Breaking News

Yearly Archives: 2024

ಲೈಂಗಿಕ ದೌರ್ಜನ್ಯಕ್ಕೊಳಗಾದ 14 ವರ್ಷದ ಬಾಲಕಿಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಅನುಮತಿ!

ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆಯನ್ನು ಕೊನೆಗೊಳಿಸುವಂತೆ ಕೋರಿ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಗರ್ಭಪಾತದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್ ಆದೇಶವು ಅಪ್ರಾಪ್ತೆಯ ಮೇಲೆ ಗರ್ಭಧಾರಣೆಯ ಪರಿಣಾಮವನ್ನು ಪರಿಗಣಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ.   ಮುಂದುವರಿದ ಹಂತದಲ್ಲಿ ಗರ್ಭಧಾರಣೆಯನ್ನು ಕೊನೆಗೊಳಿಸುವುದರಿಂದ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ಭ್ರೂಣದ ಜನನಕ್ಕೆ ಕಾರಣವಾಗುತ್ತದೆ ಎಂದು ಹೇಳಿ ಗರ್ಭಧಾರಣೆಯನ್ನು ಕೊನೆಗೊಳಿಸಬೇಕೆಂಬ …

Read More »

ನೇಹಾ ಹತ್ಯೆ: ಸರ್ಕಾರ ಪ್ರಕರಣವನ್ನು ತನ್ನದೇ ರೀತಿಯಲ್ಲಿ ನಿಭಾಯಿಸುತ್ತದೆ; ಡಿ.ಕೆ .ಶಿ.

ಬೆಂಗಳೂರು: ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸುವುದಕ್ಕೆ ತಮ್ಮ ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ. ಆದರೆ, ತಮ್ಮ ಸರ್ಕಾರ ಪ್ರಕರಣವನ್ನು ತನ್ನದೇ ಆದ ರೀತಿಯಲ್ಲಿ ನಿಭಾಯಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ. ಕಳೆದ ವಾರ ಬಿವಿಬಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಕೊಲ್ಲಲ್ಪಟ್ಟ ಕಾಂಗ್ರೆಸ್ ಕೌನ್ಸಿಲರ್‌ನ ಮಗಳು ನೇಹಾ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಬಿಜೆಪಿ ಒತ್ತಾಯಿಸಿದ್ದು, ಪೊಲೀಸರು ಪ್ರಕರಣವನ್ನು …

Read More »

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

ಬೆಳಗಾವಿ : ಹುಬ್ಬಳ್ಳಿಯ ಕಾಲೇಜಿನಲ್ಲಿ ಕೊಲೆಯಾದ ನೇಹಾ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಈ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಅವರಿಗೆ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ. ಬಿಜೆಪಿಯವರು ಜಾಣ ಕುರುಡರಷ್ಟೇ ಅಲ್ಲ ಜಾಣ ಕಿವುಡರು ಹೌದು. ಅವರು ಬೇಕಾದಾಗ …

Read More »

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಹುಬ್ಬಳ್ಳಿ: ಭ್ರಷ್ಟಚಾರಿಗಳು ಹಾಗೂ ಪರಿವಾರವಾದಿಗಳ ಸಮ್ಮಿಲ ನವೇ ಐಎನ್‌ಡಿಐಎ ಮೈತ್ರಿಕೂಟ ವಾಗಿದೆ. ಭ್ರಷ್ಟಾಚಾರಿಗಳ ರಕ್ಷಣೆಯೇ ಮೈತ್ರಿಕೂಟದ ಮುಖ್ಯ ಅಜೆಂಡಾ ಆಗಿದೆ. ಮೈತ್ರಿಕೂಟದೊಂದಿಗೆ ಇರುವವರಲ್ಲಿ ಅರ್ಧ ಜನ ಜಾಮೀನಿನಲ್ಲಿದ್ದರೆ, ಇನ್ನರ್ಧಷ್ಟು ಜನ ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವ್ಯಂಗ್ಯವಾಡಿದರು. ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ರವಿವಾರ ಸಂಜೆ ವಿವಿಧ ಸಮಾಜಗಳ ಪ್ರಮುಖರು, ಕೇಂದ್ರ ಸರಕಾರದ ಹಲವು ಯೋಜನೆಗಳ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರ ಇದ್ದಾಗ ಹಗರಣಗಳನ್ನು ನಡೆಸಿ, ಭ್ರಷ್ಟಾಚಾರದಲ್ಲಿ …

Read More »

ಸರಕಾರದಿಂದ ತುಘಲಕ್‌ ದರ್ಬಾರ್‌: ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್‌ ಸರಕಾರದಿಂದ ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ. ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್‌ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು. ರವಿವಾರ ರಾಜ್ಯ ಬಿಜೆಪಿ ಮಾಧ್ಯಮ …

Read More »

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಬೆಂಗಳೂರು: ಸಿನೆಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾ ಗಿದ್ದು, ಅವರನ್ನು ಮೈಸೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಳಿ ನಾಯಕರಾಗಿರುವ “ಬಘೀರ’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಸಾಹಸ ದೃಶ್ಯಗಳ ಚಿತ್ರೀಕರಣ ಸಂದರ್ಭ ಗಾಯವಾಗಿದೆ.

