ಬೆಂಗಳೂರು, ಫೆ.12: ಬಾಲಬ್ರೂಹಿ ಗೆಸ್ಟ್ ಹೌಸ್ನಲ್ಲಿ ಶಾಸಕರಿಗಾಗಿ ನಿರ್ಮಿಸಿದ ಕ್ಲಬ್ ವಿಧಾನಮಂಡಲ ಸಂಸ್ಥೆಯನ್ನು ಮುಖ್ಯಮಂತ್ರಿಸಿದ್ದರಾಮಯ್ಯ (Siddaramaiah)ಅವರು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti), ಯಾರ ಯಾರ ಕಾಲಕ್ಕೆ ಆಗಬೇಕು ಅನ್ನೋದು ಬರೆದುಕೊಟ್ಟಿರುತ್ತಾರೆ. 2022ರ ಮಾಡಬೇಕಿತ್ತು, ಕಾಲ ಕೂಡಿ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಉದ್ಘಾಟನೆ ಆಗಿದೆ. ನಾವು ಬೆಂಗಳೂರು ಕ್ಲಬ್ಗೆ ಚಪ್ಪಲಿ ಹಾಕಿಕೊಂಡು ಹೋದಾಗ ಬಿಡಲಿಲ್ಲ. ಪೊಲೀಸರ ಜೊತೆ ಜಗಳ ಮಾಡಿ ಹೋಗಿದ್ದೆವು. ಸಂಸದರು, …
Read More »Yearly Archives: 2024
ಶಕ್ತಿ ಯೋಜನೆ ಕೆಲವೇ ತಿಂಗಳು ಅಷ್ಟೇ:ಅಮೃತ ದೇಸಾಯಿ,
ಶಕ್ತಿ ಯೋಜನೆ – ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ. ಆದರೆ ಈ ಯೋಜನೆ ಯಶಸ್ವಿಯಾಗಿದೆ ಅಂತಾ ಸರಕಾರವೇನೋ ಹೇಳುತ್ತೆ. ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ತೆಗೆದುಕೊಂಡು ಹೋಗೋದೇ ಸವಾಲಾಗಿದೆ. ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟುಹೋಗಿದೆ.ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಶುರುವಾದ ಶಕ್ತಿ ಯೋಜನೆಯಿಂದ ಮಹಿಳೆಯರ ಓಡಾಟದ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಯೋಜನೆಯಿಂದಾಗಿ ಸುರಕ್ಷತೆ, ಸಮಯೋಚಿತ …
Read More »ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ,: ಎಂಬಿ ಪಾಟೀಲ್
ಕೇಸರಿ ಬಿಜೆಪಿಯವರ ಸ್ವತ್ತಲ್ಲ, ಎಲ್ಲ ಹಿಂದೂ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವಿರುತ್ತದೆ, ಮಠಮಾನ್ಯಗಳಲ್ಲಿ ಕೇಸರಿ ಬಾವುಟಗಳಿರುತ್ತವೆ, ನಾವೆಲ್ಲ ಮನೆಗಳಲ್ಲಿ ಪೂಜೆ ಮಾಡುವಾಗ ಕೇಸರಿ ಬಟ್ಟೆಯನ್ನು ಇಟ್ಟುಕೊಂಡಿರುತ್ತೇವೆ, ಕೇಸರಿ ಶಲ್ಯ ಹೆಗಲ ಮೇಲೆ ಹಾಕಿಕೊಂಡಿರುತ್ತೇವೆ, ಹಾಗಾಗಿ ಕೇಸರಿ ಶಲ್ಯ, ಕೇಸರಿ ಬಾವುಟ ಬಿಜೆಪಿಯವರ ಸೊತ್ತಲ್ಲ ಎಂದು ಸಚಿವ ಎಂಬಿ ಪಾಟಿಲ್ ಹೇಳಿದರು.ನಾವು ಜೈ ಬೀಮ್, ಜೈ ವಾಲ್ಮೀಕಿ, ಜೈ ಬಸವಣ್ಣ ಜೊತೆಗೆ ಜೈ ಶ್ರೀರಾಮ ಕೂಡ ಅನ್ನುತ್ತೇವೆ ಎಂಬಿ ಪಾಟೀಲ್, ಸಚಿವ
Read More »ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ಕೈಕಚ್ಚಿದ ಬೈಕ್ ಸವಾರ
ಬೆಂಗಳೂರು, (ಫೆಬ್ರವರಿ 21): ಹೆಲ್ಮೆಟ್ ಸಂಬಂಧ (helmet) ಸಂಚಾರಿ ಪೊಲೀಸರು (Traffic Police) ಹಾಗೂ ವಾಹನ ಸವಾರರ ನಡುವೆ ಕಿರಿಕ್ ನಡೆಯುತ್ತಿರುತ್ತವೆ. ಆದ್ರೆ, ಇಲ್ಲೋರ್ವ ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸ್ ಪೇದೆಯ ಕೈಕಚ್ಚಿದ್ದಾನೆ. ಬೆಂಗಳೂರಿನ (Bengaluru) ವಿಲ್ಸನ್ ಗಾರ್ಡನ್ 10ನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ಬಳಿಕ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ಕರೆಸಿ ಬೈಕ್ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಬೈಕ್ ಸವಾರನ ವಿರುದ್ಧ ಸಂಚಾರಿ …
Read More »ಬಿಎಸ್ಎನ್ಎಲ್ ಜನರಲ್ ಮ್ಯಾನೇಜರ್ ಕಾರು ಜಪ್ತಿ
