆ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಕೂಗು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆಯಾದ ಬೆಳಗಾವಿಯನ್ನು ಆಡಳಿತದ ಸುಧಾರಣೆಯ ದೃಷ್ಟಿಯಿಂದ ವಿಭಜನೆ ಮಾಡಬೇಕೆಂಬ ಬೇಡಿಕೆಗಳು ಮತ್ತೆ ಎದ್ದಿವೆ. 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಜಿಲ್ಲೆ, 18 ವಿಧಾನಸಭಾ ಮತ್ತು 2 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬೆಳಗಾವಿ ಜಿಲ್ಲೆಯನ್ನು ಚಿಕ್ಕೋಡಿ ಮತ್ತು ಗೋಕಾಕವೆಂಬ ಎರಡು ಜಿಲ್ಲಾ ಕೇಂದ್ರಗಳಾಗಿ ವಿಭಜಿಸುವ ಹೋರಾಟ ಕಳೆದ ಎರಡು ದಶಕಗಳಿಂದ ನಡೆಯುತ್ತಿದೆ. ಇತ್ತ ಅಥಣಿ ಮತ್ತು …
Read More »ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳು ಬಂದ್-ಕಾರಣ ಏನು?
ಬೆಂಗಳೂರು, ಆಗಸ್ಟ್ 05: ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳನ್ನು ಬಂದ್ ಮಾಡಲು ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ನಿರ್ಧಾರ ಮಾಡಲಾಗಿದೆ. ಹಾಗಾದರೆ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ …
Read More »ಸಿಎಂ ಪತ್ನಿಗೆ ನೀಡಿದ್ದ 14 ನಿವೇಶನ ವಾಪಸ್ ಪಡೆಯಲು ಮನವಿ
ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಹಾಂ, ‘ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464 ರಲ್ಲಿ 2001ರಲ್ಲಿಯೇ ಮುಡಾ ನಿವೇಶನಗಳನ್ನು ರಚಿಸಿ, ನಂತರದಲ್ಲಿ 19 ಫಲಾನುಭವಿಗಳಿಗೆ ಹಂಚಿದೆ. 2004ರಲ್ಲಿ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಅದೇ …
Read More »ಖಾಲಿ ಹುದ್ದೆಗಳ ಭರ್ತಿಗೆ ಕ್ರಮವಹಿಸಿ: ಬಸವರಾಜ ಹೊರಟ್ಟಿ
ಧಾರವಾಡ: ‘ಸರ್ಕಾರಿ ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಗೌರಮ್ಮ ಹಿರೇಮಠ (ರಪಾಟಿ) ಕಲ್ಯಾಣ ಮಂಟಪದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ ಭಾನುವಾರ ಆಯೋಜಿಸಿದ್ದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರ, ಸದಸ್ಯರ ಸಾಮಾನ್ಯ ಸಭೆ ಮತ್ತು 7ನೇ ವೇತನ …
Read More »ನಿರಂತರ ಮಳೆಯಿಂದಾಗಿ ಅಂಗನವಾಡಿಗಳಿಗೆ ರಜೆ ಘೋಷಣೆ
ನಿರಂತರ ಮಳೆಯಿಂದಾಗಿ ಅಂಗನವಾಡಿಗಳಿಗೆ ರಜೆ ಘೋಷಣೆ ನಿರಂತರ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರು ಕಿತ್ತೂರು, ಖಾನಾಪುರ, ಮತ್ತು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ. ### ರಜೆ ಆದೇಶದ ವಿವರಗಳು – *ಅಂಗನವಾಡಿ ರಜೆ ಅವಧಿ*: – *ಕಿತ್ತೂರು ತಾಲೂಕು*: ಆಗಸ್ಟ್ 6 ರಿಂದ 8ರವರೆಗೆ. – *ಬೆಳಗಾವಿ ಗ್ರಾಮೀಣ ಮತ್ತು ಖಾನಾಪುರ ತಾಲೂಕುಗಳು*: ಆಗಸ್ಟ್ 6 ರಿಂದ 10ರವರೆಗೆ. ಈ ರಜೆ ಆದೇಶವನ್ನು …
