ಮಂಡ್ಯ: ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ಪತ್ರದಲ್ಲಿ ಒಟ್ಟು 219 ಕೋಟಿ ರೂ.ಆಸ್ತಿ ಘೋಷಣೆ ಮಾಡಿಕೊಂಡಿದ್ದು, ಚರಾಸ್ತಿ, ಸ್ಥಿರಾಸ್ತಿ ಎರಡರಲ್ಲೂ ಕುಮಾರಸ್ವಾಮಿಗಿಂತ ಪತ್ನಿ ಅನಿತಾ ಕುಮಾರಸ್ವಾಮಿ ಹೆಚ್ಚು ಶ್ರೀಮಂತರಾಗಿದ್ದಾರೆ. ಕುಮಾರಸ್ವಾಮಿ ಬಳಿ 10.41 ಕೋಟಿ ರೂ. ಹಾಗೂ ಅನಿತಾ ಅವರ ಬಳಿ 90.32 ಕೋಟಿ ರೂ. ಚರಾಸ್ತಿ ಇದೆ. ಕುಮಾರಸ್ವಾಮಿ ಅವರ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗಿ 1.20 ಕೋಟಿ ರೂ. …
Read More »Yearly Archives: 2024
ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು
ಬೆಂಗಳೂರು,- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು.
Read More »ಎಲ್ಲರ ಮನಗೆದ್ದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್- ಹಿರಿಯ ವಕೀಲ ದ್ವಿವೇದಿ ಜುಗಲ್ ಬಂದಿ
ನವದೆಹಲಿ,- ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ.ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ.
Read More »ತೆಲಂಗಾಣ ಔಷಧ ಘಟಕ ಸ್ಫೋಟ
ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ಕಂಪನಿ ಘಟಕದ ರಾಸಾಯನಿಕ ರಿಯಾಕ್ಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಿಲ್ಲೆಯ ಹತ್ತನೂರ ಮಂಡಲದ ಚಂದಾಪುರ ಗ್ರಾಮದಲ್ಲಿರುವ ಎಸ್‌ಬಿ ಆರ್ಗಾನಿಕ್ಸ್ ಲಿಮಿಟೆಡ್‌ನ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದರು. ಗುರುವಾರ ಕಾರ್ಖಾನೆಯ ಆವರಣದಲ್ಲಿ ಅವಶೇಷಗಳಡಿ ಒಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಬುಧವಾರ ರಾತ್ರಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ …
Read More »ಬಂತು.. ಬಂತು.. ಮಳೆ ಬಂತು!
ಮಳೆ.. ಮಳೆ.. ಮಳೆ.. ಹೀಗೆ ಮಳೆಗಾಗಿ ಕಾದು ಕುಳಿತಿದ್ದ ಕನ್ನಡಿಗರಿಗೆ ಇದೀಗ ಸಿಹಿಸುದ್ದಿ ಸಿಕ್ಕಿದೆ. ನಿನ್ನೆ ಕೊಡಗು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬಿದ್ದಿದೆ. ಹಾಗೇ ಇದೇ ಸಮಯದಲ್ಲಿ ಮುಂದಿನ ಕೆಲವೇ ದಿನದಲ್ಲಿ ಮಳೆ ವಿಚಾರದಲ್ಲಿ ಭರ್ಜರಿ ಸಿಹಿಸುದ್ದಿ ಸಿಗುವುದು ಪಕ್ಕಾ ಆಗಿದೆಹಾಗಾದ್ರೆ ಏನದು ಸಿಹಿಸುದ್ದಿ..? ಕರ್ನಾಟಕದ ಯಾವ ಯಾವ ಜಿಲ್ಲೆಯಲ್ಲಿ ಭರ್ಜರಿ ಮಳೆ ಬೀಳಲಿದೆ? ಬನ್ನಿ ಪೂರ್ತಿ ಮಾಹಿತಿ ತಿಳಿಯೋಣ. ಅಂತೂ ಕರ್ನಾಟದಲ್ಲಿ ಮಳೆಯ …
Read More »ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ 3 ಸಾವಿರ,ಗೃಹಜ್ಯೋತಿ 300 ಯುನಿಟ್‌ಗೆ ಹೆಚ್ಚಳ?
