ಚಿಕ್ಕಮಗಳೂರು, (ಜನವರಿ 10): ಲೋಕಸಭೆ ಚುನಾವಣೆ (Loksabha Election 2024) ಹತ್ತಿರವಾಗುತ್ತಿದ್ದಂತೆಯೇ ಗೆಲುವಿನ ಸೂತ್ರ ಹೆಣೆಯಲು ದಳ ಕೋಟೆಯಲ್ಲಿ ರೆಸಾರ್ಟ್ ರಾಜಕಾರಣ (resort Politics) ಶುರುವಾಗಿದೆ. ಚಿಕ್ಕಮಗಳೂರು(Chikkamagaluru) ತಾಲೂಕಿನ ಮಲ್ಲೇನಹಳ್ಳಿ ಸಮೀಪದ ರೆಸಾರ್ಟ್ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ (HD Kumaraswamy) 10 ರೂಂ ಬುಕ್ ಮಾಡಿ ಪಕ್ಷದ ನಾಯಕರ ಜೊತೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಷ್ಟಕ್ಕೂ ರೆಸಾರ್ಟ್ ರಾಜಕಾರಣ ಹಿಂದಿನ ಕಾರಣ ಕೆದಕುತ್ತಾ ಹೊರಟರೇ …
Read More »Yearly Archives: 2024
ವಸೇನೆ ಶಾಸಕರ ಅನರ್ಹತೆ ಕೇಸ್ ತೀರ್ಪು ಇಂದು; ‘ಮಹಾ’ ಸಂಚಲನ?
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಗರಿಗೆದರಿದೆ. ಪಕ್ಷದಲ್ಲಿನ ವಿಭಜನೆಯ ನಂತರ ಪರಸ್ಪರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಿವಸೇನೆ ಬಣಗಳು ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narvekar) ಇಂದು (ಜನವರಿ 10) ನಿರ್ಣಾಯಕ ತೀರ್ಪು ಪ್ರಕಟಿಸಲಿದ್ದಾರೆ. ಈ ನಿರ್ಧಾರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಮತ್ತು ಪ್ರತಿಸ್ಪರ್ಧಿ ಗುಂಪುಗಳ ಮೇಲೆ ಗಮನಾರ್ಹ ಪರಿಣಾಮಗಳನ್ನು ಬೀರುವ ಸಾಧ್ಯತೆ ಇದೆ (Maharashtra Politics). 2022ರ ಜೂನ್ನಲ್ಲಿ …
Read More »ಬಳ್ಳಾರಿ ಪಾಲಿಕೆ ಕೈ ತೆಕ್ಕೆಗೆ : ನೂತನ ಮೇಯರ್ ಆಗಿ ಶ್ವೇತಾ ಆಯ್ಕೆ
ಬಳ್ಳಾರಿ: ಬಳ್ಳಾರಿ ಪಾಲಿಕೆಯ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್ಗೆ ಒಲಿದಿದೆ. ನೂತನ ಮೇಯರ್ ಕಾಂಗ್ರೆಸ್ನ ಬಿ. ಶ್ವೇತಾ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಭರ್ಜರಿ ಗೆಲುವು ದೊರೆಯಿತು. ಬಿಜೆಪಿ ಅಭ್ಯರ್ಥಿ ಹನುಮಂತ ಗುಡಿಗಂಟಿಗೆ ಸೋಲು ಎದುರಾಯಿತು. ಹನುಮಂತ ಗುಡಿಗಂಟಿ ಬಳ್ಳಾರಿಯ ಒಂದನೇ ವಾರ್ಡಿನ ಬಿಜೆಪಿ ಸದಸ್ಯ ಆಗಿದ್ದರು. ಕಾಂಗ್ರೆಸ್ ನ ಬಿ. ಶ್ವೇತಾ ಗೆ 29 ಮತ ಪಡೆದರೆ ಹನುಮಂತ ಗುಡಿಗುಂಟಿಗೆ 12 ಮತ ಪಡೆದರು. ಬಿಜೆಪಿಯ ಒಬ್ಬ ಸದಸ್ಯೆ …
Read More »ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದ ಕಾಂಗ್ರೆಸ್ ಹೈಕಮಾಂಡ್
ಬೆಂಗಳೂರು: ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಕೆಲವು ಸಚಿವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಲವು ಕ್ಷೇತ್ರಗಳಲ್ಲಿ “ಗೆಲ್ಲಬಲ್ಲ” ಅಭ್ಯರ್ಥಿಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಹೇಳಲಾಗುತ್ತದೆ, ಹೀಗಾಗಿ ಕೆಹೆಚ್ ಮುನಿಯಪ್ಪ (ಏಳು ಬಾರಿ ಕೋಲಾರ ಸಂಸದ), ಕೆಎನ್ ರಾಜಣ್ಣ …
Read More »ಸಂಸದ ಭಗವಂತ ಖೂಬಾ ವಿರುದ್ದ ಸಿಡಿದೆದ್ದ ಶಾಸಕರು
