ಮೂಡಲಗಿ: ಬಾಲ್ಯದಲ್ಲಿ ಶಿಕ್ಷಣ ಪಡೆಯಲು ಅನುಕೂಲವಿಲ್ಲದೆ ಎಮ್ಮೆ ಕಾಯುತ್ತಿದ್ದ ಬಾಲಕ, ಇಂದು ರೇಷ್ಮೆ ತಂತ್ರಜ್ಞಾನ ರಂಗ ದಲ್ಲಿ ಮಿಂಚಿದ್ದಾರೆ. ರೇಷ್ಮೆ ತಂತ್ರಜ್ಞಾನ ಮತ್ತು ಉದ್ದಿಮೆ ಬೆಳವಣಿಗೆಗೆ ಅವರು ಕೈಗೊಂಡ ವಿವಿಧ ಸಂಶೋಧನೆಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿವೆ. ಇದು ಇಲ್ಲಿನ ತಮ್ಮಣ್ಣ ಸೋನವಾಲಕರ (ಟಿ.ಎನ್.ಸೋನವಾಲಕರ) ಅವರ ಯಶೋಗಾಥೆ. ವಯಸ್ಸು 91. ಆದರೆ, ರೇಷ್ಮೆ ತಂತ್ರಜ್ಞಾನ ರಂಗದ ಬೆಳವಣಿಗೆಗೆ ಅವರ ಮನಸ್ಸು ಇಂದಿಗೂ ತುಡಿಯುತ್ತದೆ. ಭಾರತದಲ್ಲಿ ಗುಣಮಟ್ಟದ ರೇಷ್ಮೆ …
Read More »Yearly Archives: 2024
ಕುಗ್ರಾಮದ ಮಕ್ಕಳ ವಿಮಾನ ಏರುವ ಕನಸನ್ನುನನಸು ಮಾಡಿದ ಶಾಲೆಯ ಶಿಕ್ಷಕ
ಬೆಳಗಾವಿ: ಕುಗ್ರಾಮದ ಮಕ್ಕಳ ವಿಮಾನ ಏರುವ ಕನಸನ್ನು ಬೆಳಗಾವಿ ತಾಲ್ಲೂಕು ಸೋನಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ ದೇಯಣ್ಣವರ ಅವರು ನನಸು ಮಾಡಿದರು. ಶಾಲೆಗೆ ಪ್ರತಿದಿನವೂ ತಪ್ಪದೇ ಬರುವುದಾಗಿ ಹೇಳಿ ಮಾತು ಉಳಿಸಿಕೊಂಡ ಮಕ್ಕಳಿಗೆ ಅವರು ಬೆಳಗಾವಿಯಿಂದ ಹೈದರಾಬಾದ್‌ವರೆಗೆ ವಿಮಾನದ ಪ್ರಯಾಣದ ಕೊಡುಗೆ ನೀಡಿದರು. ಪ್ರಕಾಶ ದೇಯಣ್ಣವರ ಅವರು ತಮ್ಮ ನಾಲ್ಕು ತಿಂಗಳ ವೇತನದ ಒಟ್ಟು ₹ 2.10 ಲಕ್ಷ ಹಣವನ್ನು ಅವರು ವಿಮಾನ ಪ್ರವಾಸಕ್ಕೆ …
Read More »ಮರಾಠ ರೆಜಿಮೆಂಟ್‌ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ
ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಮರಾಠ ರೆಜಿಮೆಂಟ್ ನಲ್ಲಿ ಸೇನಾ ನೇಮಕಾತಿ ಮುಕ್ತ ರಾಲಿ ನಡೆಯುತ್ತಿದ್ದು, ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಯುವಕರು ಭಾಗಿಯಾಗಿದ್ದಾರೆ. ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದ ಅರ್ಜಿ ಹಾಕಿದ್ದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಏಕಾಏಕಿ ಯುವಕರು ಸೇರಿದ್ದರಿಂದ ನೂಕು ನುಗ್ಗಲು, ತಳ್ಳಾಟ ನೂಕಾಟ ನಡೆದಿದೆ. ಈ ವೇಳೆ ಇಬ್ಬರು ಯುವಕರಿಗೆ ಗಾಯವಾಗಿದೆ. ನೂಕು ನುಗ್ಗಲು ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಸೈನಿಕರು …
Read More »ಹಿರಿಯ ನಟ ಡೆಲ್ಲಿ ಗಣೇಶ್ ಇನ್ನಿಲ್ಲ
ಚೆನ್ನೈ: ಹಿರಿಯ ತಮಿಳು ನಟ ಡೆಲ್ಲಿ ಗಣೇಶ್ (Delhi Ganesh) ಅವರು ಶನಿವಾರ (ನ.09) ಚೆನ್ನೈನಲ್ಲಿ ಅಸುನೀಗಿದರು. 80 ವರ್ಷದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡೆಲ್ಲಿ ಗಣೇಶ್ ಅವರ ಸಾವಿನ ಬಗ್ಗೆ ಅವರ ಪುತ್ರ ಮಹದೇವನ್ ಸಾಮಾಜಿಕ ಜಾಲತಾಣದಲ್ಲಿ ಖಚಿತ ಪಡಿಸಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ದಶಕದ ಕಾಲ ಕೆಲಸ ಮಾಡಿದ್ದ ಡೆಲ್ಲಿ ಗಣೇಶ್ ಅವರು ಬಳಿಕ ಚಿತ್ರರಂಗದಲ್ಲಿ ಮಿಂಚಿದ್ದರು. ಡೆಲ್ಲಿ ಗಣೇಶ್ ಅವರ ಅಂತಿಮ ಕ್ರಿಯೆಯು …
