ಬೆಳಗಾವಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14 ರಿಂದ 17 ಸೀಟುಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ‘ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವೇ ಆಗಿದೆ. 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ನಾವು ಹೆಚ್ಚಿನ ಸ್ಥಾನ ಗೆಲ್ಲಲು ಅವಕಾಶ ಇದೆ’ …
Read More »Yearly Archives: 2024
ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲ್ಲ;ನಟಿ ರಶ್ಮಿಕಾ ಮಂದಣ್ಣಗೆ ಅಂಜಲಿ ನಿಂಬಾಳ್ಕರ್ ಚಾಟಿ!
ಬೆಂಗಳೂರು, ಮೇ. 17: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ ಪ್ರಯಾಣದಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿಕಾರಿದ್ದಾರೆ. ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ನಟಿ ರಶ್ಮಿಕಾ ಮಂದಣ್ಣ …
Read More »ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘ಬ್ಲ್ಯಾಕ್’ ಟಿಕೇಟ್ ಮಾರಾಟ
ಬೆಂಗಳೂರು : ನಾಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಅತ್ಯಂತ ರೋಚಕವಾದಂತಹ ಪಂದ್ಯ ನಡೆಯಲಿದೆ. ಹೀಗಾಗಿ ಇಂದೇ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸಿ ಮುಂಗಡವಾಗಿ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದವರೇ ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಇದೀಗ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಗಾಗಿ …
Read More »ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!
ಹುಬ್ಬಳ್ಳಿ: ಮೇ 15ರ ನಸುಕಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳು ಹೊರಬರುತ್ತಿದೆ. ಮೈಸೂರಿನ ಬಾರ್ ಆಯಂಡ್ ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಗಿರೀಶ ಸಾವಂತ ಮತ್ತು ಹತ್ಯೆಯಾದ ಅಂಜಲಿ ಅಂಬಿಗೇರ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು ಎನ್ನಲಾಗುತ್ತಿದೆ. ಅಂಜಲಿ ವಾರದ ಮುಂಚೆ …
Read More »ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ
ಕಳೆದ ವರ್ಷದ ಮಳೆಗಾಲ ಋತುವಿನಲ್ಲಿ ವರುಣ ಕೈಕೊಟ್ಟಿದ್ದರಿಂದಾಗಿ ರಾಜ್ಯದಲ್ಲಿ ಬರಗಾಲ ಆವರಿಸಿ, ಬೆಳೆ ಹಾನಿಗೊಳಗಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದೇ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಈ ವರ್ಷದ ಬೇಸಗೆಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ತಾಪಮಾನ ಅಧಿಕವಾಗಿ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿತ್ತು. ಇನ್ನು ಬರ ಪರಿಹಾರ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವೆ ಹಗ್ಗ ಜಗ್ಗಾಟ ನಡೆದು ಕೊನೆಗೂ ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಈಗ ರಾಜ್ಯ …
Read More »Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು
