Breaking News

Yearly Archives: 2024

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಮುಂದುವರೆದ ಅಭಿವೃದ್ಧಿ ಪರ್ವ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಅನುದಾನದಡಿ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಹಲವಾರು ದಿನಗಳಿಂದ ಹದಗೆಟ್ಟ ರಸ್ತೆಯಿಂದಾಗಿ ವಾಹನ ಸವಾರರು ಹಾಗೂ ಸ್ಥಳೀಯರು ಪರಿತಪಿಸುತ್ತಿದ್ದರು. ಇದನ್ನ ನಗರಸೇವಕರು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ 25 ಲಕ್ಷ ರೂಪಾಯಿ ಅನುದಾನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಆಸಿಫ್ ಸೇಠ್ …

Read More »

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ ಪುನಾರಚನೆ, ಕೆಲವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರ ಖಾತೆ ಬದಲಾವಣೆ ಬಗ್ಗೆ ಚರ್ಚೆ ಇದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆ ಮಾಡದೆಯೂ ಇರಬಹುದು. ನನಗಂತೂ …

Read More »

ಹಲಸಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಹಂಜಿ ಪ್ಯಾನೆಲ್ ಭರ್ಜರಿ ಗೆಲುವು

ಖಾನಾಪೂರ ತಾಲೂಕಿನ ಐತಿಹಾಸಿಕ ಹಲಸಿ ಗ್ರಾಮದ ಗ್ರಾಮ ಪಂಚಾಯಿತಿಯ ಉಪ ಚುನಾವಣೆಯಲ್ಲಿ ಹಂಜಿ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಹಂಜಿ ಕುಟುಂಬದ ವರ್ಚಸ್ಸು ತೋರಿಸಿದೆ ವಾರ್ಡ್ ನಂಬರ್ 1 ರ ಉಪ ಚುನಾವಣೆಯಲ್ಲಿ ಶ್ರೀಮತಿ ಉಮಾ ಉದಯ ಪಾರಿಪತ್ಯದಾರ ಅವರು 401 ಮತಗಳಲ್ಲಿ 287ಮತಗಳನ್ನು ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ವರ್ಷಾ ವಿದ್ಯಾಧರ ಜಾಧವ್ ಅವರು 58 ಮತಗಳನ್ನು ಪಡೆದರೆ ವೈಶಾಲಿ ಮಲ್ಲಿಕಾರ್ಜುನ ರಜಕಣ್ಣವರ ಅವರು 47 …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿ ಪರಿಶೀಲನೆಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ

ಬೆಳಗಾವಿ, : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಳೆದ 3-4 ವರ್ಷಗಳಿಂದ ಮ್ಯೂಸಿಯಂ ಕಾಮಗಾರಿ ಚಾಲನೆಯಲಿದ್ದು, ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು. ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ (ನ.26) ಕ್ರಾಂತಿವೀರ …

Read More »

ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.

ಬೆಳಗಾವಿ :ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌. ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಲೇಜಿನಲ್ಲಿ ಕಳೆದ ಭಾನುವಾರ ‌ನಡೆದ ಕೆ ಸೆಟ್ ಪರೀಕ್ಷೆಯ ವೇಳೆ ವೈಶಾಲಿ ಹಾಗೂ ರೂಪಾ ಎಂಬ ಯುವತಿಯರ ಬೆಲೆ ಬಾಳುವ ಚಿನ್ನಾಭರಣವನ್ನು, ಹಣ ಹಾಗೂ ಮೊಬೈಲ್ ಕಳ್ಳತವಾಗಿದೆ. ಕಾಲೇಜು ಸಿಬ್ಬಂದಿಗಳ ಮೇಲೆ ಶಂಕೆ ವ್ಯಕ್ತಪಡಿಸಲಾಗಿದೆ.ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಕಲಬುರಗಿ ನವಜಾತ ಶಿಶು ಅಪಹರಣ ಪ್ರಕರಣ: 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು

ಕಲಬುರಗಿ, ನವೆಂಬರ್ 27: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ (ನರ್ಸ್‌) ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರುವಂತಾಗಿದೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಶಿಶುವನ್ನು ಅಪಹರಿಸಲಾಗಿತ್ತು. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ನಾಲ್ಕು ವಿಶೇಷ …

Read More »