ಲಿಂಗಸುಗೂರು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಲಕ್ಷ್ಮೀ ಯೋಜನೆ 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ್ ಭರವಸೆ ನೀಡಿದರು. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಜಾರಿಗೊಂಡು ಮಹಿಳೆಯರು, ಬಡವರು, ನಿರುದ್ಯೋಗಿಗಳಿಗೆ ಆಸರೆಯಾಗಿವೆ. ಕಳೆದ ಎಂಟು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ 36 ಸಾವಿರ ಕೋಟಿ ರೂ. ಖರ್ಚು ಮಾಡಲಾಗಿದೆ. ಈ ವರ್ಷ 56 ಸಾವಿರ ಕೋಟಿ ರೂ. …
Read More »10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ
ಬೀದರ್: ‘ಏ.10ರಂದು ಭಾಲ್ಕಿ ಪಟ್ಟಣದಲ್ಲಿ ಮರಾಠ ಸಮಾಜದ ಶಕ್ತಿ ಪ್ರದರ್ಶನ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ಮುಖಂಡರೂ ಆದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದ್ಮಾಕರ ಪಾಟೀಲ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಕಲ ಮರಾಠ ಸಮಾಜದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಅಂದಿನ ಸಮಾವೇಶದಲ್ಲಿ ಸುಮಾರು 1 ಲಕ್ಷ ಮರಾಠ ಸಮುದಾಯದವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು. ಸಮಾಜವು ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದು, 2ಎ ಮೀಸಲಾತಿ ಕಲ್ಪಿಸುವುದು, …
Read More »ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದೆ ಸಾವು..!
ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವೃದ್ದೆ ಸಾವನ್ನಪ್ಪಿದ ಘಟನೆ ಇಂದು ಬೆಂಗಳೂರಲ್ಲಿ ನಡೆದಿದೆ. ಮೃತರನ್ನು ಗಂಗಾರೆಡ್ಡಿ(85) ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ವೃದ್ದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Read More »ಏಪ್ರಿಲ್ 6 ರಿಂದ ನಾಲ್ಕು ದಿನ ಮಳೆ!
ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟಿರುವ ಕರ್ನಾಟಕದ (Karnataka) ಜನತೆಗೆ ಸಿಹಿ ಸುದ್ದಿ. ಇನ್ನು ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.ಇದೇ ಏಪ್ರಿಲ್ 6 ರಿಂದ ನಾಲ್ಕು ದಿನ ಸಾಧಾರಣ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6 ರಂದು ದಕ್ಷಿಣಕನ್ನಡ , ಬೀದರ್ ,ಕಲಬುರಗಿ, ಕೊಡಗು, ಮಂಡ್ಯ, ಮತ್ತು ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಏಪ್ರಿಲ್ 7ರಂದು, ಬೆಂಗಳೂರು, …
Read More »ಮತ್ತೋಮ್ಮೆ ಮಾನವಿಯತೆ ಮೇರದ ಸತೀಶ್ ಜಾರಕಿಹೊಳಿ ಫೌಂಡೇಶನ್..!
ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ಮತ್ತೋಮ್ಮೆ ಮಾನವಿಯತೆ ಮೇರದಿದಾರೆ ಬಡ ರೋಗಿಗಳಿಗೆ ಆಸರೆಯಾದ ಅವರ ಸತೀಶ್ ಜಾರಕಿಹೊಳಿ ಫೌಂಡೇಶನ್..! ಬೆಳಗಾವಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾರನಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ಬಡ ರೋಗಿಗಳಿಗೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತ ಮಾಡಿಸುವ ಮೂಲಕ ಆಸರೆಯಾಗಿದೆ. ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರ್ನಾಟಕ ರಾಜ್ಯದ ಹಾಗೂ ಮಹಾರಾಷ್ಟ್ರದ ಗಡಿಭಾಗದ “ಸೂಪರ್ ಸ್ಪೆಷಾಲಿಟಿ”ಆಸ್ಪತ್ರೆಗಳಲ್ಲಿ …
Read More »