ಗದಗ: ಕರ್ತವ್ಯನಿರತ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ನಡೆದಿದೆ. ಹುತಾತ್ಮ ಯೋಧರನ್ನು ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರ ಗ್ರಾಮದ ರಾಮನಗೌಡ ಕರಬಸನಗೌಡ್ರ (44) ಎಂದು ಗುರುತಿಸಲಾಗಿದೆ. ಅಸ್ಸಾಂ ಹಾಗೂ ಸಿಕ್ಕಿಂ ನಡುವಿನ ಬಾಂಗ್ ಡೊಂಗ್ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತ ಆಗಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಫೆ.7ರಂದು ಹುತಾತ್ಮ …
Read More »Yearly Archives: 2024
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ ಸಲ್ಲದು ; ತಾಕೀತು
ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಲು ಕೆಲವೇ ದಿನಗಳು ಬಾಕಿ ಇರುವಂತೆಯೇ ಚುನಾವಣ ಆಯೋಗ ನಿರ್ದೇಶನವೊಂದನ್ನು ಹೊರಡಿಸಿ ಈ ಬಾರಿ ಯಾವುದೇ ಕಾರಣಕ್ಕೆ ಮತ್ತು ಯಾವುದೇ ರೂಪದಲ್ಲಿ ಚುನಾವಣ ಪ್ರಚಾರದಲ್ಲಿ ಮಕ್ಕಳನ್ನು ಬಳಸಕೂಡದು ಎಂದು ತಾಕೀತು ಮಾಡಿದೆ. ಈ ಹಿಂದೆ ಹಲವು ಬಾರಿ ಚುನಾವಣ ಆಯೋಗ ಸೂಚನೆ ನೀಡಿತ್ತಾದರೂ, ಈ ಸಲ “ಶೂನ್ಯ ಸಹನಾ’ ನಿಲುವು ತಳೆಯುವುದಾಗಿ ಸ್ಪಷ್ಟಪಡಿಸಿದೆ. ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರನ್ನು ಕಡ್ಡಾಯವಾಗಿ …
Read More »ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ
ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಾಗಾರಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 12ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದು, ಫೆ. 16ರಂದು ಮುಖ್ಯಮಂತ್ರಿಗಳು …
Read More »ಕೃಷಿ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ
ಗೋಕಾಕ: ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಅಜೋಲಾ ಸಸ್ಯದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಕರಕುಚ್ಚಿ ಗ್ರಾಮದಲ್ಲಿ ಮಾಡಿದರು. ವಿದ್ಯಾರ್ಥಿಗಳು ರೈತರಿಗೆ ಅಜೋಲಾ ಸಸ್ಯದ ಮಹತ್ವ ಹಾಗೂ ವಿವಿಧ ತಳಿಗಳು, ಬೆಳೆಯುವ ಹಂತಗಳು ಕುರಿತು ಮಾಹಿತಿಯನ್ನು ನೀಡಿದರು. ಪಶುವಿನ ಉತ್ತಮ ಹಾಲಿನ ಇಳುವರಿಗಾಗಿ ಪಶುಗಳಿಗೆ ಹಾಕುವ ಹಿಂಡಿಯೊಂದಿಗೆ ಅಜೋಲಾ ಮಿಶ್ರಣ ಮಾಡಿ ಉಪಯೋಗಿಸಬೇಕು.ಅಜೋಲಾ ಬೆಳೆಯುವ ವಿಧಾನ ಹಾಗೂ …
Read More »ಉಚಿತವಾಗಿ ‘ಆಧಾರ್’ ಕಾರ್ಡ್ ಅಪ್ ಡೇಟ್ ಮಾಡಲು ಮಾ.14 ಕೊನೆಯ ದಿನ
ನವದೆಹಲಿ: ಆಧಾರ್ ಕಾರ್ಡ್ ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ, ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ ಆಧಾರ್ ಅನ್ನು ನವೀಕರಿಸಬಹುದು. ಇದಕ್ಕಾಗಿ ಯಾವುದೇ ಶುಲ್ಕ ಇರುವುದಿಲ್ಲ.ನೀವು ಇನ್ನೂ ಕೂಡ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿಸಿಲ್ವಾ..? ಹಾಗಾದರೆ ಮಾರ್ಚ್ 14 ರೊಳಗೆ ಈ ಕೆಲಸ ಮಾಡಿ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಅನ್ನು ಉಚಿತವಾಗಿ ನವೀಕರಿಸುವ …
Read More »ಎಂಕೆ ಹುಬ್ಬಳ್ಳಿ ಧ್ವಜ ತೆರವು: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೇ ಗಲಾಟೆಗೆ ಕಾರಣ ಎಂದ ಬೆಳಗಾವಿ ಎಸ್ಪಿ
