ಬೀದರ್, ಜನವರಿ 22: ಹುಮ್ನಾಬಾದ್ ( Humnabad ) ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ( Chemical factory ) ವಿಷಾನಿಲ ( Gas leak ) ಸೋರಿಕೆಯಾಗಿ ಇಬ್ಬರು ಮೃಪಟ್ಟಿದ್ದಾರೆ. ಎಂಟು ಜನರು ಅಸ್ವಸ್ಥರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರೂ ಪ್ರಣಾಪಾದಿಂದ ಪಾರಾಗಿದ್ದಾರೆ. ಮಧ್ಯಪ್ರದೇಶ ಮೂಲದ ಮೊಹಮ್ಮದ್ ಶಾಬಾದ್ (21) ಇಂದ್ರಜೀತ್ (23) ಮೃತ ದುರ್ದೈವಿಗಳು. ರವಿವಾರ (ಜ.21) ರಾತ್ರಿ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಎಂಬ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ನಗರ …
Read More »Yearly Archives: 2024
ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ
ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …
Read More »ಅಯೋಧ್ಯೆ ರಾಮ ಪ್ರತಿಷ್ಠಾಪನೆ – ಕರುನಾಡಿನ ದೇಗುಲಗಳಲ್ಲೂ ಸಂಭ್ರಮ!
ಬೆಂಗಳೂರು : ಇಂದು ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಪ್ರತಿಷ್ಠಾಪನೆ (Rama mandir) ನಡೆಯುವ ಮುಹೂರ್ತದಲ್ಲಿ ರಾಜ್ಯ ಬಿಜೆಪಿ (BJP) ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ (BS Yediyurappa) ಬಸವರಾಜ ಬೊಮ್ಮಾಯಿ (Basavaraj bommai), ಸದಾನಂದಗೌಡ (Sadananda gowda) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. …
Read More »ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ
ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ಮುಜರಾಯಿ ದೇಗುಲಗಳಲ್ಲಿ ದಾಸೋಹ, …
Read More »ಗದಗದಲ್ಲಿ ಶೋಭಾಯಾತ್ರೆ ನಡೆಸದಂತೆ ಪೊಲೀಸರ ಕಟ್ಟಾಜ್ಞೆ; ಯಾರೇ ಬಂದರೂ ಶೋಭಾಯಾತ್ರೆ ನಿಲ್ಲಲ್ಲ ಎಂದ ಶ್ರೀರಾಮಸೇನೆ
ಗದಗ, : ಅಯೋಧ್ಯೆಯಲ್ಲಿ ಭಗವಾನ ಶ್ರೀರಾಮಚಂದ್ರನ ಭವ್ಯ ಮಂದಿರ(Ayodhya Ram Manidr)ನಿರ್ಮಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಸುವರ್ಣ ಕ್ಷಣ ಸಂಭ್ರಮಕ್ಕೆ ದೇಶದ ಕೋಟ್ಯಂತರ ಹಿಂದೂಗಳು ಸಜ್ಜಾಗಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ದಿನ ಗದಗ (Gadag) ನಗರದಲ್ಲಿ ಶ್ರೀರಾಮಸೇನೆ ಶ್ರೀರಾಮ ಮೂರ್ತಿಯ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಆದರೆ, ಶೋಭಾಯಾತ್ರೆಗೆ ಪೊಲೀಸ್ ಇಲಾಖೆ ಅಡ್ಡಿಪಡಿಸುತ್ತಿದ್ದು, ಯಾವುದೇ ಕಾರಣಕ್ಕೂ ಶೋಭಾಯಾತ್ರೆ ಮಾಡುವಂತಿಲ್ಲ ಎಂದಿದೆ. ಪೊಲೀಸರ ವಿರುದ್ಧ ಆಕ್ರೋಶಗೊಂಡಿರುವ ಶ್ರೀರಾಮಸೇನೆ, ಯಾರೇ ಬಂದರೂ ಶೋಭಾಯಾತ್ರೆ ನಿಲ್ಲಲ್ಲ. ನಡೆಸಿಯೇ ತೀರುತ್ತೇವೆ …
Read More »ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?
