ವಿಟಿಯು ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ್ ಹೇಳಿದರು. ಸೋಮವಾರ ಬೆಳಗಾವಿ ಸಂಗೋಳಿ ರಾಯಣ್ಣ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಣಿ ಚನ್ನಮ್ಮ ವಿವಿಯ 12ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಮಾಜಿ ಹಿರಿಯ ಅಧಿಕಾರಿ, ಯು.ಎನ್.ಆಹಾರ ಮತ್ತು ಕೃಷಿ ಸಂಸ್ಥೆ ನಿಟ್ಟೆ ವಿವಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಮಾಡಲಿದ್ದಾರೆ. ಉನ್ನತ …
Read More »Yearly Archives: 2024
ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು.
ಬೆಳಗಾವಿಯ ಜಿಲ್ಲಾ ರೋಲರ್ ಸ್ಕೆಟಿಂಗ್ ಅಸೋಸಿಯೇಷನ ಮತ್ತು ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸ್ಕೆಟಿಂಗ್ ಸ್ಪರ್ಧೆ ಉತ್ಸಾಹದಲ್ಲಿ ನಡೆಯಿತು. ಏಂಜಲ್ ಫೌಂಡೇಶನ ಗ್ರಾಮೀಣ ವಿಕಾಸ್ ಮತ್ತು ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಮೀನಾ ಬೆನಕೆ ಅವರು ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ವೇಳೆ ಉಪಾಧ್ಯಕ್ಷ ದೀಪಕ್ ಸುತಾರ್, ತರಬೇತಿದಾರ ಸೂರ್ಯಕಾಂತ್ ಹಿಂಡಲಗೆಕರ, ಏಂಜಲ್ ಬೆನಕೆ, ಅಲಿಷ್ಕ ಬೆನಕೆ, ಇನ್ನುಳಿದವರು ಭಾಜಿಯಾಗಿದ್ದರು. ಅದರಂತೆ ರಾಜ್ಯ …
Read More »ಬಂಡಿಗಣಿಮಠ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮ ಭಾಗವಹಿಸಿದ ಸತೀಶ ಜಾರಕಿಹೊಳಿ
ದಾಸೋಹರತ್ನ ಚಕ್ರವರ್ತಿ ದಾನೇಶ್ವರರು ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿಮಠ ಇವರ ದಿವ್ಯ ಸಾನಿಧ್ಯದಲ್ಲಿ ಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭಾಗವಹಿಸಿ ಮಾತನಾಡಿದರು ಈ ವೇಳೆ ಶಾಸಕರಾದ ಶ್ರೀ ಸಿದ್ದು ಸವದಿ, ಶ್ರೀ ವಿಶ್ವಾಸ ವೈದ್ಯ, ಮುಖಂಡರಾದ ಶ್ರೀ ಸಿದ್ದು ಕೊಣ್ಣೂರ್, ಶ್ರೀ ಸುಶೀಲಕುಮಾರ್ ಬೆಳಗಲಿ ಹಾಗೂ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.
Read More »ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..!
ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಟೆಕ್ಕಿ ಯುವತಿ ಜೊತೆ ಅಸಭ್ಯ ವರ್ತನೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಿರಣ್ ಸಸ್ಪೆಂಡ್..! ಪಾಸ್ ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡ್ನಾ ಪೊಲೀಸಪ್ಪ? ಒಂದೇ ಒಂದು ಹಗ್ ಮಾಡು ಯಾರಿಗು ಹೇಳುವುದಿಲ್ಲ ಅಂತಾ ಟೆಕ್ಕಿಗೆ ಹಿಂಸೆ.. ಬ್ಯಾಟರಾಯನಪುರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಅಮಾನತು..! ಬಾಪೂಜಿನಗರದ ಯುವತಿಯೊಬ್ಬಳು ಪಾಸ್ ಪೋರ್ಟ್ಗೆ ಅರ್ಜಿ ಸಲ್ಲಿಸಿದ್ಲು ಈ ವೇಳೆ ಪಾಸ್ ಪೋರ್ಟ್ ವೆರಿಫಿಕೇಷನ್ ಅಂತಾ ಎರಡು …
Read More »ಓಲಾ, ಊಬರ್, ರ್‍ಯಾಪಿಡೋಗೆ ಸೆಡ್ಡು: ನಗರ ಮೀಟರ್ ಆ್ಯಪ್ ಮೂಲಕ ಕಡಿಮೆ ಬೆಲೆಗೆ ಪ್ರಯಾಣ
ಡಿಸೆಂಬರ್ 02: ಕಿಮೀಗೆ ಇಂತಿಷ್ಟೇ ದರವನ್ನು ಪ್ರಯಾಣಿಕರಿಂದ ತೆಗೆದುಕೊಳ್ಳಬೇಕೆಂದು ಕರ್ನಾಟಕ ಸಾರಿಗೆ ಇಲಾಖೆ (Karnataka Transport) ಓಲಾ (Ola), ಊಬರ್ (Ubar) ಆಟೋಗಳಿಗೆ ದರ ನಿಗದಿ ಮಾಡಿದೆ. ಆದರೆ, ಈ ನಿಯಮವನ್ನು ಮೀರಿ ಓಲಾ, ಊಬರ್ ಕಂಪನಿಗಳು ಮಳೆ ಬಂದಾಗ ಒಂದು ದರ, ಪೀಕ್ ಅವರ್ನಲ್ಲಿ ಒಂದು ದರ ಎಂದು ದುಪ್ಪಟ್ಟು ಹಣವನ್ನು ವಸೂಲಿ ಮಾಡಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಇಬ್ಬರು ಯುವಕರು ನಗರ ಮೀಟರ್ ಆ್ಯಪ್ …
Read More »ಬಿಜೆಪಿ ಶಿಸ್ತು ಸಮಿತಿ ನೋಟಿಸ್: ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ
ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ಶೋಕಾಸ್ ನೋಟಿಸ್ ನೀಡಿರುವ …
Read More »ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದ .D.C.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಜಿಲ್ಲೆಯ ರಾಮತೀರ್ಥ ನಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರಕ್ಕೆ ಶನಿವಾರ (ನ.30) ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಪರಿಶೀಲಿಸಿದರು. ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಆಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ದತ್ತು ಸ್ವೀಕಾರ ಕೇಂದ್ರದ ಮುಖ್ಯಸ್ಥರಿಗೆ ಹಾಗೂ ಮಕ್ಕಳ ಆರೋಗ್ಯ ಮತ್ತು ಕಾಳಜಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಮಾನ್ಯ ಜಿಲ್ಲಾಧಿಕಾರಿಗಳು …
Read More »ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವ
ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರದ ವಿಡಪನಕಲ್ ಬಳಿ ನಡೆದಿದೆ. ಬಳ್ಲಾರಿ ಬಿಮ್ಸ್ ಆಸ್ಪತ್ರೆಯ ಡಾ. ಗೋವಿಂದರಾಜಲು, ಡಾ.ಯೋಗೇಶ್ ಹಾಗೂ ವಕೀಲ ವೆಂಕಟನಾಯ್ಡು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ವೈದ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಾಸ್ ಆಗುತ್ತಿದ್ದಾಗ …
Read More »ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ
ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ …
Read More »150 ಅಡಿಗೂ ಅಧಿಕ ಆಳದ ಕಂದಕ್ಕೆ ಉರುಳಿದ ಬಸ್
ಪಶ್ಚಿಮ ಬಂಗಾಳ-ಸಿಕ್ಕಿಂ ಗಡಿ ಪ್ರದೇಶದ ತೀಸ್ತಾ ನದಿ ತೀರದಲ್ಲಿ ಈ ಬಸ್ 150 ಅಡಿಗೂ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 6 ಮಂದಿ ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪೊಲೀಸರು ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರಕ್ಕೆಳೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವುದಾಗಿ ಕಲಿಂಪಾಗ್ ಜಿಲ್ಲೆಯ ಎಸ್‌ಪಿ ಶ್ರೀಹರಿ ಪಾಂಡೆ …
Read More »