Breaking News

Yearly Archives: 2024

ಅತಿಯಾದ ಬಿಸಿಲಿಗೆ ಹೈರಾಣಾದ ಜನರು

ಹುಬ್ಬಳ್ಳಿ: ಪ್ರಸಕ್ತ ವರ್ಷ ಬೇಸಿಗೆಗೂ ಮುನ್ನ ಫೆಬ್ರುವರಿಯಲ್ಲೇ ಬಿಸಿಲು ಹೆಚ್ಚಾಗಿದ್ದು, ಅತಿ ತಾಪಮಾನವು ಜನರನ್ನು ಹೈರಾಣಾಗಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹಾವೇರಿಯಲ್ಲಿ ದಾಖಲಾಗಿದೆ. ಕೋಲಾರದಲ್ಲಿ ಅತಿ ಕಡಿಮೆ 30.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಫೆಬ್ರುವರಿ 9ರಂದು 34.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. …

Read More »

ಸಮಸ್ಯೆಗಳ ಆಗರವಾದ ಹೊಸೂರ ಪ್ರಾದೇಶಿಕ ಬಸ್‌ ನಿಲ್ದಾಣ

ಹುಬ್ಬಳ್ಳಿ: ‘ಹೊಸ ಕೋರ್ಟ್‌ ಕಡೆಯಿಂದ ಹೊಸೂರ ಬಸ್‌ ನಿಲ್ದಾಣದೊಳಗೆ ಬಂದು ಗ್ರಾಮೀಣ ಬಸ್‌ಗಳ ಕಡೆ ಹೋಗಲು ವೃದ್ಧರಿಗೆ ಮತ್ತು ಅಂಗವಿಕಲರಿಗೆ ತುಂಬಾ ಕಷ್ಟವಾಗುತ್ತಿದೆ. ಮೇಲಿನ ಅಂತಸ್ತಿಗೆ ಹೋಗಲು ನಿಲ್ದಾಣದಲ್ಲಿ ಲಿಫ್ಟ್‌ ಮಾಡಿದ್ದು, ಅದು ಕೆಟ್ಟು ನಿಂತು ವರ್ಷವಾಗಿದೆ. ಈವರೆಗೆ ದುರಸ್ತಿಯಾಗಿಲ್ಲ. ನಮ್ಮ ಸಂಕಷ್ಟ ಯಾರೂ ಕೇಳುತ್ತಿಲ್ಲ’. ಇಲ್ಲಿನ ಹೊಸೂರ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಅದರಲ್ಲೂ ವೃದ್ಧರು, ಅಂಗವಿಕಲರು, ಅನಾರೋಗ್ಯಪೀಡಿತರು, ಮಹಿಳೆಯರು ತೋಡಿಕೊಳ್ಳುವ ಸಂಕಷ್ಟವಿದು. ‘ಹೆಸರಿಗೆ ಮಾತ್ರ ಲಿಫ್ಟ್ ಇದೆಯೇ ಹೊರತು …

Read More »

ಕ್ರೀಡಾ ವಸತಿ ಶಾಲೆಗೆ ಕೋಸಂಬೆ ಭೇಟಿ; ಅವ್ಯವಸ್ಥೆಗೆ ತೀವ್ರ ಅಸಮಾಧಾನ

ಬೀದರ್‌: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಸೋಮವಾರ ಸಂಜೆ ನಗರದ ನೆಹರೂ ಕ್ರೀಡಾಂಗಣದ ಕ್ರೀಡಾ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ‘ನೆರವಿಗೆ ಕಾಯುತ್ತಿದೆ ಆಟ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಭಾನುವಾರ ವರದಿ ಪ್ರಕಟಿಸಿ, ಕ್ರೀಡಾ ವಸತಿ ಶಾಲೆಯಲ್ಲಿ ಸೌಕರ್ಯಗಳ ಕೊರತೆ ಇದೆ ಎಂಬ ಅಂಶ ಉಲ್ಲೇಖಿಸಿತ್ತು. ವರದಿ ಆಧರಿಸಿ ಕೋಸಂಬೆ ಅವರು ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆ ಕಂಡು ತೀವ್ರ …

Read More »

ಮನಸೂರೆಗೊಂಡ ನೂಪುರ ನೃತ್ಯೋತ್ಸವ

ಬೀದರ್‌: ಇಲ್ಲಿನ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿಏರ್ಪಡಿಸಿದ್ದ ನೂಪುರ ನೃತ್ಯ ಅಕಾಡೆಮಿಯ 24ನೇ ರಾಜ್ಯ ‘ನೂಪುರ ನೃತ್ಯೋತ್ಸವ’ ಸಭಿಕರ ಮನಸೂರೆಗೊಳಿಸಿತು. ಅಕಾಡೆಮಿಯ ನಿರ್ದೇಶಕಿ ಉಷಾ ಪ್ರಭಾಕರ ಹಾಗೂ ಅವರ ತಂಡದವರು ಪ್ರಸ್ತುತಪಡಿಸಿದ ಸಮೂಹ ನೃತ್ಯ, ರಾಮಾಯಣದ ಸನ್ನಿವೇಶಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾದವು. ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ, ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ನೃತ್ಯ, ಸಂಗೀತ, ಜಾನಪದ ಕಲೆಗಳ …

Read More »

