Breaking News

Yearly Archives: 2024

ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಹೆಬ್ಬಾಳಕರ್‌…!!

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಕೀಲರ ಪ್ರತಿಭಟನೆಯಲ್ಲಿ …

Read More »

ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

ಮಾಜಿ ಸಿಎಂ ಕೃಷ್ಣ ವಿಧಿವಶ- ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ- ಪದ್ಮ ವಿಭೂಷಣ, ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (೯೩) ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ನಗುಮುಖದ ಮೂಲಕ ತಮ್ಮದೇಯಾದ ವಿಶಿಷ್ಟ ಶೈಲಿಯ ರಾಜಕಾರಣದ ಮೂಲಕ ಗಮನ ಹರಿಸಿದ್ದ ಎಸ್.ಎಂ.ಕೃಷ್ಣ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪಿಕರ್ ಆಗಿ, ಕೇಂದ್ರದ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. …

Read More »

ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು

ಬೆಳಗಾವಿ: ಬೆಳಗಾವಿ-ಶಬರಿಮಲೆ ಕೊಲ್ಲಂ ನಡುವೆ ವಿಶೇಷ ರೈಲು ಸಂಚಾರಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸೋಮವಾರ ಡಿ-09 ರಂದು ಬೆಳಗಾವಿ ರೈಲು ನಿಲ್ದಾಣದಲ್ಲಿ ಬೆಳಗಾವಿಯಿಂದ ಶಬರಿಮಲೆಗೆ ತೆರಳುವ ವಿಶೇಷ ರೈಲು ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ಕರ್ನಾಟಕದಿಂದ ಪ್ರತಿ ವರ್ಷ ಲಕ್ಷಾಂತರ ಭಕ್ತರು ಯಾತ್ರೆ ಕೈಗೊಳ್ಳುತ್ತಾರೆ. ಜಿಲ್ಲೆಯಿಂದಲೂ …

Read More »

ಎಸ್.ಎಂ. ಕೃಷ್ಣ ಅವರ ಅಗಲಿಕೆಯ ಸುದ್ದಿ ತೀವ್ರ ನೋವುಂಟು ಮಾಡಿದೆ; ಸತೀಶ್ ಜಾರಕಿಹೊಳಿ

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾಗಿಯೂ ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅನೇಕ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪದ್ಮವಿಭೂಷಣ ಪುರಸ್ಕೃತ ಹಿರಿಯ ರಾಜಕಾರಣಿ ಶ್ರೀ ಎಸ್.ಎಂ. ಕೃಷ್ಣ ಅವರ ಅಗಲಿಕೆಯ ಸುದ್ದಿ ತೀವ್ರ ನೋವುಂಟು ಮಾಡಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಸಿಗಲಿ ಎಂದು ಈ ಮೂಲಕ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ.

Read More »

ಎಂಇಎಸ್​ಗೆ ಸಿಎಂ ಖಡಕ್​ ಎಚ್ಚರಿಕೆ

ಬೆಳಗಾವಿ, ಡಿಸೆಂಬರ್​ 09: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಆಗಬೇಕೆಂಬ ಆದಿತ್ಯ ಠಾಕ್ರೆ ಹೇಳಿಕೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಆದಿತ್ಯ ಠಾಕ್ರೆ ಬಾಲಿಶತನದ ಹೇಳಿಕೆ ನೀಡಿದ್ದಾರೆ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡೋಕಾಗುತ್ತಾ? ಮಹಾಜನ್ ವರದಿಯನ್ನ ಒಪ್ಪಿಕೊಳ್ಳಬೇಕು. ಎಂಇಎಸ್ ಹೋರಾಟ ವಿಚಾರವಾಗಿ ಮಾತನಾಡಿದ್ದು, ಎಂಇಎಸ್ ಹೋರಾಟ ಮಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

Read More »

ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

  ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಾಹಾರಷ್ಟ್ರದ ರಾಜ್ಯಪಾಲರಾಗಿ ಮತ್ತು ಭಾರತದ ರಾಜಕಾರಣದಲ್ಲಿ ಇನ್ನೂ ಅನೇಕ ಜವಾಬ್ದಾರಿಗಳನ್ನು ವಹಿಸಿ ಛಾಪು ಮೂಡಿಸಿದ್ದ ಎಸ್​​ಎಂ ಕೃಷ್ಣ ಬೆಂಗಳೂರಿನಲ್ಲಿ ನಿಧನರಾದರು. ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ರಾಜಕೀಯ ಜೀವನದ ಇಣುಕುನೋಟ ಇಲ್ಲಿದೆ. ಬೆಂಗಳೂರು, ಡಿಸೆಂಬರ್​ 10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ …

Read More »

ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿಭೇಟಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿಯ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೊಂದಿಗೆ ಭೇಟಿ ನೀಡಲಾಯಿತು. ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಪರಿಸರದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರ ಮತ್ತು ಆಧ್ಯಾತ್ಮಿಕವಾಗಿ ಸಾಕಷ್ಟು ಜ್ಞಾನ ಹೊಂದಿದ್ದ ಶ್ರೀಗಳು ಜನಮಾನಸದಲ್ಲಿ ಅಜರಾಮರ. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಆಶ್ರಮದ ಸದಸ್ಯರು …

Read More »

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ

ಬೆಳಗಾವಿಯ ಸುವರ್ಣ ಸೌಧದಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದ ಲೋಗೋ ಹಾಗೂ ವಿಶ್ವದ ಮೊದಲ ಸಂಸತ್ತು ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಅನಾವರಣಗೊಳಿಸಿದರು. 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಸಂಸದೀಯ ಪ್ರಜಾಪ್ರಭುತ್ವದ ಬುನಾದಿ ಎಂದು ಕರೆಯಲಾಗಿದೆ. ಸುವರ್ಣ‌ಸೌಧದಲ್ಲಿ ಅನುಭವ …

Read More »

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ;ಅಶ್ವಥ್ ನಾರಾಯಣ್

ಕಾಂಗ್ರೆಸ್ ಸರ್ಕಾರ ಕಳೆದ 18 ತಿಂಗಳಿನಿಂದ ಅವ್ಯವಸ್ಥೆ ಭ್ರಷ್ಟಾಚಾರದಿಂದ ಸರ್ಕಾರ ನಡೆಸುತ್ತಿದೆ ಎಂದು ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಬಯಲಿಗೆಳೆಯುತ್ತದೆ. ಇರುವುದು 9 ದಿನ ಅಧಿವೇಶನ ಅದರಲ್ಲಿ ಕೇವಲ ಎರಡು ದಿನ ಮಾತ್ರ ಉತ್ತರ ಕರ್ನಾಟದ ಬಗ್ಗೆ ಚರ್ಚೆಗೆ ಅವಕಾಶ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read More »

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ; ಮಹೇಶನಾಂದ ಶ್ರೀಗಳು

ಸಿದ್ದೇಶ್ವರ ಶ್ರೀಗಳ ದರ್ಶನ, ನಮ್ಮನಿಮ್ಮೆಲ್ಲರನ್ನೂ ಪಾವನವಾಗಿಸಿದೆ: ಮಹೇಶನಾಂದ ಶ್ರೀಗಳು. ಜಗತ್ತಿನಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ. ದೇವರಗಿಂತ ಗುರು ದೊಡ್ಡವನಾಗಿದ್ದಾನೆ. ಅಂತಹ ಗುರುಶ್ರೇಷ್ಠರು, ದಾರ್ಶನಿಕರು, ಯುಗಪುರುಷರು, ಮಹಾನ ತ್ಯಾಗಿಗಳು ಹಾಗೂ ನಡೆದಾಡುವ ದೇವರೆಂದು ಖ್ಯಾತಿ ಪಡೆದ ಜ್ಞಾನಯೋಗಾಶ್ರಮದ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳು ನಮ್ಮ ನಿಮ್ಮ ಜೊತೆ ಇದ್ದದ್ದೇ ನಮ್ಮೆಲ್ಲರ ಪುಣ್ಯವೆಂದು ಹಂಚಿನಾಳ ಭಕ್ತಿಯೋಗಾಶ್ರಮದ ಪ.ಪೂ. ಶ್ರೀ ಮಹೇಶಾನಂದ ಮಹಾಸ್ವಾಮಿಗಳು ಹೇಳಿದ್ದಾರೆ.

Read More »