Read More »ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದ್ದು, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು. ಜಿಂದಾಲ್ ವಿದ್ಯಾನಗರದಲ್ಲಿ ಭಾನುವಾರ (ನ.10) ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳು ಗೆದ್ದಾಗ ಸಿಎಂ ನಿರಾಳವಾಗಿದ್ದರು. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಹಗರಣಗಳನ್ನು ಬಿಜೆಪಿ ಒಂದೊಂದು ಬಯಲಿಗೆ ಎಳೆಯುತ್ತಿದ್ದಂತೆ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ ಎಂದು ವಾಗ್ದಳಿ ನಡೆಸಿದರು. ರಾಜ್ಯದಲ್ಲಿ …
Read More »Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ. ಚಂದ್ರಚೂಡ್(Dhananjaya Yeshwant Chandrachud) ಅವರು ಶುಕ್ರವಾರ(ನ8) ಸುಪ್ರೀಂ ಕೋರ್ಟ್‌ಗೆ ಭಾವನಾತ್ಮಕ ವಿದಾಯ ಹೇಳಿದರು. ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಡಿ.ವೈ. ಚಂದ್ರಚೂಡ್ ಅವರು ತಮ್ಮ ನ್ಯಾಯಾಂಗ ಪ್ರಯಾಣದ ವೈಯಕ್ತಿಕ ಘಟನೆಗಳನ್ನು ಹಂಚಿಕೊಂಡರು. ನ್ಯಾಯಾಂಗ ಸುಧಾರಣೆ ಪಾರದರ್ಶಕತೆ ಮತ್ತು ನ್ಯಾಯಕ್ಕೆ ಅಚಲವಾದ ಬದ್ಧತೆಯೊಂದಿಗೆ ಸಂಯೋಜಿಸಿದ್ದೇನೆ ಎಂದು ತಮ್ಮ ಎರಡು ವರ್ಷಗಳ ಸಿಜೆಐ ಅಧಿಕಾರಾವಧಿಯ ಬಗ್ಗೆ ಹೇಳಿಕೊಂಡರು. 64 ರ ಹರೆಯದ ಸಿಜೆಐ …
Read More »ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …
Read More »ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …
Read More »ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಉದ್ಯಮಿಯೊಬ್ಬರ ಕುಟುಂಬವೊಂದು ತಮ್ಮ ಬದುಕಿನಲ್ಲಿ ಅದೃಷ್ಟ ತಂದು ಕೊಟ್ಟ ಕಾರಿಗೆ ಅದ್ಧೂರಿ ಸಮಾಧಿ ಕಾರ್ಯಕ್ರಮವನ್ನು ನಡೆಸಿದ್ದು ಸದ್ಯ ಭಾರೀ ಸುದ್ದಿಯಾಗುತ್ತಿದೆ. ಲಾಠಿ ತಾಲೂಕಿನ ಪಾದರಶಿಂಗ ಗ್ರಾಮದಲ್ಲಿ ಗುರುವಾರ ಸಂಜಯ ಪೋಲಾರ್ ಮತ್ತು ಕುಟುಂಬ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧರ್ಮಗುರುಗಳು, ಆಧ್ಯಾತ್ಮಿಕ ಮುಖಂಡರು ಸೇರಿದಂತೆ ಸುಮಾರು 1,500 ಜನರು ಭಾಗವಹಿಸಿದ್ದರು ಎನ್ನುವುದು ಗಮನಾರ್ಹ ಸಂಗತಿ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಚಿತ್ರವೂ , ವಿಶೇಷವೂ ಎನಿಸುವ ಸಮಾಧಿ …
Read More »ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
ಮಲ್ಪೆ: ಪ್ರವಾಸಿಗರ ಆಕರ್ಷಣೆಯಲ್ಲೊಂದಾಗಿ ರಾಜ್ಯದಲ್ಲೇ ಪ್ರಥಮ ಎಂಬಂತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) 2021ರಲ್ಲಿ ಮಲ್ಪೆ ಬೀಚ್‌ನಲ್ಲಿ ಪ್ರಾರಂಭಗೊಂಡಿದ್ದು, ಈ ಬಾರಿ ನ. 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದೆ. ಇದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆಕುತ್ತಿದೆ. ಸಂಜೆ ಹೊತ್ತಿಗೆ ತಣ್ಣಗಿನ ಗಾಳಿಯನ್ನು ಆಸ್ವಾದಿಸಲು ಸಮುದ್ರ ತೀರದತ್ತ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಮಲ್ಪೆ ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ ಈ ಸಂಖ್ಯೆ 10 ಸಾವಿರವನ್ನು ದಾಟುತ್ತಿದೆ. ಸುಮಾರು …
Read More »