Read More »ಮಾದಕ ವಸ್ತುಗಳ ಬಳಕೆ; 251 ಮಂದಿ ವಶಕ್ಕೆ ಪಡೆದ ಪೊಲೀಸರು
ಹುಬ್ಬಳ್ಳಿ: ವಾರದ ಹಿಂದಷ್ಟೇ ಮಾದಕ ವಸ್ತುಗಳ ಬಳಕೆ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿ 255 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಹು-ಧಾ ಮಹಾನಗರ ಪೊಲೀಸರು, ಭಾನುವಾರ ಮತ್ತೊಮ್ಮೆ ಕಾರ್ಯಾಚರಣೆ ನಡೆಸಿ 251 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದಕ ವಸ್ತು ಬಳಸುವ ಸಂಶಯಾಸ್ಪದ 467 ಮಂದಿಯನ್ನು ವಶಕ್ಕೆ ಪಡೆದು ಧಾರವಾಡ ಜಿಲ್ಲಾಸ್ಪತ್ರೆ, ಡಿಮಾನ್ಸ್ ಮತ್ತು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದು, ಪರೀಕ್ಷೆ ಮಾಡಿಸಿದರು. 251 ಮಂದಿ ಮಾದಕ ವಸ್ತುಗಳನ್ನು ಬಳಸಿರುವುದು ವರದಿಯಾಗಿದ್ದು, …
Read More »ಟ್ರಾನ್ಸ್‌ಫಾರ್ಮರ್ ಅವ್ಯವಸ್ಥೆಗೆ ಬಳಲಿದ ರೈತ!
ಹುಬ್ಬಳ್ಳಿ: ಹೊಸದಾಗಿ ಕೃಷಿ ಪಂಪ್‌ಸೆಟ್ ಅಳವಡಿಸುವುದನ್ನು ಸ್ಥಗಿತಗೊಳಿಸಿರುವ ಸರ್ಕಾರ ಒಂದೆಡೆಯಾದರೆ, ಕೆಟ್ಟುಹೋಗಿರುವ ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಾಯಿಸಲು ಹೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ರೈತರು ತೀವ್ರ ಕಷ್ಟ ಎದುರಿಸುತ್ತಿದ್ದಾರೆ. ಇದು ಕೇವಲ ರೈತರ ಜೀವನದ ಮೇಲಲ್ಲದೇ ಕೃಷಿ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಅಪಾಯ ತಂದೊಡ್ಡಿದೆ. ಕಳೆದ ವರ್ಷಕ್ಕಿಂತ ಮುಂಚೆ ಸರ್ಕಾರವೇ ರೈತರ ಜಮೀನುಗಳಲ್ಲಿ ನೀರಾವರಿ ಪಂಪ್‌ಸೆಟ್ ಅಳವಡಿಸುತ್ತಿತ್ತು. ಇದಕ್ಕಾಗಿ ಬೇಕಾದ ವಿದ್ಯುತ್ ತಂತಿ, ಕಂಬ, ಟ್ರಾನ್ಸ್‌ಫಾರ್ಮರ್‌ಗಳನ್ನು ಪೂರೈಸುತ್ತಿತ್ತು. 5-6 …
Read More »ವಯನಾಡು ಭೂಕುಸಿತ: ದೇಣಿಗೆ ನೀಡಿದ ಕಬಡ್ಡಿ ಪಟು
ರಿಪ್ಪನ್‌ಪೇಟೆ: ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಭೂ ಕುಸಿತದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಇಲ್ಲಿನ ರಾಮಕೃಷ್ಣ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಕಬಡ್ಡಿ ಪಟು ಆರ್. ಶ್ರೇಯಾ ಹಾಗೂ ಆಕೆಯ ಸೋದರ ಶ್ರವಂತ್ ₹ 15,000 ದೇಣಿಗೆ ನೀಡಿದ್ದಾರೆ. ಈಚೆಗೆ ಹೈದರಾಬಾದ್‌ನಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಶ್ರೇಯಾ ಹಾಗೂ ಇದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರವಂತ್ ಅವರು ಗ್ರಾಮದ ಸವಿತಾ …
Read More »