Breaking News

Yearly Archives: 2024

ಕರ್ನಾಟಕ ಕಾಂಗ್ರೆಸ್ ಸರ್ಕಾರ’ಕ್ಕೆ ಬಿಗ್ ಆಪತ್ತು: ಲೋಕಸಭಾ ಚುನಾವಣೆ ಬಳಿಕ ಪತನ? ‘ಮಹಾ ಸಿಎಂ’ ಸುಳಿವು

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ. ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು …

Read More »

ರಾಯಚೂರಿನಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆಯಾಗಿದೆ. ಗುಡುಗು ಮಿಂಚು‌ ಸಹಿತ ಬೆಳಗಿನ ಜಾವ ಆರಂಭವಾದ ಮಳೆ ಬೆಳಿಗ್ಗೆ 6 ಗಂಟೆಯ ವರೆಗೂ ಸುರಿದಿದೆ. ಗಟಾರುಗಳು ತುಂಬಿ ರಸ್ತೆ ಮೇಲೆ ನೀರು ಹರಿದಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ತಗಡಿನ ಮನೆಗಳಲ್ಲಿ ನೀರು ಸೋರಿಕೆಯಾಗಿ ಮನೆಗಳಲ್ಲಿ ಸಾಮಗ್ರಿಗಳು ತೊಯ್ದಿವೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನುಗ್ಗಿದ ನೀರನ್ನು ಹೊರಗೆ ತೆಗೆಯಲು ಜನರು ಭಾರಿ ಪ್ರಯಾಸ ಪಡಬೇಕಾಯಿತು. ರಾಯಚೂರಿನ ತರಕಾರಿ ಮಾರುಕಟ್ಟೆಯಲ್ಲಿ …

Read More »

ಏಕಾಏಕಿ ಮಳೆಗೆ ತುಂಬಿ ಹರಿದ ಲಕ್ಷ್ಮೀ ಹಳ್ಳ: ಕೊಚ್ಚಿ ಹೋದ 2 ಕಾರು, 1 ಪಿಕಪ್‌ ವಾಹನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಲಕ್ಷ್ಮೀ ಹಳ್ಳ ಏಕಾಏಕಿ ತುಂಬಿ ಹರಿದ ಪರಿಣಾಮ 2 ಕಾರು, 1 ಪಿಕಪ್‌ ವಾಹನ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದೆ. ಭಾರಿ ಮಳೆಯಿಂದ ಅವಾಂತರಗಳು ಸಂಭವಿಸಿದ್ದು, ರೈತ ಉತ್ಪಾದಕರ ಕೇಂದ್ರದ ಮೇಲ್ಚಾವಣಿ ಹಾರಿ ಹೋಗಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಅವಾಂತರ ಸಂಭವಿಸಿದೆ. 250ಕ್ಕೂ ಹೆಚ್ಚು ರಸಗೊಬ್ಬರದ ಮೂಟೆಗಳು ಹಾನಿ ಆಗಿವೆ. ಬೆಳಗಾವಿ, : ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಬಹುತೇಕ ಕಡೆ ವ್ಯಾಪಕ …

Read More »

ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ತಾಯಂದಿರ ದಿನದ ಆ ಪ್ರಯುಕ್ತ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವ ಸಂದರ್ಭದಲ್ಲಿ ನಟ ಚೇತನ್​ ಚಂದ್ರ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ನಟನ ಕಾರಿಗೂ ಹಾನಿ ಮಾಡಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರು ಕಗ್ಗಲಿಪುರ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್​ ಚಂದ್ರ (Chetan Chandra) ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಬೆಂಗಳೂರಿನ ಕಗ್ಗಲಿಪುರ …

Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಏರು ಪೇರು.!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Advertisement ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ 92 ವರ್ಷದ ಮಾಜಿ ಮುಖ್ಯಮಂತ್ರಿಯನ್ನು ಏಪ್ರಿಲ್ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಶ್ವಾಸಕೋಶಶಾಸ್ತ್ರಜ್ಞ ಡಾ.ಸತ್ಯನಾರಾಯಣ ಮೈಸೂರು ಅವರಿಂದ ಚಿಕಿತ್ಸೆ ಪಡೆಯುತ್ತಿದ್ದರು.ಶನಿವಾರದ ವೇಳೆಗೆ, ಅವರು ಐಸಿಯುನಲ್ಲಿ ಚಿಕಿತ್ಸೆ ಮತ್ತು ಬೆಂಬಲವನ್ನು ಪಡೆಯುತ್ತಿದ್ದಾರೆ.   ಡಾ.ಸುನಿಲ್ ಕಾರಂತ್ ನೇತೃತ್ವದ ತೀವ್ರ …

Read More »

ಭೀಕರ ಅಪಘಾತದಲ್ಲಿ ಕನ್ನಡದ ಕಿರುತೆರೆ ಜನಪ್ರಿಯ ನಟಿ `ಪವಿತ್ರ ಜಯರಾಂ’ ನಿಧನ!

