Breaking News

Yearly Archives: 2024

CONGRESS V/S BJP: ಸಿದ್ದು ನಮಸ್ಕಾರ ಬರೀ ಕಾಟಾಚಾರ – ಬಿಜೆಪಿ ಟೀಕೆ!

ಬೆಂಗಳೂರು: ವಿಜಯಪುರದ (Vijayapur) ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿದ್ದರು. ಈ ವೇಳೆ ಗರ್ಭಗುಡಿಯ ಒಳಗಡೆ ಹೋಗದೆ, ಹೊರಗಿನಿಂದಲೇ ನಮಸ್ಕರಿಸಿದ್ದರು. ಇದೀಗ ಈ ಬಗ್ಗೆ ರಾಜ್ಯ ಬಿಜೆಪಿ (BJP) ಟೀಕೆ ಮಾಡಿದೆ.   ಈ ಬಗ್ಗೆ ಎಕ್ಸ್ ನಲ್ಲಿ (X) ಬರೆದುಕೊಂಡಿರುವ ಬಿಜೆಪಿ, “ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ (Ram Mandir) ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ …

Read More »

ಮಕ್ಕಳು ಹೂ ಕಿತ್ತಿದ್ದಕ್ಕೇ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ದುಷ್ಟ!

ಬೆಳಗಾವಿ :‌ ಅಂಗನವಾಡಿಯ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿದ್ದ ಹೂ ಕಿತ್ತರೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಅಂಗನವಾಡಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿರುವ ದುರ್ಘಟನೆ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ( 50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಕಲ್ಯಾಣಿ ಮೋರೆ ಈ ದುಷ್ಕೃತ್ಯ ಎಸಗಿದ್ದಾನೆ.   ಅಂಗನವಾಡಿ ಸಹಾಯಕಿಯಾಗಿ ಸುಗಂಧಾ ಕೆಲಸ ಮಾಡುತ್ತಿದ್ದರು. ಅವರ ಅಂಗನವಾಡಿಯ ಮಕ್ಕಳು ಕಲ್ಯಾಣಿ ಮೋರೆ ಮನೆಯ ಮುಂದಿರುವ ಮಲ್ಲಿಗೆ ಹೂ …

Read More »

ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ: ಬೆಂಗಳೂರು ತಲುಪಿದ ಪಾದಯಾತ್ರೆ

ಬೆಂಗಳೂರು: ಸೇವೆ ಕಾಯಂಗೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು (Guest lecturers) ಆರಂಭಿಸಿರುವ ಪಾದಯಾತ್ರೆ ಮುಂದುವರಿದಿದ್ದು, ಇದೀಗ ಬೆಂಗಳೂರಿಗೆ (bengaluru) ಪಾದಯಾತ್ರೆ ಬಂದು ತಲುಪಿದೆ. ಅತಿಥಿ ಉಪನ್ಯಾಸಕ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನ (Tumkur) ಸಿದ್ದಗಂಗಾ ಮಠದಿಂದ (Siddaganga Mutt) ಬೆಂಗಳೂರಿಗೆ ಪಾದಯಾತ್ರೆ ಹೊರಟಿದ್ದು, ಇದೀಗ ಬೆಂಗಳೂರಿಗೆ ಪಾದಯಾತ್ರೆ ಬಂದು ತಲುಪಿದೆ. ಈ ನಡುವೆ ಕೊಪ್ಪಳದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah), ಪಾದಯಾತ್ರೆ ನಡೆಸುತ್ತಿರುವ ಅತಿಥಿ …

Read More »

ಅದಾನಿ-ಹಿಂಡೆನ್ ಬರ್ಗ್ ಪ್ರಕರಣ: ಇಂದು ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

