ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸಿದರು.ಶಾಸಕ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲಿಸಿದರು.
Read More »Yearly Archives: 2024
ಲೈಂಗಿಕ ಹಗರಣ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್
ಹಾಸನ: ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಹಾಗೂ ಅವರ ಪುತ್ರ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಸೋಮವಾರ, ಸದ್ಯ ಸುತ್ತುತ್ತಿರುವ ವಿಡಿಯೋಗಳ ಆಧಾರದ ಮೇಲೆ ಗುರುತಿಸಲ್ಪಟ್ಟ ಐವರು ಮಹಿಳೆಯರನ್ನು ಎಸ್‌ಐಟಿಯ ಹಿರಿಯ ಅಧಿಕಾರಿಗಳು ವಿಚಾರಣೆಗೆ …
Read More »ಮೋದಿ ದೇಶ ಕಂಡ ಮಹಾನ್ ಸುಳ್ಳುಗಾರ: ಸಚಿವ ಸಂತೋಷ ಲಾಡ್
ಶಿವಮೊಗ್ಗ: ‘ದೇಶ ಕಂಡ ಮಹಾನ್ ಸುಳ್ಳುಗಾರ ಪ್ರಧಾನಿ ನರೇಂದ್ರ ಮೋದಿ. ಅವರು ಹೇಳುತ್ತಿರುವ ಸುಳ್ಳುಗಳೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಆಗಲಿವೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಬೇರೆ ಬೇರೆ ಪಕ್ಷದವರು ಬಹಳಷ್ಟು ಜನರು ಪ್ರಧಾನ ಮಂತ್ರಿಗಳಾಗಿದ್ದಾರೆ.ಆದರೆ, ನರೇಂದ್ರ ಮೋದಿ ಅವರಷ್ಟು ಸುಳ್ಳನ್ನು ಯಾರೂ ಹೇಳಿಲ್ಲ ಎಂದು ಲೇವಡಿ ಮಾಡಿದರು. ‘ನರೇಂದ್ರ ಮೋದಿ ತಮ್ಮ 10 ವರ್ಷಗಳ ಆಡಳಿತದ …
Read More »ಗೃಹಲಕ್ಷ್ಮೀ ಯೋಜನೆ 80 ಸಾವಿರ ಅರ್ಜಿ ತಿರಸ್ಕಾರ
ಗೃಹಲಕ್ಷ್ಮೀ ಯೋಜನೆಯ ಮೂಲಕ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣ ಬ್ಯಾಂಕ್ ಖಾತೆಗೆ ಜಮೆ ಆಗುತ್ತಿದೆ. ಆದ್ರೆ ಇದುವರೆಗೆ ಹಣ ಪಡೆದು ಕೊಂಡ ಎಲ್ಲರಿಗೂ ಕೂಡ ಗೃಹಲಕ್ಷ್ಮೀಯೋಜನೆಯ ಹಣ ಸಿಗುತ್ತೆ ಅನ್ನೋ ಗ್ಯಾರಂಟಿ ಇಲ್ಲ. ಅದ್ರಲ್ಲೂ ಯೋಜನೆಗೆ ಅರ್ಜಿ ಸಲ್ಲಿಸಿದ 80 ಸಾವಿರ ಮಹಿಳೆಯರ ಅರ್ಜಿ ತಿರಸ್ಕಾರಗೊಂಡಿದೆ. ಕರ್ನಾಟಕದಲ್ಲಿ ಸುಮಾರು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಮೂಲಕ ಹಣವನ್ನು ಪಡೆದುಕೊಂಡಿರುವ 26 ಸಾವಿರ ಮಹಿಳೆಯರ ಖಾತೆಗೆ ಇನ್ಮುಂದೆ …
Read More »ರಾಜ್ಯದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ …
Read More »ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ನಮ್ಮ ರಾಜ್ಯದಲ್ಲಿ ಆಗಿದ್ದು ಖೇದಕರ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಗೃಹ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹರಿದಾಡುತ್ತಿವೆ. ಈ ಎಲ್ಲ ವಿಚಾರಗಳನ್ನು ಹಾಸನ ಬಿಜೆಪಿ ಮುಖಂಡ ದೇವರಾಜಗೌಡ ಡಿಸೆಂಬರ್ ಸಮಯದಲ್ಲೇ ವಿಜಯೇಂದ್ರ …
Read More »ಸೋಷಿಯಲ್ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ
ಸೋಷಿಯಲ್ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್‌ನೈಲ್ ಮೂಲಕ ಅವಹೇಳನ ಮಾಡುವುದನ್ನು ವಿರೋಧಿಸಿದ್ದಾರೆ. ಈಗ ನಟ ಶಿವರಾಜಕುಮಾರ್ ಸಹ ಸೋಷಿಯಲ್ ಮೀಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಶನಿವಾರ ಬೆಳಿಗ್ಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆದ “ಫಾದರ್’ ಚಿತ್ರದ ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಎನ್ನುವುದು ಆಟ ಸಾಮಾನು ಆಗಿಬಿಟ್ಟಿದೆ. ನಾವಿದ್ದ ಕಾಲ ಬಹಳ ಚೆನ್ನಾಗಿತ್ತು. ನಾವು …
Read More »ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ
ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಆದೇಶಿಸಿದ್ದಾರೆ.ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ …
Read More »ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಹಿಂದಿನ ಮನೆಯ ಸಹಾಯಕರು ನೀಡಿದ ದೂರಿನ ಮೇರೆಗೆ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಲಾಗಿದೆ. …
Read More »ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ
ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಳೆ ಸೋಮವಾರದಿಂದ (ಏಪ್ರಿಲ್ 29) ನಡೆಯಲಿರುವ ಪೂರಕ ಪರೀಕ್ಷೆಗಳಿಗೆ (ಪರೀಕ್ಷೆ-2) ಹಾಜರಾಗುತ್ತಿದ್ದಾರೆ. ಇದೀಗ ಈ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತಾರೆ. ಹೀಗಾಗಿ ಅವರಿಗೆ ತಮ್ಮ ನಿವಾಸದಿಂದ …
Read More »