ಬೆಂಗಳೂರು : ಸಂಸದ, ಕೇಂದ್ರ ಸಚಿವ ಭಗವಂತ ಖೂಬಾಗೆ (Bhagavant khooba) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (Lokasabha election 2024) ಟಿಕೆಟ್ ನೀಡಬಾರದು ಎಂದು ಬಿಜೆಪಿ (BJP) ಶಾಸಕರೇ ಒತ್ತಾಯಿಸಿರುವ ಘಟನೆ ಬುಧವಾರ ಬಿಜೆಪಿ ಸಭೆಯಲ್ಲಿ ನಡೆದಿದೆ. ಶಾಸಕ ಪ್ರಭು ಚವ್ಹಾಣ್ (Prabhu chavhan) ಅವರು, ಭಗವಂತ ಖೂಬಾ ವಿರುದ್ದ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಇದಕ್ಕೆ ಹಲವು ಶಾಸಕರು ಸಹಮತಿ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ …
Read More »ಲೋಕಸಭೆ ಚುನಾವಣೆಗೆ ಗ್ಯಾರಂಟಿಯೇ ಕಾಂಗ್ರೆಸ್ ಅಸ್ತ್ರ
ಬೆಂಗಳೂರು, (ಜನವರಿ 10): ಮುಂದಿನ ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್ (Congress Karnataka) ಈ ಬಾರಿ ಏನಿಲ್ಲವೆಂದರೂ 28 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಮುಖ್ಯವಾಗಿ ಜಾರಿಗೆ ತಂದಿರುವ ಐದು ಗ್ಯಾರಂಟಿಗಳನ್ನು(Guarantee schemes )ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ, ಜಿಲ್ಲಾ, ತಾಲೂಕು …
Read More »ಹೈಕಮಾಂಡ್ಗೆ ತಾಪತ್ರಯ; ಲೋಕಸಭೆ ಸ್ಪರ್ಧೆಗೆ ನಿರಾಸಕ್ತಿ
ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ಮೂರು ರೀತಿಯ ಗೊಂದಲ ಸೃಷ್ಟಿಯಾಗಿದೆ. ಸಮರ್ಥ ಅಭ್ಯರ್ಥಿ ಲಭ್ಯರಿಲ್ಲದ ಕಡೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವರು ಹಿಂದೇಟು ಹಾಕುತ್ತಿರುವುದು, ನಿಗಮ- ಮಂಡಳಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ನೈಜ ಕಾರ್ಯಕರ್ತರ ಕಡೆಗಣನೆ ಹಾಗೂ ಜಾತಿವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಪಟ್ಟುಗಳು ಹೈಕಮಾಂಡ್ಗೂ ಸವಾಲು ತಂದೊಡ್ಡಿದೆ. ಡಿಕೆಶಿಯವರನ್ನೇನು ಡಿಸ್ಟರ್ಬ್ ಮಾಡಲ್ಲವಲ್ಲ!: ಇನ್ನಷ್ಟು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಬೇರೆ, …
Read More »2023 ಇದುವರೆಗೆ ದಾಖಲಾದ ಅತ್ಯಂತ ಬಿಸಿಯಾದ ವರ್ಷವಾಗಿದೆ : ಹವಾಮಾನ ಸಂಸ್ಥೆ ಮಾಹಿತಿ
ನವದೆಹಲಿ : ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಅನೇಕ ಪ್ರಮುಖ ಬದಲಾವಣೆಗಳನ್ನು ಕಾಣುತ್ತಿದೆ. ಕಳೆದ ವರ್ಷ ದಾಖಲೆಯ ಅತ್ಯಂತ ಬೆಚ್ಚಗಿನ ವರ್ಷವಾಗಿದ್ದು, ಕೈಗಾರಿಕಾ ಪೂರ್ವ ಮಟ್ಟಕ್ಕೆ ಹೋಲಿಸಿದರೆ ಸರಾಸರಿ ಜಾಗತಿಕ ತಾಪಮಾನ ಏರಿಕೆ 1.5 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಈ ಮಾಹಿತಿಯನ್ನು ಯುರೋಪಿಯನ್ ಕ್ಲೈಮೇಟ್ ಏಜೆನ್ಸಿ ನೀಡಿದೆ. 2024 ರ ಜನವರಿ ಅಥವಾ ಫೆಬ್ರವರಿಯಲ್ಲಿ ಕೊನೆಗೊಳ್ಳುವ 12 ತಿಂಗಳ ಅವಧಿಯಲ್ಲಿ 1.5 ಡಿಗ್ರಿ ಸೆಲ್ಸಿಯಸ್ ಮಿತಿಯನ್ನು ದಾಟಬಹುದು ಎಂದು ಕೋಪರ್ನಿಕಸ್ ಹವಾಮಾನ …
Read More »ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ: ಸಿಎಂ
ಬೆಂಗಳೂರು: ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಲೇಖಕ ಡಾ.ಎಂ.ಎಸ್.ಮುತ್ತುರಾಜ್ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ …
Read More »ಕೇಂದ್ರಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ
ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ …
Read More »