ರಾಯಬಾಗ: ಕರ್ನಾಟಕ ಹಾಗೂ ಮಹಾರಾಷ್ಟ್ರ ಭಕ್ತರ ಆರಾಧ್ಯ ದೇವತೆ ಚಿಂಚಲಿ ಮಾಯಕ್ಕದೇವಿ ಜಾತ್ರೆ ಫೆ.28ರಿಂದ ಮಾರ್ಚ್ 3ರವರೆಗೆ ಐದು ದಿನ ವೈಭವೋಪೇತವಾಗಿ ಜರುಗಲಿದೆ. ಮಾಯಕಾರತಿ, ಮಹಾಕಾಳಿ, ಮಾಯವ್ವ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕ ದೇವಿ ಜಾತ್ರೆಗೆ ಚಿಂಚಲಿ ಪಟ್ಟಣ ಸಂಭ್ರಮದಿಂದ ಸಜ್ಜುಗೊಂಡಿದೆ. ಈ ಜಾತ್ರೆಗೆ ನೆರೆಯ ತಮಿಳುನಾಡು, ಗೋವಾ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವುದು ಪ್ರತಿವರ್ಷದ ವಾಡಿಕೆ. …
Read More »Yearly Archives: 2024
ರಸ್ತೆಯಲ್ಲೇ ಹರಿಯುವ ಚರಂಡಿ ನೀರು, ಸೌಲಭ್ಯಗಳಿಲ್ಲದೆ ನಲುಗಿದ ಬರದೂರು
ಮುಂಡರಗಿ: ತಾಲ್ಲೂಕಿನ ಮೇವುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬರದೂರು ಗ್ರಾಮದಲ್ಲಿ ವಾಹನ ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ, ಸಾರ್ವಜನಿಕರು ಬಳಸಿದ ಗಲೀಜು ನೀರು ಹರಿದು ಹೋಗುವುದಕ್ಕೆ ಸೂಕ್ತ ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳಿಲ್ಲದೆ ಗ್ರಾಮದ ಜನರು ಹಲವು ದಶಕಗಳಿಂದ ಪರದಾಡುತ್ತಿದ್ದಾರೆ. ತಾಲ್ಲೂಕು ಕೇಂದ್ರ ಸ್ಥಳದಿಂದ ಕೇವಲ ಐದು ಕಿ.ಮೀ. ದೂರದಲ್ಲಿರುವ ಬರದೂರು ಗ್ರಾಮವು ಮೂಲಸೌಲಭ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ಹಲವಾರು ಸಮಸ್ಯೆಗಳ ನಡುವೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ …
Read More »ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ : ಡಿಸಿಎಂ
ಬೆಂಗಳೂರು : ವಿಧಾನಸೌಧದಲ್ಲಿಕ ಯಾರೂ ಪಾಕ್ ಪರ ಘೋಷಣೆ ಕೂಗಿಲ್ಲ, ಒಂದು ವೇಳೆ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ವಿಧಾನಸೌಧದಲ್ಲಿ ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ರೆ ಒದ್ದು ಒಳಗೆ ಹಾಕುತ್ತೇವೆ. ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಟಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು …
Read More »ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ, ಬಂಡಾಯ ಶಮನಕ್ಕೆ ಸಿಎಂ ಬದಲಾವಣೆಗೆ ಮುಂದಾದ ಹೈಕಮಾಂಡ್!
ಶಿಮ್ಲಾ: ರಾಜ್ಯಸಭಾ ಚುನಾವಣೆ ನಡೆದ ಬಳಿಕ ಹಿಮಾಚಲ ಪ್ರದೇಶದಲ್ಲಿ ಆಡಳಿತದಲ್ಲಿರುವ (Himachal Pradesh Congress Crisis) ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಪರಿಸ್ಥಿತಿಯ ಲಾಭ ಪಡೆದುಕೊಂಡ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್‌ಗೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಕಾಂಗ್ರೆಸ್ ಶಾಸಕರು ಅಡ್ಡಮತ ಹಾಕಿದ ಪರಿಣಾಮ ಬಿಜೆಪಿಗೆ ಪ್ಲಸ್ ಆಗುತ್ತಿದ್ದಂತೆ ಹಿಮಾಚಲ ಪ್ರದೇಶದ …
Read More »ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ …
Read More »ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ
ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‍ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು. ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ …
Read More »14 ಬಿಜೆಪಿ ಶಾಸಕರನ್ನು ವಿಧಾನಸಭಾ ಕಲಾಪದಿಂದ ಅಮಾನತುಗೊಳಿಸಿ ಸ್ಪೀಕರ್ ಆದೇಶ!
