ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ (Lokasabha Election 2024) ಬಿಜೆಪಿಯು (BJP) ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿರುವ ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಸಿದ್ದವಾಗಿದೆ. ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಚಿತ್ರದುರ್ಗ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದ್ದು, ದೆಹಲಿ ವರಿಷ್ಠರ ಭೇಟಿಗೆ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ದೌಡಾಯಿಸಿದ್ದಾರೆ. ಉತ್ತರ ಕನ್ನಡ – ಅನಂತ ಕುಮಾರ್, ಬೆಳಗಾವಿ – ಜಗದೀಶ್ ಶೆಟ್ಟರ್, ರಾಯಚೂರು – …
Read More »Yearly Archives: 2024
ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಇನ್ನಷ್ಟು ವಿಳಂಬ
ಬೆಂಗಳೂರು: ಒಂದೆಡೆ ಮೈತ್ರಿ ಪಕ್ಷಗಳ ನಡುವೆ ಸೀಟು ಹಂಚಿಕೆ ವಿಳಂಬ, ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ೋಷಣೆ ಮತ್ತಷ್ಟು ವಿಳಂಬವಾಗಲಿದೆ. ಮಂಡ್ಯ, ಹಾಸನ, ಕೋಲಾರ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರೂ ಕೋಲಾರ ವಿಚಾರದಲ್ಲಿ ಇನ್ನೂ ಅನಿಶ್ಚಿತತೆ ಮುಂದುವರಿದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್‌ಗೆ ಮೂರು ಕ್ಷೇತ್ರ ಕೊಡುತ್ತೇವೆ ಎಂದು ಹೇಳಿದ್ದಾರೆ. …
Read More »ಪತ್ನಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಪತಿಗೆ ಜೈಲು ಶಿಕ್ಷೆ
ಬೆಂಗಳೂರು, ಮಾರ್ಚ್ 19: ಪತ್ನಿಗೆ ಇಮೇಲ್ ಮೂಲಕ ಅಶ್ಲೀಲ ವೀಡಿಯೋ ಕಳುಹಿಸಿದ 30ರ ಹರೆಯದ ವ್ಯಕ್ತಿಯೊಬ್ಬನನ್ನು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (IT Act) ಅಪರಾಧಿ ಎಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಿದ್ದು, ಒಂದು ತಿಂಗಳ ಜೈಲು ಶಿಕ್ಷೆ ಮತ್ತು 45,000 ರೂ. ದಂಡ ವಿಧಿಸಿದೆ. ರಾಜಾಜಿನಗರದ (Rajajinagar) ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿಯ ವಿರುದ್ಧ ಸಿಐಡಿ ಪೊಲೀಸರು (CID Police) ದೋಷಾರೋಪ ಹೊರಿಸಿದ್ದರು. ಶಿಕ್ಷೆಗೊಳಗಾದ ವ್ಯಕ್ತಿಯ ಪತ್ನಿ ವಿದೇಶದಲ್ಲಿ …
Read More »ಜಗದೀಶ್ ಶೆಟ್ಟರ್ಗೆ ಬೆಳಗಾವಿ ಟಿಕೆಟ್; ಜಿಲ್ಲಾ ಬಿಜೆಪಿಯಲ್ಲಿ ತೀವ್ರ ಅಸಮಾಧಾನ
ಬೆಳಗಾವಿ, ಮಾ.16: ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಟಿಕೆಟ್ ಕೈತಪ್ಪಿದ್ದಿಂದ ಗೊಂದಲಕ್ಕೀಡಾಗಿದ್ದಜಗದೀಶ್ ಶೆಟ್ಟರ್ (Jagadish Shettar)ಅವರಿಗೆ ಬೆಳಗಾವಿ (Belagavi) ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕ್ಷೇತ್ರದ ಹಾಲಿ ಸಂಸದೆ ಮಂಗಳಾ ಅಂಗಡಿ ಕೂಡ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಜಿಲ್ಲೆಯ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಹೈಕಮಾಂಡ್ ಘೋಷಣೆಗಾಗಿ ಸ್ಥಳೀಯ ನಾಯಕರು ಕಾಯುತ್ತಿದ್ದಾರೆ. ಯಾರು ಏನು ಹೇಳಿದ್ದಾರೋ ಗೊತ್ತಿಲ್ಲ, ನಾನು ಟಿವಿ ನೋಡಿಲ್ಲ ಎಂದು ಹೇಳಿದ ಬಿಜೆಪಿ ಶಾಸಕ …
Read More »ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್
ಬೆಳಗಾವಿ, ಮಾರ್ಚ್ 18: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್(firing)ಮಾಡಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ …
Read More »ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್ ಗಾಯಕವಾಡ್
ಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶಾಮಸುಂದರ್ ಗಾಯಕವಾಡ್ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯಕ್ಕೆ ಬಿಜೆಪಿ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ. ರಾಜ್ಯದಲ್ಲಿ ಶೇ 52ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗದ ಕುರುಬರು, ನೇಕಾರರು, ಗೊಲ್ಲರು, ಮೀನುಗಾರರು, ತಿಗಳರು, ಗಾಣಿಗರು, ಕುಂಬಾರರು, ಮಡಿವಾಳ, ದೇವಾಡಿಗ ಸಮುದಾಯದವರಿಗೆ ಟಿಕೆಟ್ …
Read More »ರಾಜ್ಯದಲ್ಲಿ ಇನ್ಮೇಲೆ ಕೆಎಂಎಫ್ ಎಮ್ಮೆ ಹಾಲು ಸಿಗಲ್ಲ! ಮೂರೇ ತಿಂಗಳಿಗೆ ಮಾರಾಟಕ್ಕೆ ಬ್ರೇಕ್ ಹಾಕಲು ಚಿಂತನೆ
ಬೆಂಗಳೂರು: ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ (Karnataka Milk Federation) ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ (Selling buffalo milk) ಚಾಲನೆ ನೀಡಿತ್ತು. ಆದರೆ ಇದಾದ ಮೂರೇ ತಿಂಗಳಿಗೆ ಎಮ್ಮೆ ಹಾಲು ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ (KMF) ಚಿಂತನೆ ನಡೆಸಿದೆಯಂತೆ. ಹೌದು, ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ (Market) ಕೆಎಂಎಫ್ ಬಿಡುಗಡೆ ಮಾಡಿತ್ತು, ಆದರೆ ಸದ್ಯ ಎಮ್ಮೆ ಹಾಲು ಮಾರಾಟ …
Read More »ಗೃಹಜ್ಯೋತಿ’ ಫಲಾನುಭವಿಗಳಿಗೆ ಬಿಗ್ ಶಾಕ್ : 200 ಯೂನಿಟ್ ಗಿಂತ ಜಾಸ್ತಿ ವಿದ್ಯುತ್ ಬಳಸಿದ್ರೆ ಕಟ್ಟಬೇಕು ದುಬಾರಿ ಶುಲ್ಕ!
ಬೆಂಗಳೂರು : ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. 200 ಯೂನಿಟ್‌ಗಿಂತ ಜಾಸ್ತಿ ವಿದ್ಯುತ್ ಬಳಸಿದರೆ, ಬಳಸಿದ ಅಷ್ಟು ಯೂನಿಟ್‌ಗಳಿಗೆ ದುಬಾರಿ ಶುಲ್ಕವನ್ನು ಭರಿಸಬೇಕಾಗಿದೆ. ಹೌದು, ಬರದ ಬೇಗೆಯಲ್ಲಿ ಬಸವಳಿದಿರುವ, ಬೇಸಿಗೆಯ ಝಳದಲ್ಲಿ ಮರುಗುತ್ತಿರುವ ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಫ್ರೀ ಎಂದು ಹೇಳಿದ್ದ …
Read More »12 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಬೇಲೂರು: ಸಸ್ಯಶಾಸ್ತ್ರ ವಿಭಾಗದ ಪದವಿ ಪರೀಕ್ಷೆಯಲ್ಲಿ 12 ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದ ತಾಲ್ಲೂಕಿನ ಜಿ.ಆರ್.ಸಂಯಮ ಅವರನ್ನು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದಿಂದ ಅಭಿನಂದಿಸಲಾಯಿತು. ವಿದ್ಯಾರ್ಥಿನಿ ಜಿ.ಆರ್.ಸಂಯಮ ಅವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತಿದ್ದಾರೆ. ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಮಹಿಳೆಯರ ಸಾಧನೆ …
Read More »ಸೂಲಗತ್ತಿ ಲಕ್ಷ್ಮೀಬಾಯಿಗೆ ಶಾಂತ ಸಿರಿ ಪ್ರಶಸ್ತಿ
ಸಿಂದಗಿ: 600 ಮಹಿಳೆಯರಿಗೆ ಉಚಿತವಾಗಿ ಸಹಜ ಹೆರಿಗೆ ಮಾಡಿಸಿದ ತಾಲ್ಲೂಕಿನ ಯರಗಲ್ ಬಿ.ಕೆ. ಗ್ರಾಮದ ಲಕ್ಷ್ಮೀಬಾಯಿ ಪಂಚಯ್ಯ ಗುಬ್ಬೇವಾಡ ಇವರಿಗೆ ಶಾಂತ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಲ್ಲಿಯ ಊರನಹಿರಿಯಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ರಾತ್ರಿ ಶಾಂತವೀರ ಪಟ್ಟಾಧ್ಯಕ್ಷರ 44ನೆಯ ಸ್ಮರಣೋತ್ಸವದ ಅಂಗವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಪ್ರಶಸ್ತಿ ₹5 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಅಫಜಲಪುರ ಸಂಸ್ಥಾನಹಿರೇಮಠದ ಪೀಠಾಧ್ಯಕ್ಷ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ …
Read More »