Breaking News

Yearly Archives: 2024

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು. ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. …

Read More »

ಲೋಕಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ರಣಕಹಳೆ: ಮೋದಿ ಗ್ಯಾರಂಟಿ ಕದ್ದಿದ್ದಾರೆ ಎಂದು ಆಕ್ರೋಶ!

ಮಂಗಳೂರು: ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ತಮ್ಮ ಭರವಸೆಗಳ ನಡುವೆ ಹೋಲಿಕೆ ಮಾಡಲು ಪ್ರಯತ್ನಿಸಿದ್ದು ಮೋದಿ ಸರ್ಕರಾ ಕಳೆದ 10 ವರ್ಷಗಳಲ್ಲಿ ತಮ್ಮ ಭರವಸೆಗಳನ್ನು ಉಳಿಸಿಕೊಳ್ಳಲು ವಿಫಲರಾಗಿದ್ದರೆ, ನಾವು ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗೆ ಎಲ್ಲಾ ಐದು ಭರವಸೆಗಳನ್ನು ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.   ಅಡ್ಯಾರ್‌ನಲ್ಲಿ ಪಕ್ಷದ …

Read More »

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿಯವರು ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮಂಗಳೂರು: ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿನ್ನೆ ಮಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಜನತೆಗೆ ಮನವಿ ಮಾಡಿದರು, ಬಿಜೆಪಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ …

Read More »

ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಭಾರತದಲ್ಲಿ ಹಿಂದೆಂದೂ ಇರಲಿಲ್ಲ: ಸಿ.ಎಂ.

ಮಂಗಳೂರು (Mangaluru): ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ (congress) ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು. ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ …

Read More »

ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆರೋಪಿಸಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ …

Read More »

ಹಿತನನ್ನೇ ಕೊಂದ ಗೆಳೆಯರು; ಮೂವರು ಆರೋಪಿಗಳು ಅರೆಸ್ಟ್

ಕಲಬುರ್ಗಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರ್ಗಿ ಪೊಲೀಸರು ಬಂಧಿಸಿದ್ದಾರೆ. ರೋಹನ್ ಕೊಲೆಯಾದ ದುರ್ದೈವಿ. ನಾಲ್ವರು ಗೆಳೆಯರು ಸೇರಿ ರೋಹನ್ ನನ್ನು ಚಾಕುವಿನಿಂದ ಇರುದು ಹತ್ಯೆಗೈದಿದ್ದರು. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುನೀಲ್ ಸಿಂಗ್, ಭಗತ್ ಸಿಂಗ್, ಸೊಹೆಲ್ ಬಂಧಿತ ಆರೋಪಿಗಳು. ಓರ್ವ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ರೋಹನ್ …

Read More »

ಕಿರಾಣಿ ಅಂಗಡಿಯಲ್ಲಿ ಪತ್ನಿಗೆ ಐಸ್ ಕ್ಯಾಂಡಿ ಕೊಡಿಸಿದ ನಟ ಯಶ್

ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ರಾಕಿಂಗ್ ಸ್ಟಾರ್ ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ನಟ ಯಶ್ ಮಠದ ಬೀದಿಯಲ್ಲಿರುವ ಕಿರಾಣಿ ಅಂಗಡಿಗೆ ತೆರಳಿ ಪತ್ನಿಗೆ ಐಸ್ಕ್ಯಾಂಡಿ ಕೊಡಿಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ನಟ ಯಶ್ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿರಾಣಿ ಅಂಗಡಿಯಲ್ಲಿ ನಟ ಯಶ್ ತನ್ನ ಪತ್ನಿ ರಾಧಿಕಾ …

Read More »

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್‌ ನೇಮಕ

ಬೆಂಗಳೂರು: ವಾರಗಳ ಹಿಂದೆ ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ (Nigama Mandali) ಮಾಡಿದ ಎಡವಟ್ಟನ್ನು ಸರ್ಕಾರ ಸರಿಪಡಿಸಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರ (Sports Authority) ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್‌ (Vijayananda Kashappanavar) ಅವರನ್ನು ನೇಮಿಸಿದ್ದ ಸರಕಾರ ಇದೀಗ ಈ ಆದೇಶವನ್ನು ಹಿಂದಕ್ಕೆ ಪಡೆದು ಅವರನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva lingayat development Corporation) ಅಧ್ಯಕ್ಷರಾಗಿ ನೇಮಿಸಿದೆ. ವಿಜಯಾನಂದ ಕಾಶಪ್ಪನವರ್ ನೇಮಕಕ್ಕೆ ಶಿಫಾರಸು ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ವಿಶೇಷ ಪೂಜೆ ಸಂದರ್ಭದಲ್ಲಿ ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆಯವರೆಗೆ ಭವ್ಯ …

Read More »

ಪಂಚಮಸಾಲಿಯವರಿಗೆ ಐದು ಟಿಕೆಟ್‌ ಕೊಡಿ: ಕೂಡಲಸಂಗಮ ಶ್ರೀ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಐದು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನವರು ಟಿಕೆಟ್ ನೀಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದವರೇ ಬಹುಸಂಖ್ಯಾತರು. ಅದಕ್ಕೆ ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು, ಕಲ್ಯಾಣ ಕರ್ನಾಟಕದಲ್ಲಿ ಒಬ್ಬರಿಗೆ ಟಿಕೆಟ್‌ ಕೊಡಬೇಕು. ಮಲೆನಾಡಿನಲ್ಲಿ ಮಲೆಗೌಡ ಸಮುದಾಯಕ್ಕೆ ಮತ್ತು ಮೈಸೂರು …

Read More »