ಶಾಸಕ ಭರತ್‌ ರೆಡ್ಡಿ ಮನೆ, ಕಚೇರಿ ಮೇಲಿನ ದಾಳಿ ವೇಳೆ ₹31 ಲಕ್ಷ ವಶಕ್ಕೆ: ಇ.ಡಿ

ಬಳ್ಳಾರಿ: ಬಳ್ಳಾರಿ ನಗರದ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಲೆಕ್ಕಕ್ಕೆ ಸಿಗದ ₹31 ಲಕ್ಷ ಹಣ ವಶಕ್ಕೆ ಪಡೆದಿರುವುದಾಗಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ತಿಳಿಸಿದೆ.   ಇ.ಡಿ ಅಧಿಕಾರಿಗಳ ತಂಡ ಕಳೆದ ಶನಿವಾರ (ಫೆ.10) ನಾರಾ ಭರತ್‌ ರೆಡ್ಡಿ, ಅವರ ತಂದೆ ಮಾಜಿ ಶಾಸಕ ಸೂರ್ಯ ನಾರಾಯಣ ರೆಡ್ಡಿ ಮತ್ತು ಸಂಬಂಧಿಗಳ ಹಲವು …

Read More »

ಪರಿಹಾರ ಕೊಡಿ, ಇಲ್ಲವೇ ಸಾಯಲು ಬಿಡಿ: ರೈತ ಮಹಿಳೆಯರ ಆಗ್ರಹ

ಯಮಕನಮರಡಿ: ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ, ರೈತ ಮಹಿಳೆಯರು ಸೋಮವಾರ ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. ’50 ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಡುತ್ತಿದ್ದೇವೆ. ಬೇಗ ಪರಿಹಾರ ಕೊಡಿ; ಇಲ್ಲದಿದ್ದರೆ ಸಾಯಲು ಬಿಡಿ. ನೀರಾವರಿ ಇಲಾಖೆಯ ಅಧಿಕಾರಿಗಳ ಹೆಸರು ಬರೆದಿಟ್ಟು ನಾವೆಲ್ಲ ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದೂ ಮಹಿಳೆಯರು ಜಮೀನು ಸರ್ವೆಗೆ ಬಂದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ‘ಈ ಗ್ರಾಮದ ಸರ್ವೆ …

Read More »

ಹೆತ್ತವರ ಕಣ್ಣಲ್ಲಿ ನೀರು ತರಿಸುವವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದು ಬಬಲಾದಿಯ ಮೂಲಸಂಸ್ಥಾನ ಮಠದ ಸಿದ್ಧರಾಮೇಶ್ವರ ಸ್ವಾಮೀಜಿ

ಅಥಣಿ: ‘ಹೆತ್ತವರ ಕಣ್ಣಲ್ಲಿ ನೀರು ತರಿಸುವವರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ’ ಎಂದು ಬಬಲಾದಿಯ ಮೂಲಸಂಸ್ಥಾನ ಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ನಂದೇಶ್ವರದಲ್ಲಿ ಸೋಮವಾರ ನಡೆದ ಗಡಾಮ ಮುತ್ಯಾ ಜಾತ್ರೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ‘ಇಂದು ಜನರ ನಡೆ, ನುಡಿ ಸರಿಯಾಗಿಲ್ಲ. ಸಂಸ್ಕಾರದ ಕೊರತೆಯಿಂದ ವೃದ್ಧಾಶ್ರಮ, ಅನಾಥಾಶ್ರಮ ಹೆಚ್ಚುತ್ತಿರುವೆ. ಜನರು ಸ್ವಾರ್ಥಿಯಾಗುತ್ತಿದ್ದಾರೆ. ಹಾಗಾಗಿ ಜನರು ತಮ್ಮ ಮನಃ ಪರಿವರ್ತನೆ ಮಾಡಿಕೊಳ್ಳಬೇಕು. ನಿರಂತರವಾಗಿ ಪರೋಪಕಾರ ಮಾಡಬೇಕು. ಸತ್ಕಾರ್ಯ ಮಾಡುವವರಿಗೆ …

Read More »

ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಹಣಮಂತ ನಿರಾಣಿ ಭರವಸೆ

ಬೆಳಗಾವಿ: ‘ಹಳೆ ಪಿಂಚಣಿ ಅನುಷ್ಠಾನ, ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ, ಬಡ್ತಿಯಲ್ಲಾದ ದೋಷ ಸರಿಪಡಿಸುವುದು ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು.   ನಗರದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಘಟಕದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳು ಬಾಕಿ ಇವೆ. ಹಂತಹಂತವಾಗಿ ಎಲ್ಲವನ್ನೂ …

Read More »

ಕ್ರೀಡಾಶಾಲೆ ಅವ್ಯವಸ್ಥೆ; ಸ್ವಯಂಪ್ರೇರಿತ ದೂರು ದಾಖಲು

ಬೆಳಗಾವಿ: ರಾಜ್ಯದ ಕ್ರೀಡಾಶಾಲೆಗಳು, ಕ್ರೀಡಾ ಹಾಸ್ಟೆಲ್‌ ಮತ್ತು ಜಿಲ್ಲಾ ಕ್ರೀಡಾಂಗಣಗಳ ಸ್ಥಿತಿಗತಿ ಕುರಿತು    ‘ಕ್ರೀಡಾ ಹಾಸ್ಟೆಲ್‌ ಮತ್ತು ಕ್ರೀಡಾಂಗಣಗಳಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಕ್ರೀಡಾ ಸೌಲಭ್ಯ ಅಭಿವೃದ್ಧಿ ದೃಷ್ಟಿಯಿಂದ ಕೈಗೊಂಡ ಕ್ರಮಗಳ ವರದಿಯನ್ನು ಒಂದು ವಾರದೊಳಗೆ ಆಯೋಗಕ್ಕೆ ಸಲ್ಲಿಸಬೇಕು’ ಎಂದು ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ‘ನಾನು ವಿವಿಧ ಜಿಲ್ಲೆಗಳಲ್ಲಿನ ಕ್ರೀಡಾ ಹಾಸ್ಟೆಲ್‌ಗಳಿಗೆ ಭೇಟಿ …

Read More »

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ.   ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು …

Read More »