Breaking News

Yearly Archives: 2024

ಲೋಕಸಭೆ ಚುನಾವಣೆ `ಮತದಾನದ ದಿನ’ ಸಾರಿಗೆ ನೌಕರರಿಗೆ `ವೇತನ ಸಹಿತ ರಜೆ’ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ 26-04-2024 & 07-05-2024 ರಂದು ನಡೆಯುವ ಲೋಕಸಭಾ ಚುನಾವಣೆ-2024 ರಲ್ಲಿ ರಾಜ್ಯ ಸಾರಿಗೆ ನೌಕರರಿಗೆ ಮತ ಚಲಾಯಿಸಲು ರಜೆ / ಅನುಮತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ:26-04-2024 & 07-05-2024 ರಂದು ಕರ್ನಾಟಕ ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆ-2024 ರ ನಿಮಿತ್ತ ರಾಜ್ಯ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಿದ್ದು. ಈ ಅಧಿಸೂಚನೆಯಲ್ಲಿ ಸೂಚಿಸಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ …

Read More »

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆಹೋಗಲಿರುವ ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ)ವು ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿರುವುದನ್ನು ಪ್ರಶ್ನಿಸಿ, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ ಎಂದು ದಿಲ್ಲಿ ಸಚಿವ ಸೌರಭ್ ಭಾರಧ್ವಜ್ ಹೇಳಿದ್ದಾರೆ. ಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ಹಿರಿಯ ನಾಯಕರೂ ಆಗಿರುವ ಸೌರಭ್ ಭಾರಧ್ವಜ್, ‘ನಾವು ಹೈಕೋರ್ಟ್‌ …

Read More »

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡಿದ್ದೇ ಜೋಶಿ: ದಿಂಗಾಲೇಶ್ವರ ಶ್ರೀ

ದಾವಣಗೆರೆ: ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಈವರೆಗೆ ಯಾವುದೇ ರಾಜಕೀಯ ಪಕ್ಷಗಳಿಂದ ಆಹ್ವಾನ ಬಂದಿಲ್ಲ ಎಂದು ಶಿರಹಟ್ಟಿ ಜಗದ್ಗುರು ಶ್ರೀ ಫಕಿರೇಶ್ವರ ಸಂಸ್ಥಾನ ಮಠದ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು. ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ, ವಚನಾನಂದ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಪಕ್ಷಗಳಿಂದ ಆಹ್ವಾನ ಬಂದರೂ ಮೊದಲು ಭಕ್ತರು ಹಾಗೂ ಸಾರ್ವಜನಿಕರ ಮುಂದೆ ವಿಚಾರ ಇಡುತ್ತೇನೆ. …

Read More »

ಪಂಚ ಗ್ಯಾರಂಟಿಯಿಂದ ಬಡ ಕುಟುಂಬಕ್ಕೆ ನೆರವು: ಷಣ್ಮುಖ ಶಿವಳ್ಳಿ

ರಟ್ಟಗೇರಿ (ಗುಡಗೇರಿ): ‘ನಮ್ಮ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿಯನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ. ಇದರಿಂದ ಬಡವರಿಗೆ ನೆರವಾಗುತ್ತದೆ’ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಹೇಳಿದರು. ಕುಂದಗೋಳ ತಾಲ್ಲೂಕಿನ ಮಂಡಿಗನಾಳ, ರಟ್ಟಗೇರಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ ಅಸೂಟಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು. ‘ಬಿಜೆಪಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳು ಇನ್ನು ಭರವಸೆಯಾಗೆ ಉಳಿದಿದೆ. …

Read More »

ಪಕ್ಷಿಗಳ ಬಾಯಾರಿಕೆ ನೀಗಿಸಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ …

Read More »

ಹನುಮಾನ್ ಚಾಲೀಸ ಪಠಣಕ್ಕೆ ನಿರ್ಬಂಧ ಇದೆಯೇ?: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ? ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. …

Read More »

ನಿರ್ವಹಣೆ ಕೊರತೆ: ಪಾಳುಬಿದ್ದ 150ಕ್ಕೂ ಹೆಚ್ಚು ಗರಡಿಮನೆ

ಹುಬ್ಬಳ್ಳಿ: ‘ಧಾರವಾಡದ ಪೈಲ್ವಾನ್ರ ಅಂದ್ರ ಹಗರಂತ ಮಾಡಿದ್ರೇನ..? ಕೊಲ್ಹಾಪುರ, ಪುಣಾ, ಬಾಂಬೆ.. ಹಿಂಗ ಎಲ್ಲಿಗೇ ಕುಸ್ತಿ ಆಡಾಕ ಹೋದ್ರ ಕಣದಾಗ ನಂಬರ್ ಹಚ್ಚಲಾರದ ಬರ್ತಿರಲಿಲ್ಲ. ಕುಸ್ತಿಗಿ ರಾಜ್ಯದಾಗ ಧಾರವಾಡ ಜಿಲ್ಲಾ ಹೆಸರಾಗಿತ್ತ.. ಆದ್ರ ಈಗ ಹಂಗ ಉಳಿದಿಲ್ಲರೀ’…! ಹೀಗೆ ನೋವಿನಿಂದ ಹೇಳುತ್ತಾರೆ ಕುಸ್ತಿ ಪೈಲ್ವಾನರು. ನಿರ್ವಹಣೆ ಕೊರತೆಯಿಂದ ಪಾಳು ಬಿದ್ದು ಇತಿಹಾಸದ ಪುಟ ಸೇರುತ್ತಿರುವ ಗರಡಿ ಮನೆಗಳೇ ಇದಕ್ಕೆ ಕಾರಣ ಎಂಬುದು ಅವರ ಬೇಸರ. ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ಮನೆಗೊಬ್ಬರು …

Read More »

ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್‌ ಫಿಕ್ಸಿಂಗ್‌ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. …

Read More »

ಬತ್ತಿದ ಜೀವನದಿ; ಹೆಚ್ಚಿದ ದುಗುಡ

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್‌ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ …

Read More »

ಹಿರೇಬಾಗೇವಾಡಿ: 25 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ

ಹಿರೇಬಾಗೇವಾಡಿ: 25 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಹಿರೇಬಾಗೇವಾಡಿ ಸಜ್ಜಾಗುತ್ತಿದ್ದು, ಊರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 1998ರ ಮೇ ತಿಂಗಳಲ್ಲಿ ಹಿರೇಬಾಗೇವಾಡಿಯಲ್ಲಿ ಜಾತ್ರೆ ನಡೆದಿತ್ತು. ಈ ಬಾರಿ ಏಪ್ರಿಲ್‌ 12ರಿಂದ ಮೇ 3ರವರೆಗೆ ಜಾತ್ರೆ ನಡೆಯಲಿದ್ದು, 21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಜಾತ್ರೆ ಪ್ರಯುಕ್ತ, ಗ್ರಾಮಸ್ಥರು ತಮ್ಮ ಮನೆಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡವರು, ತ್ವರಿತವಾಗಿ ಮುಗಿಸುವುದರಲ್ಲಿ ನಿರತವಾಗಿದ್ದಾರೆ. ಇನ್ನೂ ಕೆಲವರು …

Read More »