ನವದೆಹಲಿ: 2023 ರ ಜನವರಿಯಲ್ಲಿ ಯುಎಸ್ ಕಿರು ಮಾರಾಟಗಾರ ಹಿಂಡೆನ್ ಬರ್ಗ್ ರಿಸರ್ಚ್‌ ನ ಸಂಶೋಧನಾ ವರದಿಯಲ್ಲಿ ಪ್ರಕಟವಾದ ಅದಾನಿ ಗ್ರೂಪ್ ಕಂಪನಿಗಳ ವಿರುದ್ಧದ ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ತಿರುಚುವಿಕೆ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ನೀಡಲಿದೆ.   ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ಡಿವಾಲಾ ಮತ್ತು ಮನೋಜ್ …

Read More »

‘ಲವ್ ಮ್ಯಾರೇಜ್’ ಗೆ ಪೋಷಕರ ವಿರೋಧ : ‘ಕಿರಾತಕ’ ಸಿನಿಮಾ ಶೈಲಿಯಲ್ಲೇ ಮದ್ವೆಯಾದ ಪ್ರೇಮಿಗಳು

ಬಳ್ಳಾರಿ : ಮದುವೆಗೆ ಹುಡುಗಿ ಮನೆಯವರು ಒಪ್ಪದ ಕಾರಣಕ್ಕೆ ಸಖತ್ ಪ್ಲ್ಯಾನ್ ಮಾಡಿ ಹೀರೋ ಹುಡುಗಿಯನ್ನು ಕರೆಸಿ ಕಾರಿನಲ್ಲೇ ಮದುವೆಯಾಗುತ್ತಾನೆ. ಇದು ಕನ್ನಡದ ಕಿರಾತಕ ಸಿನಿಮಾದ ಕಥೆ. ಇದು ನಿಮಗೆ ಗೊತ್ತಿರುವ ವಿಚಾರ. ಇದೀಗ ಅದೇ ರೀತಿಯ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಆದರೆ ಇದು ಕೊಂಚ ಡಿಫರೆಂಟ್ ಆಗಿದೆ. ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಮತ್ತು ಕೊಪ್ಪಳ ಮೂಲದ ಯುವತಿ ಅಮೃತಾ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಶಿವಪ್ರಸಾದ್ ಕೆಳಜಾತಿಗೆ …

Read More »

ರೈತರೇ ಗಮನಿಸಿ : ʻಸರ್ಕಾರಿ ಯೋಜನೆಗಳʼ ಪ್ರಯೋಜನೆ ಪಡೆಯಲು ʻFIDʼ ಹೊಂದುವುದು ಕಡ್ಡಾಯ

ಧಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು ಹಾಗೂ ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಅವರು ತಿಳಿಸಿದ್ದಾರೆ.   ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಯೊಂದಿಗೆ ತಾವು …

Read More »

‘ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಯತ್ನಾಳರಿಗೆ ಎಚ್ಚರಿಕೆ ನೋಟೀಸ್ ನೀಡಲಾಗದಷ್ಟು ಬಿಜೆಪಿ ನಿರ್ವೀರ್ಯ’

ಬೆಂಗಳೂರು: ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ …

Read More »

ಕುಡುಕರ ಅಡ್ಡೆಯಾದ ಹಾವೇರಿ ತಾಲೂಕು ಕಚೇರಿ

ಹಾವೇರಿ ತಾಲೂಕು ಪಂಚಾಯತಿ ಆವರಣ ಗಬ್ಬು ನಾರುತ್ತಿದೆ. ಇಲ್ಲಿಗೆ ಬರುವ ನೂರಾರು ಜನರಿಗೆ ಮೂಲಭೂತ ಸೌಕರ್ಯ ಇಲ್ಲವಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.ಅದು ಏಲಕ್ಕಿ ಕಂಪಿನ ನಗರದ ಹೃದಯ ಭಾಗ. ನಿತ್ಯ ನೂರಾರು ಜನ ಬಂದು ಹೋಗುವ ಸ್ಥಳ. ಆದರೆ ಆ ಸ್ಥಳ ಇತ್ತೀಚೆಗೆ ಕುಡುಕರಅಡ್ಡೆಯಾಗಿದೆ. ಜೊತೆಗೆ ಪುಂಡಪೋಕರಿಗಳಿಗೆ ಅನೈತಿಕ ಚಟುವಟಿಕೆ (anti social elements) ತಾಣವಾಗಿ ಮಾರ್ಪಟಿದೆ. ಇದನ್ನು ಕಣ್ಣಾರೆ ಕಂಡ ಅಧಿಕಾರಿಗಳು ಕಣ್ಣಿದ್ದು ಕುರುಡರಾಗಿ, ಕಿವಿಯಿದ್ದು ಕಿವುಡರಾಗಿ, ಬಾಯಿ ಇದ್ದು …