ಬೆಳಗಾವಿ, : ಸಾರ್ವಜನಿಕ ಸ್ಥಳಗಳಲ್ಲಿ ಧ್ವಜಕ್ಕೆ ಅವಕಾಶ ಇಲ್ಲ ಎಂದುಬೆಳಗಾವಿ (Belagavi)ಎಸ್ಪಿ ಭೀಮಾಶಂಕರ ಗುಳೇದ್ ಹೇಳಿದ್ದಾರೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದ ಸಂಬಂಧ ಮಾತನಾಡಿದ ಅವರು, ಸರ್ಕಾರ, ಅಧಿಕಾರಿಗಳ ತೀರ್ಮಾನದಂತೆ ನಾವು ನಡೆಯುತ್ತೇವೆ ಎಂದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದೇ ಗಲಾಟೆಗೆ ಕಾರಣವಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣ ಮೇಲೆ ನಿಗಾ ಇಟ್ಟಿದ್ದೇವೆ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಗ್ರಾಮದಲ್ಲಿ ಎಲ್ಲರೂ …
Read More »ಕೆರಗೋಡು ಬಳಿಕ ಬೆಳಗಾವಿಯ ಎಂಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವು
ಬೆಳಗಾವಿ, : ಮಂಡ್ಯ ತಾಲೂಕಿನಕೆರಗೋಡು ಗ್ರಾಮದಲ್ಲಿಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ (Belagavi) ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ (MK Hubballi) ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಚಲೋ ಎಂಕೆ ಹುಬ್ಬಳ್ಳಿ ಕೈಗೊಂಡಿದ್ದು, ಬಿಜೆಪಿ ನಾಯಕರು, ಹಿಂದೂ ಪರ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. …
Read More »ಅವರು BJP ಗೆ ಕರೆಯುತ್ತಿದ್ದಾರೆ, ನಾನು ಹೋಗಲ್ಲ: ಕೇಜ್ರಿವಾಲ್
ಹೊಸದಿಲ್ಲಿ: “ನಾನು ಬಿಜೆಪಿಗೆ ಸೇರಬೇಕು ಎಂದು ಆಹ್ವಾನ ನೀಡುತ್ತಿದ್ದಾರೆ. ಆದರೆ ನಾನು ಹೋಗುವುದೇ ಇಲ್ಲ’ ಹೀಗೆಂದು ದಿಲ್ಲಿ ಸಿಎಂ ಮತ್ತು ಆಪ್ ಸಂಚಾಲಕ ಅರವಿಂದ ಕೇಜ್ರಿವಾಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ. ಪಕ್ಷದ ಶಾಸಕರನ್ನು ಖರೀದಿ ಮಾಡಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿರುವಂತೆಯೇ ಅವರು ಈ ಮಾತುಗಳನ್ನಾಡಿದ್ದಾರೆ. ಹೊಸದಿಲ್ಲಿಯ ಕಿರಾರಿ ಎಂಬಲ್ಲಿ ಶಾಲೆಗಳ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೇಜ್ರಿವಾಲ್ ಮಾತನಾಡಿದರು. “ಅವರು (ಬಿಜೆಪಿ) ನನ್ನ ವಿರುದ್ಧ ಏನೂ …
Read More »ದಿಲ್ಲಿ ಹೋರಾಟಕ್ಕೆ ಕಾಂಗ್ರೆಸ್ ತಯಾರಿ
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಆರೋಪಿಸಿ ದಿಲ್ಲಿಯಲ್ಲಿ ಹೋರಾಟ ಕ್ಕಿಳಿಯಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಫೆ. 7ರಂದು ಸಂಸತ್ ಭವನದ ಎದುರು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದೆ. ಜತೆಗೆ, “ನನ್ನ ತೆರಿಗೆ ನನ್ನ ಹಕ್ಕು” ಅಭಿಯಾನಕ್ಕೂ ಬೆಂಬಲ ಸೂಚಿಸಿದೆ. ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಕೂಗೆಬ್ಬಿಸಿದ ಸಂಸದ ಡಿ.ಕೆ. ಸುರೇಶ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದ್ದು, ಇದರಿಂದ ಪಕ್ಷಕ್ಕಾಗಿರುವ ಮುಜುಗರವನ್ನೂ ತಪ್ಪಿಸಬೇಕಾದ ಅನಿವಾರ್ಯಕ್ಕೆ ಕಾಂಗ್ರೆಸ್ ಸಿಲುಕಿದೆ. ಅಲ್ಲದೆ ಲೋಕ ಸಭೆ …
Read More »SSLC ಪರೀಕ್ಷೆಗೆ ಈ ಬಾರಿಯೂ 50:30:20 ಸೂತ್ರ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಕಾಠಿನ್ಯ ಮಟ್ಟವನ್ನು 50:30:20 ಮಾದರಿಯಲ್ಲಿ ಮುಂದುವರಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ತೀರ್ಮಾನಿಸಿದೆ. ಈ ವರ್ಷ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ. ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ. ಈ …
Read More »