ತುಮಕೂರು,: ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿಕೊಬ್ಬರಿಗೆ (Copra/Coconut)ಬೆಂಬಲ ಬೆಲೆಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್ …
Read More »ನಾಣ್ಯಗಳಲ್ಲಿ ಸಿದ್ಧವಾದ ಅಯೋಧ್ಯೆ ರಾಮ ಮಂದಿರ; ಪ್ರಧಾನಿ ಮೋದಿಗೆ ಇದುವೇ ವಿಶೇಷ ಉಡುಗೊರೆ
ದಾವಣಗೆರೆ, :ಅಯೋಧ್ಯೆ ಶ್ರೀರಾಮ ಮಂದಿರ(Ayodhya Ram Mandir) ನಾಳೆ ಲೋಕಾರ್ಪಣೆಗೊಳ್ಳಲಿದೆ. ಈ ನಡುವೆ ಕರ್ನಾಟಕದಲ್ಲಿ ರಾಮ ಭಕ್ತರು ಅದರಲ್ಲೂ ಕಲಾವಿದರು ರಾಮ ಮಂದಿರದ ಸ್ಥಬ್ದಚಿತ್ರಗಳನ್ನು ರಚಿಸುತ್ತಿದ್ದಾರೆ. ಇತ್ತೀಚೆಗೆ ಪೆನ್ಸಿಲ್ ಲೆಡ್ನಲ್ಲಿ ರಾಮನ ಕೆತ್ತನೆ, ಕೇಕ್ನಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣ, ಜೈ ಶ್ರೀರಾಮ್ ಹೆಸರುಗಳಲ್ಲೇ ರಾಮನ ಚಿತ್ರ ಬಿಡಿಸಿರುವುದು ಸೇರಿದಂತೆ ಅನೇಕ ರೀತಿಯ ಚಿತ್ರಗಳನ್ನು ಬಿಡಿಸಲಾಗಿತ್ತು. ಇದೀಗ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ (Davanagere) ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ …
Read More »ಕರ್ನಾಟಕದಲ್ಲಿ ಇಂದು 89 ಮಂದಿಗೆ ಕೊರೊನಾ ಸೋಂಕು ದೃಢ; ಎಷ್ಟು ಸಾವು, ಗುಣಮುಖ ಕೇಸ್ಎಷ್ಟು?
ಬೆಂಗಳೂರು, : ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು (Karnataka Covid Case) ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬೆಂಗಳೂರಿನಲ್ಲಿ(Bengaluru) 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ …
Read More »ಚಿತ್ರದುರ್ಗ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ
ಚಿತ್ರದುರ್ಗ, ಜನವರಿ 21: ಎಲ್ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ …
Read More »ವಿವಾದ ಸೃಷ್ಟಿಸಿದ್ದ ಹುಬ್ಬಳ್ಳಿ MTS ಕಾಲೋನಿಯ 13 ಎಕರೆ ಜಮೀನು ಲೀಸ್ ಟೆಂಡರ್ ರದ್ದು: RLDA ಬೋರ್ಡ್ ಆದೇಶ
ಹುಬ್ಬಳ್ಳಿ, ಜ.21: ಸಾಕಷ್ಟು ವಿವಾದ ಸೃಷ್ಟಿಸಿದ್ದಹುಬ್ಬಳ್ಳಿಯ (Hubballi)ಎಂಟಿಎಸ್ ಕಾಲೋನಿಯ 13 ಎಕರೆ ಜಮೀನಿನ ಟೆಂಡರ್ ಪ್ರಕ್ರಿಯೆಯನ್ನು ರೈಲ್ವೆ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ (RLDA) ಬೋರ್ಡ್ ರದ್ದುಗೊಳಿಸಿ ಆದೇಶಿಸಿದೆ. ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ MTS ಕಾಲೀನಿಯ 13 ಎಕರೇ ಜಮೀನನ್ನು 99 ವರ್ಷಗಳಿಗೆ ಲೀಸ್ಗೆ ನೀಡಲು ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ರೈಲ್ವೇ ಭೂಮಿ ಅಭಿವೃದ್ಧಿ ಪ್ರಾಧಿಕಾರವು 13 ಎಕರೇ ಜಮೀನು ಲೀಸ್ಗೆ ಇದೆ ಎಂದು ಬೋರ್ಡ್ ಹಾಕಿತ್ತು. ಈ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ …
Read More »