ಮೈಸೂರು: “ನನ್ನ ಬಳಿಯಿರುವ ಭ್ರಷ್ಟಾ ಚಾರದ ಮಾಹಿತಿಯ ಪೆನ್‌ಡ್ರೈವ್ ನಿಮಗೆ ಕೊಡುತ್ತೇನೆ. ಅದರ ವಿರುದ್ಧ ಕ್ರಮ ತೆಗೆದು ಕೊಳ್ಳುವ ತಾಕತ್ತು ನಿಮಗಿದೆಯೇ?’- ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಕಿರುವ ಸವಾಲು. ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, “ನನ್ನ ಬಳಿಯಿರುವ ಪೆನ್‌ಡ್ರೈವ್‌ನಲ್ಲಿ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಹಣ ಹೊಂದಿಸಲು ಯಾವ ರೀತಿ ಪರದಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಆ ಪೆನ್‌ಡ್ರೈವ್ ಕೊಟ್ಟರೆ ಈ ಬಗ್ಗೆ …
Read More »ಮಹಾರಾಷ್ಟ್ರ, ಗೋವಾ ಅರಣ್ಯಾಧಿಕಾರಿಗಳೊಂದಿಗೆ ರಾಜ್ಯದ ಅಧಿಕಾರಿಗಳ ಸಭೆ; ಹುಲಿ ಸೇರಿ ಇತರ ಜೀವಿಗಳ ಸಂರಕ್ಷಣೆ ಕುರಿತು ಚರ್ಚೆ
ದಾಂಡೇಲಿ (ಉತ್ತರ ಕನ್ನಡ): ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದ ಅರಣ್ಯ ಇಲಾಖೆಗಳು ಇದೀಗ ಜಂಟಿಯಾಗಿ ಮಾಹಿತಿಯನ್ನು ಹಂಚಿಕೊಳ್ಳುತ್ತವೆ, ಒಟ್ಟಿಗೆ ಗಸ್ತು ತಿರುಗುತ್ತವೆ ಮತ್ತು ಪರಸ್ಪರರ ರಾಜ್ಯಕ್ಕೆ ಹೊಂದಿಕೊಂಡಿರುವ ಕಾರಿಡಾರ್‌ಗಳನ್ನು ನಿರ್ವಹಿಸುತ್ತವೆ. ಕರ್ನಾಟಕವು ಮೊದಲ ಬಾರಿಗೆ ಎರಡು ನೆರೆಯ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಆಯೋಜಿಸಿದ್ದು, ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರ ಸರ್ಕಲ್ ಅಧಿಕಾರಿಗಳು ಮತ್ತು ದಕ್ಷಿಣ ಮತ್ತು ಉತ್ತರ ಗೋವಾದ ಅರಣ್ಯ ಅಧಿಕಾರಿಗಳು ಭಾಗವಹಿಸಿದ್ದರು. ನಿರ್ವಹಣಾ ಅಭ್ಯಾಸಗಳು ಮತ್ತು ಸಂರಕ್ಷಿತ ಪ್ರದೇಶಗಳ ಸಂರಕ್ಷಣೆ (ಪಿಎ) …
Read More »ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಅವರಂತಹ ಸಿಎಂ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ತಿಂಗಳು ನೇಹಾ ಪಾಟೀಲ್ ಕೊಲೆ ಕೇಸ್ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆಯಾಗಿದೆ. ಹುಬ್ಬಳ್ಳಿಯ ದಾಜಿಬಾನಪೇಟೆ ಸಮೀಪದ ವೀರಾಪುರ ಓಣಿಯಲ್ಲಿ ನಿನ್ನೆ ಬುಧವಾರ ಬೆಳಗ್ಗೆ 20 ವರ್ಷದ ಯುವತಿಯನ್ನು 22 ವರ್ಷದ ಯುವಕನೊಬ್ಬ ಕೊಲೆ ಮಾಡಿದ್ದಾನೆ. ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಎಂಬಾತ ಅಂಜಲಿ ಅಂಬಿಗರ ಮನೆಯಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ, ಪದೇ ಪದೇ ಚಾಕುವಿನಿಂದ ಇರಿದು ಕತ್ತು ಸೀಳಿ …
Read More »ರೈತರಿಗೆ ಮತ್ತೆ ಶಾಕ್: ಹಠಾತ್ ಮಳೆಯಿಂದ ಬೆಳೆ ಹಾನಿ; ಸಿಡಿಲು ಬಡಿದು ಜಾನುವಾರುಗಳ ಸಾವು!
ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದರೆ, ಮತ್ತೊಂದೆಡೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಬೆಳೆ ನಷ್ಟ ಮತ್ತು ಜಾನುವಾರುಗಳು ಸಾಯುವ ಭೀತಿ ಎದುರಾಗಿದೆ. ಏಪ್ರಿಲ್ ಕೊನೆಯ ವಾರದಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾವೇರಿ, ಕಲಬುರಗಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ಅವಲಂಬಿಸಿರುವ ರೈತರು ಬಾಳೆ, ಈರುಳ್ಳಿ, ಟೊಮೇಟೊ ಸೇರಿದಂತೆ ಇತರೆ ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ …
Read More »ಪತ್ನಿಗೆ ಹೆದರಿಸಲು ಹೋಗಿ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟ ಜಿಮ್ ಟ್ರೈನರ್
ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಅಮಿತ್ ಕುಮಾರ್ ಜಿಮ್ ಟ್ರೈನರ್ (Gym trainer) ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ಓರ್ವ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಪೋಷಕರ ವಿರೋಧದ …
Read More »