ಶಿಮ್ಲಾ: ಹಿಮಾಚಲ ಪ್ರದೇಶದ ರಾಜಕೀಯ ಹೈಡ್ರಾಮ (Himachal Pradesh Political Crisis) ಕ್ಷಣದಿಂದ ಕ್ಷಣಕ್ಕೆ ಕುತೂಹಲ ಪಡೆಯುತ್ತಿದ್ದು, ಇದೀಗ ನಡೆದ ಭಾರೀ ಬೆಳವಣಿಗೆಯೊಂದರಲ್ಲಿ 14 ಬಿಜೆಪಿ ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಕಾಂಗ್ರೆಸ್‌ಗೆ ಉಂಟಾದ ಇಕ್ಕಟ್ಟಿನ ಪರಿಸ್ಥಿತಿಯ ಮಧ್ಯೆ ಈ ಬೆಳವಣಿಗೆ ನಡೆದಿದ್ದು, ಬಜೆಟ್ ಅಧಿವೇಶನ ನಡೆಯುತ್ತಿರುವಾಗಲೇ ಹಿಮಾಚಲ …
Read More »ಲೋಕಸಭಾ ಚುನಾವಣೆ: ಚಿಕ್ಕೋಡಿಯಿಂದ ಸ್ಪರ್ಧಿಸಲು ಅಮಿತ್ ಕೋರೆ ಆಸಕ್ತಿ
ಬೆಳಗಾವಿ: ‘ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಕ್ಕರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ‘ಈ ಹಿಂದೆಯೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್‌ಗೆ ಅವಕಾಶ ಬಂದಿತ್ತು. ಆಗ ಅಸಕ್ತಿ ಇರಲಿಲ್ಲ. ಆದರೆ, ಈಗ ಗೆಳೆಯರು ಸ್ಪರ್ಧಿಸಲು ಒತ್ತಡ ಹೇರಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಚಿಕ್ಕೋಡಿ …
Read More »ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ
ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಅವಧಿಯಲ್ಲಿ ಸಾಕಷ್ಟು …
Read More »ಕನ್ನಡದಲ್ಲೇ ಕನ್ನಡಿಗ-ಕನ್ನಡತಿ ಲಗ್ನ
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಸೋಮವಾರ ಕನ್ನಡಮಯವಾದ ಮದುವೆ ನೆರವೇರಿತು. ಸಂಪ್ರದಾಯದ ಕಟ್ಟುಪಾಡು ಮೀರಿದ ಜೋಡಿ ಅಚ್ಚುಕಟ್ಟಾಗಿ, ಕನ್ನಡವನ್ನೇ ಅನುಸರಿಸಿ ಹೊಸಬಾಳಿಗೆ ಕಾಲಿಟ್ಟಿತು. ಖಾಸಗಿ ಕಂಪನಿಯ ಉದ್ಯೋಗಿಗಳಾದ ಬೆಳಗಾವಿ ತಾಲ್ಲೂಕಿನ ಶಿಂಧೋಳಿಯ ದೀಪಕ್ ಮುಂಗರವಾಡಿ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವಗಾಂವದ ರಾಜೇಶ್ವರಿ ವಾಂಗಿ ಅವರ ಮದುವೆ ಕನ್ನಡ ಸಾಹಿತ್ಯ ಸಮ್ಮೇಳನದ ವಾತಾವರಣ ನೆನಪಿಸಿತು. ಜೋಡಿಯು ಉಂಗುರದಿಂದ ಹಿಡಿದು ಕಲ್ಯಾಣ ಮಂಟಪದವರೆಗೆ ಸಂಪೂರ್ಣವಾಗಿ ಕನ್ನಡ ಅನುಸರಿಸಿತು. ಪ್ರವೇಶದ್ವಾರದ ಬಳಿ ಕಿತ್ತೂರು ರಾಣಿ …
Read More »