ವಿಜಯಪುರ, ಫೆ.12: ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರು ಜಪ್ತಿ ಮಾಡಲಾಗಿದೆ. ನಿಗಮದಿಂದ ನೀಡಿದ ಕಾರಿನ ಬದಲು ಬೇರೆ ಕಾರು ಬಳಕೆ ಮಾಡುತ್ತಿದ್ದ ಬಗ್ಗೆ ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ವಿಕಾಸ್ ಜೈಕರ್ ಬಳಸುತ್ತಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ. ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜನರಲ್ ಮ್ಯಾನೇಜರ್ ಆಗಿ ವಿಕಾಸ್ ಜೈಕರ್ ಕೆಲಸ ಮಾಡುತ್ತಿದ್ದಾರೆ. ಬಿಎಸ್ಎಲ್ನಿಂದ ಕಾರು ನೀಡಿದ್ದರೂ ವಿಕಾಸ್ ಜೈಕರ್ ಅವರು ಬೆಳಗಾವಿಯಿಂದ …
Read More »ಗ್ಯಾರಂಟಿ ಎಂದು ಕಾಂಗ್ರೆಸ್ ಕಡಿದು ಕಟ್ಟಿಹಾಕಿದ್ದು ಏನಿಲ್ಲ: ವಿಜಯೇಂದ್ರ
ಚಿಕ್ಕಬಳ್ಳಾಪುರ, ಫೆ.12: ಗ್ಯಾರಂಟಿ (Congress Guarantees) ಎಂದು ಕಾಂಗ್ರೆಸ್ನವರು ಕಡಿದು ಕಟ್ಟಿಹಾಕಿದ್ದು ಏನಿಲ್ಲ. ಕಾಂಗ್ರೆಸ್ ಸಾಕಷ್ಟು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ.ಅಧಿಕಾರಕ್ಕೆ ಬಂದು ಎಂಟು ಒಂಬತ್ತು ತಿಂಗಳಾದರೂ ಅಭಿವೃದ್ಧಿ ಕಾಣಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷಬಿವೈ ವಿಜಯೇಂದ್ರ (BY Vijayendra)ಆರೋಪಿಸಿದ್ದಾರೆ. ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಜೆಟ್ ಅಧಿವೇಶನದಲ್ಲಿ ಭಾಷಣ ಮಾಡಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ …
Read More »ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ:H.D.K.
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 …
Read More »ರೈತರ ಬಂಧನಕ್ಕೆ ಸಿಎಂ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ.
ರೈತರ ಬಂಧನಕ್ಕೆ ಸಿಎಂ ಖಂಡನೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ. ದೆಹಲಿ(Delhi)ಯಲ್ಲಿ ನಾಳೆ(ಫೆ.13) ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿ(Hubli)ಯ ರೈತರನ್ನು ಭೋಪಾಲ್(Bhopal) ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ. ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್(JantharManthar) ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ. …
Read More »ನಿರ್ಮಲಾ ಸೀತರಾಮನ್ ಬೆಂಗಳೂರು ದಕ್ಷಿಣಕ್ಕೆ, ರಾಜೀವ್ ಚಂದ್ರಶೇಖರ್ ಸೆಂಟ್ರಲ್ ಗೆ ; ತೇಜಸ್ವಿ ಸೂರ್ಯ ಎಲ್ಲಿಗೆ?
ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ ನವದೆಹಲಿ: ರಾಜ್ಯಸಭೆ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಿಜೆಪಿ ರಾಜ್ಯಸಭೆ ಚುನಾವಣೆಗೆ ತನ್ನ 14 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಸಂಜೆ ಘೋಷಣೆ ಮಾಡಿದೆ. ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, …
Read More »ರೋಜಗಾರ್ ಮೇಳದಡಿ 7 ಲಕ್ಷ ಯುವಕರಿಗೆ ಉದ್ಯೋಗ; ಪ್ರಲ್ಹಾದ್ ಜೋಶಿ
ಬೆಂಗಳೂರು: ಪ್ರಧಾನ ಮಂತ್ರಿ ಅವರ ರೋಜಗಾರ್ ಮೇಳ (ಉದ್ಯೋಗ ಮೇಳ – Rozgar Mela) ದೇಶದ ಯುವ ಸಮೂಹಕ್ಕೆ ಉದ್ಯೋಗ ಒದಗಿಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಬೆಂಗಳೂರಿನಲ್ಲಿ ಇಂದು ಬಿಎಸ್‌ಎಫ್ ಆಯೋಜಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಲ್ಹಾದ್ ಜೋಶಿ, ಪ್ರಧಾನ ಮಂತ್ರಿ ರೋಜಗಾರ್ ಯೋಜನೆಯಡಿ ನರೇಂದ್ರ ಮೋದಿ (PM Narendra Modi) ಅವರ ಅವಧಿಯಲ್ಲಿ 7 …
Read More »