ಬೆಂಗಳೂರು: ರಾಜ್ಯ ಸರ್ಕಾರದ ನಾನಾ ಇಲಾಖೆಗಳ ಸುಮಾರು 11,366 ನೌಕರರು ಒಪಿಎಸ್ (ಹಳೆಯ ನಿಶ್ಚಿತ ಪಿಂಚಣಿ ಯೋಜನೆ) ವ್ಯಾಪ್ತಿಗೆ ಒಳಪಡಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಸರ್ಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿಯನ್ನು ಮುಂದುವರಿಸಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ (X) ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯ ಕಾಂಗ್ರೆಸ್ (Karnataka …
Read More »Yearly Archives: 2024
ಶೆಟ್ಟರ್ ಬಿಜೆಪಿಗೆ ವಾಪಸ್ ಬೆನ್ನಲ್ಲೇ ಲಕ್ಷ್ಮಣ ಸವದಿ ಘರ್ ವಾಪಸಿ ಮಾಡ್ತಾರಾ? ಸಾಹುಕಾರ್ ಹೇಳಿದ್ದೇನು?
ಬೆಂಗಳೂರು,): ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಚ್ಚರಿ ಎಂಬಂತೆ ಕಾಂಗ್ರೆಸ್‌ಗೆ ಕೈಕೊಟ್ಟು ವಾಪಸ್ ಬಿಜೆಪಿಗೆ ಸೇರ್ಪಡೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಲಕ್ಷ್ಮಣ ಸವದಿ ಅವರು ಸಹ ಬಿಜೆಪಿಗೆ ವಾಪಸ್ ಆಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಇದೀಗ ಇದಕ್ಕೆ ಸ್ವತಃ ಲಕ್ಷ್ಮಣ ಸವಧಿ ಪ್ರತಿಕ್ರಿಯಿಸಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ನಾನು ಮತ್ತೆ ಬಿಜೆಪಿಗೆ ಹೋಗಲ್ಲ. ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ …
Read More »ಗಣರಾಜ್ಯೋತ್ಸವದ ಮಹತ್ವ, ಶುಭ ಸಂದೇಶಗಳು ಇಲ್ಲಿದೆ
ಭಾರತವು ಗಣರಾಜ್ಯೋತ್ಸವವನ್ನು ಆಚರಿಸಲು ಸಿದ್ಧವಾಗಿದೆ. 26 ಜನವರಿ 1950 ರಂದು ಭಾರತ ಮೊದಲ ಗಣರಾಜ್ಯೋತ್ಸವವನ್ನು ಆಚರಿಸಿತು. ದೇಶ 2024ರಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಿದೆ. ಭಾರತದ ಸಂವಿಧಾನ ಸಭೆಯು 26 ನವೆಂಬರ್ 1949 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿತು ಮತ್ತು ಭಾರತದ ಸಂವಿಧಾನವು 26 ಜನವರಿ 1950 ರಂದು ಇಡೀ ದೇಶದಲ್ಲಿ ಜಾರಿಗೆ ಬಂದಿತು ಎಂಬುದು ಗಮನಾರ್ಹವಾಗಿದೆ.ಈ ದಿನದಂದು ದೇಶದಾದ್ಯಂತ ದೇಶಭಕ್ತಿ ಮತ್ತು ಉತ್ಸಾಹದ ವಾತಾವರಣವಿರುತ್ತದೆ. ಈ ದಿನದಂದು ಹೆಚ್ಚಿನ ಕಛೇರಿಗಳು …
Read More »ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್‌ನಿಂದ ಒಪಿಎಸ್‌ಗೆ ಶಿಫ್ಟ್ ಆಗಲು ಅವಕಾಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (National pension scheme-NPS) ವ್ಯಾಪ್ತಿಯಿಂದ ಹಳೆಯ ಪಿಂಚಣಿ ಯೋಜನೆಗೆ (Old Pension Scheme-OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ …
Read More »ಘರ್ ವಾಪಸ್ಸಿ ಪಕ್ಕಾ ಆಯ್ತಾ?.. ದೆಹಲಿಗೆ ಹಾರಿದ ಶೆಟ್ಟರ್
ಬೆಂಗಳೂರು: ಸದ್ಯ ಕಾಂಗ್ರೆಸ್‌ನಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಘರ್ ವಾಪಸ್ಸಿ ಸುದ್ದಿ ಕೇಳಿ ಬರುತ್ತಿರುವ ಬೆನ್ನಲ್ಲೆ ಇಂದು ಅವರು ದೆಹಲಿಗೆ ಹಾರಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಜಗದೀಶ ಶೆಟ್ಟರ ಅವರು ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಜೊತೆಯಲ್ಲಿ ದೆಹಲಿಗೆ ಭೇಟಿ ನೀಡಿರೋದು ಅಚ್ಚರಿಗೆ ಕಾರಣವಾಗಿದೆ. ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೆಹಲಿಯಲ್ಲಿದ್ದಾರೆ. …