ಬೆಂಗಳೂರು : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಇಬ್ಬರು ಮಕ್ಕಳು ಇದ್ದಾರೆ. ಕನ್ನಡದ ರೋಬೋ ಫ್ಯಾಮಿಲಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ …

Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಮತ್ತೋರ್ವ ಮಹಾ ನಾಯಕನ ಹೆಸರು ಬಹಿರಂಗ ಪಡಿಸಿದ ಆರೋಪಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ವೈರಲ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ನವೀನ್ ಗೌಡ ಪೆನ್ ಡ್ರೈವ್ ಹಿಂದಿನ ಮತ್ತೋರ್ವ ಮಹಾ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾನೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ದಿನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದರು. ಆದರೆ ಇದೀಗ ವಿಡಿಯೋ ವೈರಲ್ ಪ್ರಕರಣದ ಆರೊಪಿ ನವೀನ್ ಗೌಡ, ಜೆಡಿಎಸ್ ಶಾಸಕರೊಬ್ಬರ ವಿರುದ್ಧವೇ ಸ್ಫೋಟಕ …

Read More »

ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ : ಶಾಸಕ ಎ.ಮಂಜು ಹೇಳಿಕೆ

ಮೈಸೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನವೀನ್ ಗೌಡ ಫೇಸ್ಬುಕ್ನಲ್ಲಿ ಪೆನ್ ಡ್ರೈವ್ ಅನ್ನು ಅರಕಲಗೂಡು ಶಾಸಕ ಎ ಮಂಜು ಅವರಿಗೆ ನೀಡಿದ್ದೇನೆ ಎಂದು ಪೋಸ್ಟ್ ಹಾಕಿದ್ದು, ಈ ಕುಡಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಶಾಸಕ ಎ ಮಂಜು ನನಗೆ ಮಾಹಿತಿ ಇರೋ ಪ್ರಕಾರ ಈ ಪ್ರಕಾರಣ ಇಟ್ಟುಕೊಂಡು ಜೆಡಿಎಸ್ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಆದರೆ ಯಾರಿಂದಲೂ ಅದು ಸಾಧ್ಯವಿಲ್ಲ …

Read More »

ಗುಡುಗು ಸಹಿತ ಭಾರೀ ಮಳೆ! ಸಿಡಿಲು ಬಡಿದು ಓರ್ವ ಬೈಕ್ ಸವಾರ ಸಾವು

ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಇಂದು ಬಾಗಲಕೋಟೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ, ಗಾಳಿ, ಮಿಂಚು, ಗುಡುಗಿನ‌ ಅಬ್ಬರ ಜೋರಾಗಿದ್ದು, ಸಿಡಿಲು ಬಡಿದು ಓರ್ವ ಬೈಕ್ ಸವಾರ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಮಳೆಗಿಂತ ಗುಡುಗು, ಸಿಡಿಲಿನ ಆರ್ಭಟ ಜೋರಾಗಿದ್ದು, ಮೃತ ಬೈಕ್​ ಸವಾರನನ್ನು ಪ್ರಕಾಶ್ ವಗ್ಗರ್ (21) ಎಂದು ಗುರುತಿಸಲಾಗಿದೆ. ಪ್ರಕಾಶ್ ಮೂಲತಃ ವಿಜಯಪುರ ಜಿಲ್ಲೆಯ ಗೋನಾಳ ಗ್ರಾಮದವರು …

Read More »

ನಗರದಲ್ಲಿ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದವರ ಸಂಖ್ಯೆ 30 ಲಕ್ಷಕ್ಕೆ ಏರಿಕೆ

ಬೆಂಗಳೂರಿನಲ್ಲಿ ಟ್ರಾಫಿಕ್‌ ನಿಯಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 2024ರ ಏಪ್ರಿಲ್‌ ವರೆಗೆ 30,61,524 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ದ್ವಿಚಕ್ರ ವಾಹನಗಳ ನಿಯಮ ಉಲ್ಲಂಘನೆ ಸಂಖ್ಯೆಯೇ ಶೇಕಡಾ 86.89 ರಷ್ಟಾಗಿದೆ. ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ ವಾಹನಗಳ ಸಂಖ್ಯೆಯಲ್ಲಿ ಆಟೋ ಸಂಖ್ಯೆ 5971 ಆಗಿದ್ದು, ಕಾರುಗಳ ನಿಯಮ ಉಲ್ಲಂಘನೆ ಮಾಡಿದ ಸಂಖ್ಯೆ 3,67,006 ಆಗಿದೆ. 4405 ಗೂಡ್ಸ್‌ ಗಾಡಿಗಳ ಮೇಲೆ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದ್ದು, …

Read More »