ಬೆಂಗಳೂರು, ಜನವರಿ 2: ಭಗವಾನ್ ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗೆ ಸಂಬಂಧಿಸಿದ್ದಲ್ಲ. ಅದು ವಿಶ್ವಕ್ಕೇ ಮಾದರಿ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದ್ದಾರೆ. ನಮ್ಮ ಸರ್ಕಾರ ಮತ್ತು ಪಕ್ಷ ರಾಮ ಮಂದಿರದ ಪರವಾಗಿದೆ. ರಾಮ ಮಂದಿರಕ್ಕೆ (Ram Mandir) ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಗೃಹ ಸಚಿವರಿಂದ ಈ ಹೇಳಿಕೆ ಮೂಡಿಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ರಾಮರಾಜ್ಯದ ಪರಿಕಲ್ಪನೆಯು ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಅರ್ಥೈಸುತ್ತದೆ. …
Read More »Yearly Archives: 2024
ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಬೆಂಗಳೂರು, ಜನವರಿ 2: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟೀಕಿಸಿದ್ದಾರೆ. ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ …
Read More »ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ದಾವಣಗೆರೆ : ಪ್ರತಾಪ್ ಸಿಂಹ ಅವರ ತಮ್ಮನ ಪರವಾಗಿ ನಾವು ಇದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಅವರ ತಮ್ಮನ ಕೇಸ್ ರಾಜಕೀಯ ಪ್ರೇರಿತವಾಗಿದೆ. ಅದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕುಟುಕಿದ್ದಾರೆ. ಮೈಸೂರಿನಲ್ಲಿ ಚುನಾವಣಾ ರಾಜಕಾರಣ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹತಾಶ ಮನೋಭಾವದಲ್ಲಿದೆ. ಹೀಗಾಗಿ, ಕಾಂಗ್ರೆಸ್ಸಿಗರು ಈ ರೀತಿ ಮಾಡ್ತಾ ಇದ್ದಾರೆ. …
Read More »ಸಿದ್ದರಾಮಯ್ಯನೇ ಶ್ರೀರಾಮ, ಆ ರಾಮನಿಗೇಕೆ ಪೂಜಿಸಬೇಕು? : ಹೆಚ್. ಆಂಜನೇಯ
ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಬ್ಬ ಶ್ರೀರಾಮ. ಮತ್ತೆ ಯಾಕೆ ಅಲ್ಲಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲ. ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು ಎಂದು ಕುಟುಕಿದ್ದಾರೆ. ಸ್ವತಃ ಸಿದ್ಧರಾಮಯ್ಯ ಅವರೇ ಶ್ರೀರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ಶ್ರೀರಾಮನ ದೇವಸ್ಥಾನ ಇದೆ, ಅಲ್ಲಿ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು …
Read More »ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ
ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ. ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ. ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ …
Read More »ಅಪಘಾತದಲ್ಲಿ ಮೃತಪಟ್ಟ 3 ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ
ಬೆಂಗಳೂರು : ಅಪಘಾತದಲ್ಲಿ ಮೃತಪಟ್ಟ ಮೂರು ಕುಟುಂಬಕ್ಕೆ KSRTC ಪರಿಹಾರ ನೀಡಿದೆ. ಮೂರು ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 1 ಕೋಟಿ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆ ಅಡಿ ಪರಿಹಾರ ನೀಡಿದ್ದಾರೆ. ಚಾಲಕರಾದ ಬಿ.ಎಂ.ಪುಟ್ಟಸ್ವಾಮಿ, ಅಶೋಕ್ ಕುಮಾರ್ ಚಾಲಕ ಕಂ ನಿರ್ವಾಹಕ ರಮೇಶ ಜಿ. ಕುಟುಂಬಕ್ಕೆ ಪರಿಹಾರ ನೀಡಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಮನೆಯ …
Read More »ಕುಡಿದು ವಾಹನ ಚಾಲನೆ: 700ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಪೊಲೀಸರು (ಬಿಟಿಪಿ) ನಗರದಾದ್ಯಂತ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಒಟ್ಟು 717 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಡಿಸೆಂಬರ್ 21 ರಿಂದ, ಪೊಲೀಸರು ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದಾರೆ. ಸಂಚಾರ ಪೊಲೀಸರ ನಾಲ್ಕು ವಿಭಾಗಗಳಾದ್ಯಂತ, ಡಿಸೆಂಬರ್ 30 ರವರೆಗೆ 27,280 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಲಾಗಿದ್ದು, ಮದ್ಯದ ಅಮಲಿನಲ್ಲಿ ಕಂಡುಬಂದ ಮತ್ತು ಕಾನೂನುಬದ್ಧ ರಕ್ತದ ಆಲ್ಕೋಹಾಲ್ …
Read More »ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಕನ್ನಡ ಧ್ವಜಕ್ಕೆ ಬೆಂಕಿ; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. …
Read More »ರಾಜ್ಯದಲ್ಲಿ ಕೋವಿಡ್ ಹೆಚ್ಚಳ
ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ …
Read More »ಹೊಸ ವರ್ಷಸದ ಸಂಭ್ರಮ ಒಂದೇ ರಾತ್ರಿ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ
ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾ ನಗರ, ಕೋರಮಂಗಲದ ರಸ್ತೆಗಳು ಜನಜಂಗುಳಿಯಿಂದ ತುಂಬಿದ್ದು, ರಾಶಿ ರಾಶಿ ಕಸಗಳು ರಸ್ತೆ ತುಂಬೆಲ್ಲಾ ಬಿದ್ದಿದ್ದವು. ವರ್ಷಾಚರಣೆ ಸಂಭ್ರಮಿಸುವ ಬರದಲ್ಲಿ ರಸ್ತೆ ರಸ್ತೆಗಳಲ್ಲಿಯೂ ಕಸ ಎಸೆಯಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು ಮುಂಜಾನೆಯಿಂದಲೇ ಕಸ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದು, ಡಿಸೆಬರ್ 31ರ ಒಂದೇ ರಾತ್ರಿಯಲ್ಲಿ ನಗರದಲ್ಲಿ ಬರೋಬ್ಬರಿ 8 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ. ನಸುಕಿನ ಜಾವ 3ಗಂಟೆಯಿಂದ …
Read More »