Read More »ಉತ್ತರ ಕನ್ನಡ ಜಿಲ್ಲಾ BJP ಪ್ರಧಾನ ಕಾರ್ಯದರ್ಶಿ ನೇಮಕ ಸಭೆಯಲ್ಲಿ ವಾಗ್ವಾದ; ಹೊರನಡೆದ ಅನಂತ್ ಕುಮಾರ್ ಹೆಗಡೆ
ಕಾರವಾರ, ಜ.25: ಆರೋಗ್ಯದ ಕಾರಣ ನೀಡಿ ನಾಲ್ಕು ವರ್ಷ ಜನರ ಕೈಗೆ ಸಿಗದಿದ್ದ ಬಿಜೆಪಿ ಸಂಸದಅನಂತ್ ಕುಮಾರ್ ಹೆಗಡೆ(Ananth Kumar Hegde) ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ (Uttara Kannada) ಕ್ಷೇತ್ರದಲ್ಲಿ ಆಯಕ್ಟಿವ್ ಆಗಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಸಂಸದರ ನಿರ್ಧಾರಕ್ಕೆ ಸ್ವಪಕ್ಷದಲ್ಲೇ ಮಣ್ಣನೆ ಸಿಗುತ್ತಿಲ್ಲ ಎಂಬ ಅಂಶ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನೇಮಕ ಮಾಡುವ ಸಭೆಯಿಂದಾಗಿ ಹೊರಬಿದ್ದಿದೆ. ಜಿಲ್ಲೆಯ ಪ್ರಧಾನ …
Read More »ಕಟೀಲ್ಗೆ ಟಿಕೆಟ್ ಡೌಟ್ : ಹೊಸ ಮುಖ ಕಣಕ್ಕಿಳಿಸಲು ಬಿಜೆಪಿ ಸಿದ್ದತೆ
ಮಂಗಳೂರು: ಮುಂಬರುವ ಲೋಕಸಭೆಯ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮುಖ ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಹಾಲಿ ಸಂಸದ ನಳಿನ್ ಕುಮಾರ ಕಟೀಲ ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ನಳಿನ ಕುಮಾರ ಬದಲಿಗೆ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ …
Read More »ಅಸ್ಸಾಂನ ಆಂತರಿಕ ಸಂಘರ್ಷ ಗೊತ್ತಿದ್ದರೂ ರಾಹುಲ್ ಗಾಂಧಿ ಅಲ್ಲಿಗೆ ಹೋಗಿದ್ದೇಕೆ:H.D.D.
ಹಾಸನ, ಜನವರಿ 25: ಅಸ್ಸಾಂನಲ್ಲಿ ಕೆಲವು ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಇದೆ, ಸಂಘರ್ಷದ ಪರಿಸ್ಥಿತಿ ಇದೆ. ಇದು ಗೊತ್ತಿದ್ದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅಲ್ಲಿಗೆ ಹೋಗಿದ್ದೇಕೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ಡಿ ದೇವೇಗೌಡರು (HD Deve Gowda) ಪ್ರಶ್ನಿಸಿದರು. ಹಾಸನದಲ್ಲಿ ತಾಲೂಕುವಾರು ಸಭೆ ನಡೆಸಿ ಪಕ್ಷದ ಎಲ್ಲಾ ಹಂತದ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರ ಭೇಟಿಯಾಗುತ್ತಿರುವ ಸಂದರ್ಭ ದೇವೇಗೌಡರು ಮಾತನಾಡಿದರು. ರಾಹುಲ್ ಗಾಂಧಿಯ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ …
Read More »ನಾವೇನು ಹೈಕಮಾಂಡ್ ಗುಲಾಮರಾ? : ಕೆಎನ್ ರಾಜಣ್ಣ ಕೆಂಡ
ತುಮಕೂರು: ದೆಹಲಿಯಲ್ಲಿ (Delhi) ಕೂತು ಪಟ್ಟಿಮಾಡಿ ಲಾಟರಿ ಟಿಕೆಟ್ ಹಂಚುವಂತೆ ಹಂಚಿದರೆ ಹೇಗೆ? ಎಂದು ನಿಗಮ ಮಂಡಳಿ ಆಯ್ಕೆ ವಿಚಾರವಾಗಿ ಹೈಕಮಾಂದ್ ವಿರುದ್ಧ ಕೆ.ಎನ್.ರಾಜಣ್ಣ (KN Rajanna) ಗುಡುಗಿದ್ದಾರೆ. ಈ ಬಗ್ಗೆ ತುಮಕೂರಿನಲ್ಲಿ (Tumkur) ಮಾತನಾಡಿದ ಅವರು, ನಮ್ಮನ್ನು ಕೇಳಿ ನಿಗಮ ಮಂಡಳಿಗೆ ಆಯ್ಕೆ ಮಾಡಬೇಕಾ ಅಥವಾ ದೆಹಲಿಯಲ್ಲಿ ಕುಂತು ಪಟ್ಟಿ ಮಾಡಿ ಲಾಟರಿ ಟಿಕೆಟ್ ಹಂಚಿದರೆ ಹೇಗೆ? ನಮಗೊಂದು ಮಾತು ಕೇಳಬೇಕಲ್ಲ. ಸ್ಥಳೀಯವಾಗಿ ಯಾರ್ಯಾರು ಕೆಲಸ ಮಾಡಿದ್ದಾರೆ ಎಂದು ನಮಗೆ …
Read More »ಕೈಗೆ ಗುಡ್ ಬೈ.. ಮರಳಿ ಗೂಡಿಗೆ ಜಗದೀಶ್ ಶೆಟ್ಟರ್
ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವನೆಗೂ ಮುನ್ನವೇ ಬಿಜೆಪಿಗೆ ವಾಪಾಸ್ ಆಗಿದ್ದಾರೆ. ಇಂದು ನವದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಅವರು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಜಗದೀಶ್ ಶೆಟ್ಟರ್ …
Read More »