ಆರ್​ಟಿಒ ಅಧಿಕಾರಿಗಳ, ಬ್ರೋಕರ್​ಗಳ ಲಂಚತನಕ್ಕೆ ಬೀಳಲಿದೆ ಬ್ರೇಕ್: ಇನ್​ಸ್ಪೆಕ್ಟರ್​ಗಳಿಲ್ಲದೆಯೇ ಆಗಲಿದೆ ಎಫ್​ಸಿ

ನವೆಂಬರ್ 27: ಆರ್​ಟಿಒ ಇನ್ಸ್‌ಪೆಕ್ಟರ್​ಗಳಿಲ್ಲದೆಯೇ ಇನ್ಮುಂದೆ ಆಗಲಿದೆ ಎಫ್​ಸಿ! ಎಫ್​ಸಿ ಮಾಡಲು ಸಾರಿಗೆ ಇಲಾಖೆ Automatic Testing Station (ATS) ತೆರೆದಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನೆಲಮಂಗಲ ಆರ್​ಟಿಒದಲ್ಲಿ ಎಟಿಎಸ್ ಸೆಂಟರ್​​ಗಳನ್ನು ತೆರೆಯಲಾಗಿದೆ. ಈ ಸೆಂಟರ್​​ಗಳಿಗೆ ವಾಹನಗಳನ್ನು ತೆಗೆದುಕೊಂಡು ಹೋದರೆ ಸಾಕು, ಆ ಮಷಿನ್​ಗಳೇ ವಾಹನಗಳಿಗೆ ಪಾಸ್ ಅಥವಾ ಫೇಲ್ ಸರ್ಟಿಫಿಕೇಟ್ ನೀಡುತ್ತವೆ. ಯಾವುದೇ ಆರ್​ಟಿಓ ಅಧಿಕಾರಿಗಳು, ಬ್ರೋಕರ್​​ಗಳ ಹಾವಳಿ ಇಲ್ಲದೆ ವಾಹನಗಳ ಎಫ್​ಸಿ ಮಾಡಿಸಿಕೊಳ್ಳಬಹುದು‌. ಈ ಹಿಂದೆ ವಾಹನಗಳಿಗೆ …

Read More »

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ 27: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್​ನಿಂದ ವಂಚಿತರಾಗಿದ್ದವರಿಗೆ ಮರು ಪರಶೀಲನೆ ಭರವಸೆ ನೀಡಿತ್ತು. …

Read More »

ಕೌನ್ಸಿಲ್‌ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ. 

ಕೌನ್ಸಿಲ್‌ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.  10 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 18 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 13 ರಿಂದ ಏಪ್ರಿಲ್ 5ರವರೆಗೆ ನಡೆಯಲಿದೆ.ಇನ್ನು ಪರೀಕ್ಷೆಯ ಫಲಿತಾಂಶಗಳನ್ನು ಮೇ 2025 ರಲ್ಲಿ ಘೋಷಿಸಲಾಗುವುದು ಎಂದು ಕೌನ್ಸಿಲ್ ಅಧಿಕೃತ ಅಧಿಸೂಚನೆಗಳಲ್ಲಿ …

Read More »

ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ:ದೀಪಕ ಗುಡಗನಟ್ಟಿ

ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿ ಬೆಳಗಾವಿ- ಬೆಳಗಾವಿಯ ದಂಡು ಮಂಡಳಿಯ ಪ್ರದೇಶದಲ್ಲಿ ಬರುವ ಅಟೋಗಳಿಗೂ ಪೇ ಪಾರ್ಕಿಂಗ್ ಶುಲ್ಕ ವಿಧಿಸುತ್ತಿರುವದನ್ನು ವಿರೋಧಿಸಿ ಶುಕ್ರವಾರ ದಂಡು ಮಂಡಳಿಯ ಅಧಿಕಾರಿಗಳಿಗೆ ಕರವೇ ನಿಯೋಗ ಭೇಟಿಯಾಗಿ ಅಟೋಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ಕೂಡಲೇ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಕರವೇ ಮನವಿಗೆ ಸ್ಪಂದಿಸಿದ ದಂಡು ಮಂಡಳಿಯ ಅಧಿಕಾರಿಗಳು ಆಟೋಗಳಿಗೆ ಪೇ ಪಾರ್ಕಿಂಗ್ ವಸೂಲಿ ಮಾಡುವದನ್ನು ನಿಲ್ಲಿಸುವಂತೆ ಮೌಖಿಕ ಆದೇಶ ಮಾಡಿದ್ದಾರೆ. ದಂಡು ಮಂಡಳಿಯ ವ್ಯಾಪ್ತಿಯಲ್ಲಿ …

Read More »