ಮೂಡಲಗಿ: ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಬುಧವಾರ ಮಧ್ಯಾಹ್ನ ನೀರು ಬಿಟ್ಟಿದ್ದರಿಂದ ಗುರುವಾರ ಬೆಳಿಗ್ಗೆಯಿಂದ ತಾಲ್ಲೂಕಿನ ಮಸಗುಪ್ಪಿ, ಸುಣಧೋಳಿ, ಕಮಲದಿನ್ನಿ, ಅವರಾಧಿ, ಢವಳೇಶ್ವರ ಗ್ರಾಮಗಳ ಬಳಿಯಲ್ಲಿ ನದಿ ನೀರಿನ ಹರಿವು ವಿಸ್ತಾರಗೊಂಡು ಸಾವಿರಾರು ಎಕರೆಯಷ್ಟು ಕಬ್ಬಿನ ಬೆಳೆ ನೀರಿನಲ್ಲಿ ನಿಂತಿದೆ. ಪ್ರವಾಹ ಭೀತಿ ಇರುವ ತೋಟಪಟ್ಟಿಗಳಲ್ಲಿ ವಾಸವಾಗಿರುವ ಜನರು ಜಾನುವಾರು ಸಹಿತಿ ಸುರಕ್ಷಿತ ಸ್ಥಳಕ್ಕೆ ಬೆಳಿಗ್ಗೆಯಿಂದ ತೆರಳುತ್ತಿದ್ದಾರೆ. ಪ್ರವಾಹ ಸಮಸ್ಯೆ ನಿರ್ವಹಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶೀಲ್ದಾರ್ ಮಹಾದೇವ ಸನ್ನಮುರೆ …
Read More »Yearly Archives: 2024
ಖಾನಾಪುರ ತಾಲ್ಲೂಕಿನಲ್ಲಿ ಮುಂದುವರೆದ ಮಳೆ: ಜನಜೀವನ ಅಸ್ತವ್ಯಸ್ತ
ಖಾನಾಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗುರುವಾರವೂ ಮಳೆ ಮುಂದುವರೆದಿದ್ದು, ತಾಲ್ಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ತಾಲ್ಲೂಕಿನಾದ್ಯಂತ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಸೇತುವೆಗಳ ಮೇಲೆ ಪ್ರವಾಹೋಪಾದಿಯಲ್ಲಿ ನೀರು ಹರಿಯುತ್ತಿದೆ. ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನೀಲಾವಡೆ ಗ್ರಾಮದ ಬಳಿ ಮಲಪ್ರಭಾ ನದಿಯ ಸೇತುವೆಯ, ಸಿಂಧನೂರು-ಹೆಮ್ಮಡಗಾ ಮಾರ್ಗದ ಅಲಾತ್ರಿ ಹಳ್ಳದ ಸೇತುವೆ, ದೇವಾಚಿಹಟ್ಟಿ-ಜಾಂಬೋಟಿ ಮಾರ್ಗಗಳ ಸೇತುವೆ ಸೇರಿದಂತೆ ನೇರಸಾ-ಗವ್ವಾಳಿ, ಹೆಮ್ಮಡಗಾ-ತಳೇವಾಡಿ, ಚಿಕಲೆ-ಅಮಗಾಂವ, ಮೋದೆಕೊಪ್ಪ-ತೀರ್ಥಕುಂಡೆ, ದೇವಾಚಿಹಟ್ಟಿ-ತೋರಾಳಿ, ತಿವೋಲಿ-ಶಿರೋಲಿ, ಅಮಟೆ-ಗೋಲ್ಯಾಳಿ, …
Read More »ಚಿಕ್ಕೋಡಿ: ಯಕ್ಸಂಬಾ-ದತ್ತವಾಡ ಸೇತುವೆ ಮುಳುಗಡೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದ ಕಾಳಮ್ಮವಾಡಿ, ರಾಧಾನಗರಿ, ಮಹಾಬಳೇಶ್ವರ, ಕೊಯ್ನಾ ಮುಂತಾದ ಕಡೆಗೆ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲೂ ಜಿಟಿ ಜಿಟಿ ಮಳೆಯು ಸುರಿಯುತ್ತಲೇ ಇದೆ. ಹೀಗಾಗಿ ಉಪ ವಿಭಾಗ ವ್ಯಾಪ್ತಿಯಲ್ಲಿ ಈಗಾಗಲೇ ವೇದಗಂಗಾ ನದಿಯ 4, ದೂಧಗಂಗಾ ನದಿಯ 4, ಕೃಷ್ಣಾ ನದಿಯ 1 ಸೇತುವೆ ಜಲಾವೃತಗೊಂಡಿವೆ. ಗುರುವಾರ ಬೆಳಿಗ್ಗೆ ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿರುವ …
Read More »ರಾಧಾನಗರಿ ಡ್ಯಾಂನಿಂದ ನೀರು ಬಿಡುಗಡೆ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿದ್ದು, ದೂಧಗಂಗಾ ನದಿಗೆ ಅಡ್ಡಲಾಗಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯದ 6 ಸ್ವಯಂ ಚಾಲಿತ ಗೇಟ್‌ಗಳನ್ನು ತೆರೆದು 2928 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. 8.36 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಡ್ಯಾಂ ಬಹುತೇಕ ಭರ್ತಿಯಾಗಿದೆ. ಹೀಗಾಗಿ ಗುರುವಾರ ಬೆಳಿಗ್ಗೆಯಿಂದ ಅಣೆಕಟ್ಟುಯಿಂದ ನೀರನ್ನು ಹೊರಬಿಡಲಾಗುತ್ತಿದೆ. ಇನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ …
Read More »ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ರಾಯಬಾಗ: ಸಾಲದ ಬಾಧೆ ತಾಳಲಾರದೆ ತಾಲ್ಲೂಕಿನ ಹೊಸ ದಿಗ್ಗೇವಾಡಿ ಗ್ರಾಮದ ರೈತ ಬಸವರಾಜ ಭೀಮಪ್ಪ ಸಗರೆ (45) ರೈತ ಮರಕ್ಕೆ ನೇಣು ಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ 1 ಎಕರೆ 10ಗುಂಟೆ ಜಮೀನಿದ್ದು, ಸಾಗುವಳಿ ಹಾಗೂ ಅಭಿವೃದ್ಧಿಯ ಸಲುವಾಗಿ ಗ್ರಾಮದ ಮಹಾಲಿಂಗೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ₹1.80 ಲಕ್ಷ, ವಿವಿಧ ಉದ್ದೇಶ ಗ್ರಾಮೀಣ ಕೃಷಿ …
Read More »ಜೈಲಿನಿಂದ ಬಿಡುಗಡೆಯಾದ ಖುಷಿಯಲ್ಲಿ ರ್‍ಯಾಲಿ. ಮತ್ತೆ ಜೈಲುಪಾಲಾದ
ಮುಂಬೈ: ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರೋಡೆಕೋರನೊಬ್ಬ ಜೈಲಿನಿಂದ ಬಿಡುಗಡೆಗೊಂಡ ಕೆಲವೇ ದಿನದಲ್ಲಿ ಮತ್ತೆ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಅಂದಹಾಗೆ ಈ ದರೋಡೆಕೋರನನ್ನು ಸುಖಾಸುಮ್ಮನೆ ಜೈಲಿಗೆ ಹಾಕಿಲ್ಲ ಇದರ ಹಿಂದೆ ಒಂದು ಕತೆ ಇದೆ. ಮಹಾರಾಷ್ಟ್ರದ ನಾಸಿಕ್ ಮೂಲದ ದರೋಡೆಕೋರನಾಗಿರುವ ಹರ್ಷದ್ ಪಾಟಂಕರ್ ದರೋಡೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಇದೆ ಜುಲೈ 23 ರಂದು ಜೈಲಿನಿಂದ ಬಿಡುಗಡೆಯಾಗಿದ್ದ ಇತ್ತ ಜೈಲಿನಿಂದ ಬಿಡುಗಡೆಗೊಳ್ಳುತ್ತಿರುವ ವಿಚಾರ ಆತನ ಬೆಂಬಲಿಗರಿಗೆ …
Read More »ಲಿಂಗನಮಕ್ಕಿಯಲ್ಲಿ ಭಾರೀ ಒಳಹರಿವು: ಗಂಗೆ ಪೂಜೆ
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಒಳಹರಿವು ಬರುತ್ತಿದ್ದು 1804.80 ಅಡಿಗೆ ತಲುಪಿದೆ. ಜಲಾಶಯ ನೀರಿನ ಮಟ್ಟವು ಈಗಾಗಲೇ ಗೇಟ್ ಮಟ್ಟ ತಲುಪಿದ್ದು ಸಂಪ್ರದಾಯದಂತೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಶುಕ್ರವಾರ ಗಂಗೆ ಪೂಜೆ ನೆರವೇರಿಸಿದರು. ನಂತರ ಕೆಲ ನಿಮಿಷಗಳ ಕಾಲ ಗೇಟ್ ಮೂಲಕ ನೀರು ಹೊರಬಿಡಲಾಯಿತು. ರಾಜ್ಯಕ್ಕೆ ಅತಿ ಕಡಿಮೆ ವೆಚ್ಚದಲ್ಲಿ ಜಲ ವಿದ್ಯುತ್ ಪೂರೈಸುವ ಏಕೈಕ ಜಲಾಶಯ ಇದಾಗಿದ್ದು ಶುಕ್ರವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 1804.40 ಅಡಿ ತಲುಪಿತ್ತು. …
Read More »ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ:C.M.
ಬೆಂಗಳೂರು, ಜುಲೈ 26: ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದು ಮನೆಮುರುಕ ರಾಜಕೀಯ. ಮುಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್‌ಗಳೆರಡೂ ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ. …
Read More »ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ
ಖಾನಾಪುರ: ಖಾನಾಪೂರದ ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗಿದೆ ಎಂದು ಶುಕ್ರವಾರ ಮಲಪ್ರಭಾ ಪ್ರವಾಹ ಪರಿಶೀಲನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವೇ ಅಲ್ಲಿನ ಜನರನ್ನು ಸ್ಥಳಾಂತರಿಸುವ ಕುರಿತು ಯೋಚಿಸಲಾಗುವುದು. ಹೊಸ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿಯಿಲ್ಲ. ನೂರಾರು ವರ್ಷಗಳಿಂದ ಜನರು ಅಂತಹ ಪ್ರದೇಶದಲ್ಲಿ ವಾಸವಿದ್ದಾರೆ. ಈ …
Read More »KASʼ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್
ಬೆಂಗಳೂರು : ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ …
Read More »