Read More »

ಅಂಜನಾದ್ರಿಗೆ ಆಗಮಿಸಿದ್ದ ಯುಪಿ ಭಕ್ತರು ಮತ್ತು ಸ್ಥಳೀಯರ ನಡುವೆ ಗಲಾಟೆ,

ಕೊಪ್ಪಳ, ಜ.2: ಆಂಜನೇಯ ದರ್ಶನಕ್ಕಾಗಿ ಅಂಜನಾದ್ರಿಗೆ ಬಂದು ವಾಪಸ್ ಆಗುತ್ತಿದ್ದ ಉತ್ತರ ಪ್ರದೇಶದ ಭಕ್ತರು ಹಾಗೂ ಸ್ಥಳೀಯರ ನಡುವೆ ಗಲಾಟೆ ನಡೆದ ಘಟನೆಕೊಪ್ಪಳ (Koppal)ಜಿಲ್ಲೆಯ ಗಂಗಾವತಿ ತಾಲೂಕಿನ ಕೊರಮ್ಮನ ಕ್ಯಾಂಪ್ ಬಳಿ ನಡೆದಿದೆ. ಗಲಾಟೆ ವೇಳೆ ಬಸ್​ಗಳಿಗೆ ಕಲ್ಲು ತೂರಲಾಗಿದ್ದು, ಇಬ್ಬರು ಭಕ್ತರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶದದಿಂದ ನಾಲ್ಕು ಬಸ್​ಗಳಲ್ಲಿ ಹನುಮಂತನ ಭಕ್ತರು ಅಂಜನಾದ್ರಿಗೆ ಆಗಮಿಸಿದ್ದರು. ವಾಪಸ್ ಆಗುತ್ತಿದ್ದಾಗ ಬಸ್​ಗಳನ್ನು ತಡೆದ ಸ್ಥಳೀಯರು ಜಗಳ ಎತ್ತಿದ್ದಾರೆ. ವಿದ್ಯುತ್ ವೈಯರ್ ತುಂಡಾಗುವಂತೆ ಬಸ್ …

Read More »

5,8,9ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ: ಶಿಕ್ಷಣ ಇಲಾಖೆ ನಡೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವಿರೋಧ

ಬೆಂಗಳೂರು, ಜ.03: ಕಳೆದೊಂದು ವರ್ಷದಿಂದ ಶಿಕ್ಷಣ ಇಲಾಖೆ (Karnataka Education Department) ಮಕ್ಕಳ ಭವಿಷ್ಯಕ್ಕಾಗಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಐದು ಎಂಟು ಹಾಗು 9ನೇ ತರಗತಿಗೆ ಪಬ್ಲಿಕ್ ಮಾದರಿಯಮೌಲ್ಯಾಂಕನ ಎಕ್ಸಾಂನಡೆಸಲು ಮುಂದಾಗಿದೆ. ಆದರೆ ಈ ಪರೀಕ್ಷೆ ಈಗ ಪ್ರತಿಷ್ಠೆಯ ಕಣವಾಗಿದ್ದು ಶಿಕ್ಷಣ ಇಲಾಖೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಹಠಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡುವ ಸ್ಥಿತಿ ಎದುರಾಗಿದೆ. ಇನ್ನೂ ಶಿಕ್ಷಣ ಇಲಾಖೆಯ ಮೌಲ್ಯಾಂಕನ ಪರೀಕ್ಷೆಗಳ ಹಠದಲ್ಲಿ ಖಾಸಗಿ ಶಾಲೆಗಳು ಹೊಸ …

Read More »