Read More »

4 ವರ್ಷದ ಪದವಿಗೂ ಪಿಎಚ್‌.ಡಿ ಪ್ರವೇಶಕ್ಕೆ ಅವಕಾಶ

ಹೊಸದಿಲ್ಲಿ: ಕನಿಷ್ಠ ಶೇ.75ರಷ್ಟು ಅಂಕಗಳೊಂದಿಗೆ 4 ವರ್ಷಗಳ ಪದವಿ ಪೂರೈಸಿರುವ ವಿದ್ಯಾರ್ಥಿಗಳು ನೇರ ವಾಗಿ ಎನ್‌ಇಟಿ(ನೆಟ್‌) ಪರೀಕ್ಷೆ ಬರೆದು, ಪಿಎಚ್‌.ಡಿ ಪ್ರವೇಶ ಪಡೆಯಬಹುದು ಎಂದು ಯುಜಿಸಿ ಅಧ್ಯಕ್ಷ ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ. ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌(ಜೆಆರ್‌ಎಫ್) ಜತೆಗೆ ಅಥವಾ ಇಲ್ಲದೆಯೇ ಪಿಎಚ್‌.ಡಿ ಪಡೆಯಲು ಅಭ್ಯರ್ಥಿಗಳು 4 ವರ್ಷ ಪದವಿಯಲ್ಲಿ ಕನಿಷ್ಠ ಶೇ.75ರಷ್ಟು ಅಂಕಗಳು ಅಥವಾ ಸಮಾನ ಗ್ರೇಡ್‌ ಹೊಂದುವುದು ಅಗತ್ಯವಿದೆ. ಎಸ್‌ಸಿ, ಎಸ್‌ಟಿ, ಒಬಿಸಿ(ಕೆನೆ ಪದರ ಕೆಳಗಿನವರು), ಅಂಗವಿಕಲರು, ಆರ್ಥಿಕವಾಗಿ ಹಿಂದುಳಿದ …

Read More »

ಖಾಸಗೀಕರಣಕ್ಕೆ ಕೇಂದ್ರ ಹುನ್ನಾರ: ರಾಹುಲ್‌ ಗಾಂಧಿ ಆರೋಪ

ಹೊಸದಿಲ್ಲಿ: “ರೈಲ್ವೇ ಅಸಮರ್ಥ ಎಂದು ಬಿಂಬಿಸುವ ಮೂಲಕ ಖಾಸಗೀಕರಣ ಗೊಳಿಸಿ, ನಿರ್ವಹಣೆಯನ್ನು ತಮ್ಮ ಆಪ್ತರಿಗೆ ಮಾ ರಾಟ ಮಾಡುವ ಉದ್ದೇಶವನ್ನು ಮೋದಿ ಸರಕಾರ ಹೊಂದಿದೆ ಎಂದು ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ರೈಲಲ್ಲಿ ಜನ ತುಂಬಿ ತುಳುಕುತ್ತಿರುವ ವೀಡಿಯೋ ಒಂದನ್ನು ರಾಹುಲ್‌ ಟ್ವೀಟ್‌ ಮಾಡಿದ್ದಾರೆ. “ಮೋದಿ ಆಡಳಿತದಲ್ಲಿ ರೈಲಿನಲ್ಲಿ ಓಡಾಡುವುದು ಜನರಿಗೆ ಶಿಕ್ಷೆಯಂತಾಗಿದೆ. ಐಷಾರಾಮಿ ರೈಲುಗಳ ಪ್ರಚಾರ ಮಾಡುತ್ತಾ, ಸಾಮಾನ್ಯ ಕೋಚ್‌ಗಳನ್ನು ಕೇಂದ್ರ ಕಬಳಿಸುತ್ತಿದೆ. ಇದನ್ನು ಉಳಿಸಬೇಕಾದರೆ ಮೋದಿ ಸರಕಾರವನ್ನು ಕೆಳಗಿಳಿಸಲೇ …

Read More »

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

ಕೋಲಾರ: ಪ್ರಧಾನಿ ಮೋದಿಯವರು ಶನಿ ಎಂದು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿವಾದಿತ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ರವಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. “ಮೋದಿ ಸಾಹೇಬರೇ, ದೇವರ ಮೇಲೆ ನಂಬಿಕೆ ಇರಿಸಿಕೊಂಡು ಕಾಯುತ್ತಿದ್ದೇವೆ. ಜೂ. 4ರಂದು ದೇಶಕ್ಕೆ ಹಿಡಿದ ಶನಿ ಬಿಡುತ್ತದೆ. ನೀನು ದೇಶಕ್ಕೆ ಹಿಡಿದ ಶನಿ ಕಣಯ್ನಾ’ ಎಂದು ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ನಾಯಕಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬಡವರಿಗೆ, ಹೆಣ್ಣು …

Read More »

ಇತಿಹಾಸ ಬರೆದ 17ರ ಹುಡುಗ;

ಟೊರೆಂಟೊ: ಹದಿಹರೆಯದ ಭಾರತದ ಗ್ರ್ಯಾನ್ ಮಾಸ್ಟರ್ ಡಿ ಗುಕೇಶ್ ಅವರು ಇತಿಹಾಸ ಬರೆದಿದ್ದಾರೆ. ಕ್ಯಾಂಡಿಡೇಟ್ಸ್ ಚೆಸ್ ಟೂರ್ನಮೆಂಟ್ ನಲ್ಲಿ ಚಾಂಪಿಯನ್ ಆಗಿ ಮೂಡಿಬಂದ 17 ವರ್ಷದ ಗುಕೇಶ್, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಕ್ಯಾಂಡಿಡೇಟ್ಸ್ ಕಪ್ ಗೆದ್ದ ಕೇವಲ ಎರಡನೇ ಭಾರತೀಯನಾಗಿ ಗುಕೇಶ್ ಮೂಡಿಬಂದಿದ್ದಾರೆ. ಈ ಹಿಂದೆ ವಿಶ್ವನಾಥನ್ ಆನಂದ್ ಅವರು ಈ ಸಾಧನೆ ಮಾಡಿದ್ದರು. ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ …

Read More »