ಬೆಂಗಳೂರು: ನಾನು ಕೇಂದ್ರ ಮಂತ್ರಿ (Union Minister) ಆಗುವ ಬಗ್ಗೆ ಚಿಂತೆ ಮಾಡಿಲ್ಲ. ಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ರಾಜ್ಯದ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವುದೇ ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ …
Read More »Yearly Archives: 2024
ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16) ಮೃತ ಬಾಲಕಿ. ದೀಕ್ಷಾ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈಕೆ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಸೋಮವಾರ ಲ್ಯಾಬ್ ಪರೀಕ್ಷೆಯಿತ್ತು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆ ನಂತರವಷ್ಟೇ ತಿಳಿದುಬರಬೇಕಿದೆ. ಪುತ್ತೂರು …
Read More »ಹಿಂದೂ ಮುಸ್ಲಿಂ ಅಣ್ಣ ತಮ್ಮಂದಿರ ತರಹ ಇರಬೇಕು ಎಂದರೆ ಎಲ್ಲೆಲ್ಲಿ ದೇವಾಲಯ ಕೆಡವಿ ಮಸೀದಿ ಕಟ್ಟಿದ್ದೀರೋ ಅದನ್ನು ಕಿತ್ತು ಬಿಸಾಕಿ.’ – ಈಶ್ವರಪ್ಪ
ಬೆಳಗಾವಿ: ರಾಮ ಹುಟ್ಟಿದ ಜಾಗದಲ್ಲಿ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ ಮಾಡಿ ಬಾಬರ್ ಮಸೀದಿ ಎನ್ನುತ್ತಿದ್ದರು. ಈಗ ವಿಶ್ವದಲ್ಲಿ ಮುಸ್ಲಿಮರಿಗೆ ತಾಕತ್ತಿದ್ದರೆ ದೇಗುಲ ಕೆಡವಿ ಮಸೀದಿ (Mosque) ಕಟ್ಟಲಿ ನೋಡೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ಬೆಳಗಾವಿಯ ಉಚ್ಚಗಾವಿಯಲ್ಲಿ ನಡೆದ ಹಿಂದೂ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದ ಅವರು, ಈಗ ಮುಸ್ಲಿಮರು ತಾಕತ್ತಿದ್ದರೆ ದೇಗುಲಗಳನ್ನು ಕೆಡವಿ ಮಸೀದಿ ಕಟ್ಟಲಿ ನೋಡೋಣ. ನಾನು ಹೀಗೆ ಯಾಕೆ …
Read More »ಐಟಿ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯ’: ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್
ಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಈಗ, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಅಡಿಯಲ್ಲಿ ನೀಡಲಾದ ವಿನಾಯಿತಿಗಳನ್ನು ಕೊನೆಗೊಳಿಸುವ ಮೂಲಕ ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳನ್ನು ಕಾಯಿದೆ1946ರ ಅಡಿ ತನ್ನ ವ್ಯಾಪ್ತಿಗೆ ತರಲು ರಾಜ್ಯ ಕಾರ್ಮಿಕ ಇಲಾಖೆ …
Read More »ಸರ್ಕಾರಿ ಬಸ್‍ಗಳ ನಡುವೆ ಮುಖಾಮುಖಿ ಡಿಕ್ಕಿ
ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು …
Read More »ಹಿಂದುಳಿದ ಸಮುದಾಯಗಳ ಮಠಾಧೀಶರಿಂದ ಸಿಎಂ ಭೇಟಿ, ಜಾತಿಗಣತಿ ವರದಿ ಸ್ವೀಕರಿಸುವಂತೆ ಆಗ್ರಹ
ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರು: ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಉಪ್ಪಾರ ಸಮುದಾಯದ ಭಗೀರಥ ಪೀಠದ ಡಾ. ಪುರುಷೋತ್ತಮನಾಂದಪುರಿ ಸ್ವಾಮೀಜಿ, ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ …
Read More »ಜಾಗತಿಕ ಮಾರುಕಟ್ಟೆಗೆ ನಂದಿನಿ ಬ್ರಾಂಡ್ ವಿಸ್ತರಣೆ: ಕೆಎಂಎಫ್ ಎಂಡಿ ಎಂಕೆ ಜಗದೀಶ್
ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ… ಮಣಿಪಾಲ: ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್)ದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಕೆ ಜಗದೀಶ್ ಅವರು ಶನಿವಾರ ಹೇಳಿದ್ದಾರೆ. ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ(AAPI)ದ ವತಿಯಿಂದ ಮಣಿಪಾಲದ …
Read More »ಕೇಂದ್ರದ ನೆರವಿನ ಕುರಿತು ಶ್ವೇತಪತ್ರ ಬಿಡುಗಡೆ ಮಾಡಿ:ಸಚಿವ ಪ್ರಹ್ಲಾದ್ ಜೋಶಿ ಸೂಚನೆ
ಹುಬ್ಬಳ್ಳಿ: ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದಿರುವ ಅನುದಾನ ಮತ್ತು ಈಗ ಕಾಂಗ್ರೆಸ್ ಸರ್ಕಾರ ಪಡೆದಿರುವ ಹಣದ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ಟಿ ಜಾರಿಯಾದ ನಂತರ ರಾಜ್ಯಕ್ಕೆ ಕೇಂದ್ರದ ನೆರವು ಹೆಚ್ಚಿದೆ ಎಂದಿದ್ದಾರೆ. ‘ಹಿಂದೆ, ಕೇಂದ್ರವು ರಾಜ್ಯಗಳಿಗೆ ಬರ ಅಥವಾ ಇತರ ವಿಪತ್ತುಗಳಿಗೆ ಪರಿಹಾರವನ್ನು ಘೋಷಿಸುತ್ತಿತ್ತು. ಈಗ, …
Read More »ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್
ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಧಾರವಾಡ: ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ …
Read More »ಬೆಳಗಾವಿಯಲ್ಲಿ ನೈತಿಕ ಪೊಲೀಸ್ ಗಿರಿ: ಸೋದರ-ಸೋದರಿ ಮೇಲೆ ಅನ್ಯಕೋಮಿನವರಿಂದ ಹಲ್ಲೆ, 7 ಮಂದಿ ವಶಕ್ಕೆ
ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. ಬೆಳಗಾವಿ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದ ಸೋದರ-ಸೋದರಿಯನ್ನು ಪ್ರೇಮಿಗಳೆಂದು ಭಾವಿಸಿ ಅನ್ಯಕೋಮಿನ ಯುವಕರು ನೈತಿಕ ಪೊಲೀಸಗಿರಿ ನಡೆಸಿರುವ ಘಟನೆ ಬೆಳಗಾವಿಯ ಕೋಟೆ ಕರೆ ಆವರಣದಲ್ಲಿ ನಡೆದಿದೆ. : ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, …
Read More »