Breaking News

Yearly Archives: 2024

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಯೋಧ್ಯೆ ಆಮಂತ್ರಣ

ಬೆಳಗಾವಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ (Ram JanmaBhoomi) ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದು ಪರಿಷತ್ (Vishwa Hindu Parishad) ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.   ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದು ಪರಿಷತ್ತಿನ …

Read More »

ಲೋಕಸಭೆ ಚುನಾವಣೆ ಕಲಬುರಗಿಗೆ ಖರ್ಗೆ ಅಳಿಯ, ಮೈಸೂರು-ಕೊಡಗು ಕ್ಷೇತ್ರಕ್ಕೆ ಯತೀಂದ್ರ?

ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ. ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ …

Read More »

ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್‌ ಗೆ ಕಡ್ಡಾಯ ರಜೆ

ಹುಬ್ಬಳ್ಳಿ : ಹಳೆಯ ಪ್ರಕರಣಗಳ ಆರೋಪದ ಮೇಲೆ ಅಯೋಧ್ಯ ಕರಸೇವಕ, ಹಿಂದೂ ಕಾರ್ಯಕರ್ತ ಶ್ರೀಕಾಂತ್‌ ಪೂಜಾರಿಯನ್ನು (Srikant pujari) ಬಂಧಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ (Police inspector) ಗೆ ಸರ್ಕಾರ ಕಡ್ಡಾಯ ರಜೆ ನೀಡಿ ಮನೆಗೆ ಕಳಿಸಿದೆ. ಶ್ರೀಕಾಂತ್‌ ಬಂಧನವನ್ನು ಖಂಡಿಸಿ ಬಿಜೆಪಿ (BJP)ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ (Protest) ನಡೆಸಿತ್ತು.   ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಮಹಮ್ಮದ್‌ ರಫೀಕ್‌ಗೆ ಸರ್ಕಾರ ಕಡ್ಡಾಯ ರಜೆ ನೀಡಿದೆ. ಅವರ ಜಾಗಕ್ಕೆ ಬಿ.ಎ. ಜಾಧವ್‌ ಅವರನ್ನು …

Read More »

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ

ಬೆಳಗಾವಿ, ಜ.4: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆಬೆಳಗಾವಿ (Belagavi)ನಗರದಲ್ಲಿ ನಡೆದಿದೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. …

Read More »

ಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು …

Read More »

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : BSF, CISF, ಪೊಲೀಸ್, ಅಬಕಾರಿ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್‌ ಡೇಟ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಕ್ಷಣಾ/ ಏಕರೂಪದ ಸೇವೆಗಳಿಗೆ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ಕುರಿತಾದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.   ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಅಲ್ಪ ಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ರಾಮನಗರ, …

Read More »

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಇನ್ನು ಹೊಸ ತಿಂಡಿ, ಸಿರಿಧಾನ್ಯ ಲಾಡು

ಬೆಂಗಳೂರು: ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೆನುವಿನಲ್ಲಿ ಬದಲಾವಣೆ ಮಾಡಲಾಗಿದೆ. ಅಪೌಷ್ಟಿಕತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಗೋಧಿ, ಸಿರಿಧಾನ್ಯ ಲಾಡು, ಹೊಸ ತಿಂಡಿ ನೀಡಲಾಗುವುದು. ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಕಳೆದ ವರ್ಷವೇ ಮೆನು ಬದಲಾವಣೆ ಮಾಡಿ ಪೌಷ್ಟಿಕ ಆಹಾರ ನೀಡುವಂತೆ ಹೈಕೋರ್ಟ್ ನೀಡಿದ ಆದೇಶ ಎತ್ತಿ ಹಿಡಿದಿತ್ತು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಹೊಸ ಮೆನು ನೀಡಲಾಗುತ್ತಿದೆ. ಅನ್ನ ಸಾಂಬಾರ್, ಅನ್ನ ಕಿಚಿಡಿ, ಉಪ್ಪಿಟ್ಟು ನೀಡುತ್ತಿದ್ದು, …

Read More »

8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳನ್ನು ಆಡಳಿತಾಧಿಕಾರಿ ವಹಿಸಿಕೊಳ್ಳಬೇಕು. ಚುನಾವಣೆ ವಿಳಂಬ ಮಾಡಬಾರದು. 8 ವಾರಗಳಲ್ಲಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗಿಯ ಪೀಠ ಆದೇಶ ನೀಡಿದೆ. ಅರ್ಹರು, ಅನರ್ಹರ ಪಟ್ಟಿಯಲ್ಲಿ …

Read More »

ಜಗತ್ತಿನಲ್ಲಿರುವುದು ಒಂದೇ ಧರ್ಮ, ಅದು ಸನಾತನ : ಯುಪಿ ಸಿಎಂ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸನಾತನ ಧರ್ಮದ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ ಎಂದು ಅವರು ಹೇಳಿದರು. ರಾಜಸ್ಥಾನದ ಜೋಧಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ ಒಂದೇ ಧರ್ಮವಿದೆ ಮತ್ತು ಅದು ಸನಾತನ ಧರ್ಮ. ಉಳಿದವು ಪಂಥಗಳು ಮತ್ತು ಪಂಥಗಳಾಗಿರಬಹುದು. ಪ್ರತಿಯೊಂದು ದೇಶ, ಸಮಯ ಮತ್ತು ಪರಿಸ್ಥಿತಿಯಲ್ಲಿ, ನಿಲ್ಲದೆ, ಚಂಚಲರಾಗದೆ ಮತ್ತು ತಲೆಬಾಗದೆ ಉಳಿಸಿಕೊಳ್ಳುವುದು ಶಾಶ್ವತವಾಗಿದೆ …

Read More »

ಮೂರನೇ ಬಾರಿ ಇಡಿ ವಿಚಾರಣೆ ತಪ್ಪಿಸಿಕೊಂಡ ಸಿಎಂ ಕೇಜ್ರಿವಾಲ್‌..!

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ(Delhi) ಮದ್ಯ ಹಗರಣ (Liquor scam)ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ(ED) ವಿಚಾರಣೆಗೆ ಸಿಎಂ ಅರವಿಂದ ಕೇಜ್ರಿವಾಲ್‌ ಮೂರನೇ ಬಾರಿ ಗೈರಾಗಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧ 2023ರ ಡಿಸೆಂಬರ್ 22ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಇಂದೂ (ಜ.3) ಕೂಡ ವಿಚಾರಣೆಗೆ ಗೈರಾಗಿದ್ದಾರೆ.     ಈ ಬಗ್ಗೆ ಆಮ್‌ ಆದ್ಮಿ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು …

Read More »