ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ರಾಜ್ಯದಲ್ಲಿ ಜನರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಊರು ಬಿಟ್ಟು ಹೋಗೋದು ಒಂದೆಡೆಯಾದ್ರೆ ಕೆಲವು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ,ಹೀಗಾಗಿ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೇ ಅಂಕುಶ ಹೇರಲು ಮುಂದಾಗಿದೆ,ಆದ್ರೆ ಇಲ್ಲೆದರ ನಡುವೆ ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ಹೀಗೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋ ಈತನ ಹೆಸರು ಮಾಬಲಿ …
Read More »Monthly Archives: ಜನವರಿ 2025
ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
ಬಿಜೆಪಿಯಿಂದ ಗಾಂಧಿ ಅವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಮಹಾತ್ಮ ಗಾಂಧಿ ಅವರನ್ನು ಒಪ್ಪದ ಬಿಜೆಪಿ ಪ್ರತಿಭಟಿಸಲು ಅವರ ಹೆಸರು, ಪ್ರತಿಮೆಯನ್ನೇ ಆಶ್ರಯಿಸುತ್ತದೆ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರ ಕೊಡುಗೆ ಏನಿಲ್ಲ ಬೆಂಗಳೂರು : “ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು …
Read More »ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಯಾರು ಸ್ಪರ್ಧಿಸಬೇಕೆಂದು ದೆಹಲಿಯಲ್ಲಿ ನಿರ್ಣಯಿಸುತ್ತೇವೆ: ಬಸನಗೌಡ ಯತ್ನಾಳ್
ಬೆಂಗಳೂರು: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಾತಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾದ ಉತ್ತರ ನೀಡಲಿಲ್ಲ. ಸಂಸತ್ತಿನ ಅಧಿವೇಶನ ಜಾರಿಯಲ್ಲಿರುವಾಗಲೇ ತಾವೆಲ್ಲ ದೆಹಲಿಗೆ ಹೋಗಿ ರಾಜ್ಯದ ಬಿಜೆಪಿ ಸಂಸದರನ್ನು ಭೇಟಿಯಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂಬ ಒಂದು ನಿರ್ಣಯವನ್ನು ತೆಗೆದುಕೊಂಡು ಅದನ್ನು ವರಿಷ್ಠರ ಹಮನಕ್ಕೆ ತರುತ್ತೇವೆ ಅಂತ ಹೇಳಿದ ಯತ್ನಾಳ್, …
Read More »ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್
ಧಾರವಾಡ, ಜನವರಿ 31: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ (Karnataka University) ಬಿಎ ಪದವಿ ಪುಸ್ತಕದಲ್ಲಿನ ಪಠ್ಯ ಕೈಬಿಟ್ಟರಷ್ಟೇ ಸಾಲದು, ಸಂಬಂಧಿಸಿದವರ ಮೇಲೆ ಕ್ರಮ ಆಗಬೇಕು. ಆ ಲೇಖಕನಿಗೆ ಗುಂಡು ಹೊಡೆಯಬೇಕು. ಭಾರತ ಮಾತೆಯ ಬಗ್ಗೆ ಅಪಮಾನ ಮಾಡಿದವರಿಗೆ ಕ್ಷಮೆ ಇಲ್ಲ. ಅಕ್ಷಮ್ಯ ಅಪರಾಧ ಆಗಿದೆ. ಹೀಗಾಗಿ ಕ್ರಮ ಆಗಲೇಬೇಕು. ಇಲ್ಲದೇ ಹೋದಲ್ಲಿ ಹೋರಾಟ ಮುಂದುವರೆಯುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮಾಡಿದ್ದಾರೆ. ಕವಿವಿಯಲ್ಲಿ ನಡೆದ ಪುಷ್ಪ ನಮನ ಕಾರ್ಯಕ್ರಮ …
Read More »ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಬೆಂಗಳೂರು/ರಾಯಚೂರು/ಬೆಳಗಾವಿ: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ …
Read More »ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತ
ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ …
Read More »ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಮಂಗಳಗೌರಿ ಮದುವೆ’ ಧಾರಾವಾಹಿ ನಿರ್ದೇಶಕ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ ಎಂದು ಕಿರುತೆರೆಯ ಪ್ರಖ್ಯಾತ ನಿರ್ದೇಶಕ ಕೆ.ಎಸ್.ರಾಮ್ ಜೀ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಮಾಚಾರಿ’ ಧಾರಾವಾಹಿಯ ನಿರ್ದೇಶಕ ಕೆ.ಎಸ್.ರಾಮ್ ಜೀ ನೀಡಿರುವ ದೂರಿನನ್ವಯ ಬೆಂಗಳೂರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಜನವರಿ 24ರಂದು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿರುವ ಕಿಡಿಗೇಡಿಗಳು, …
Read More »ಹಾವೇರಿಯ ಮಂತ್ರೋಡಿ ಕ್ಷೇತ್ರದಲ್ಲಿ ನಾರಿಶಕ್ತಿ
ಹಾವೇರಿ: ಇಂದು ಮಹಿಳೆ ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮಾನ ಸಾಧನೆ ತೋರುತ್ತಿದ್ದಾಳೆ. ಪುರುಷರಿಗೇ ಮೀಸಲಾಗಿರುವ ಕ್ಷೇತ್ರಗಳಲ್ಲೂ ಹೆಣ್ಣುಮಕ್ಕಳು ಸೈ ಎನಿಸಿಕೊಂಡಿದ್ದಾರೆ. ಇದಕ್ಕೊಂದು ಹೊಸ ನಿದರ್ಶನ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಂತ್ರೋಡಿ ಕ್ಷೇತ್ರ.ಶತಮಾನದ ಹಿಂದೆ ಪುರುಷರಿಗೆ ನೀಡಿದಷ್ಟೇ ಪ್ರಾಧಾನ್ಯತೆಯನ್ನು ಮಹಿಳೆಯರಿಗೆ ಅಂದಿನ ರೇವಣಸಿದ್ದೇಶ್ವರ ಶ್ರೀಗಳು ನೀಡಿದ್ದಾರೆ. ಮಠದಲ್ಲಿ ಪ್ರತೀವರ್ಷ ಅಮವಾಸ್ಯೆ ದಿನ ಶಿವನ ರಥೋತ್ಸವ ನಡೆದರೆ ಮರುದಿನ ಪಾರ್ವತಿಯ ರಥೋತ್ಸವ ನಡೆಯುತ್ತದೆ. ಮೊದಲ ದಿನ ನಡೆಯುವ ರೇವಣಸಿದ್ದೇಶ್ವರ ಮೂರ್ತಿ ಪ್ರತಿಷ್ಠಾಪಿಸಿ …
Read More »ಮಹಾದೇವಿ ಅವರ ಮೃತದೇಹ ಆಂಬ್ಯುಲೆನ್ಸ್ ಮೂಲಕ ನೂಲ್ವಿ ಗ್ರಾಮಕ್ಕೆ ಆಗಮಸಿದ್ದು, ತಂದೆ, ಸಹೋದರರು ಸೇರಿದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಹುಬ್ಬಳ್ಳಿ: ಪ್ರಯಾಗ್ರಾಜ್ನಲ್ಲಿ ಕಾಲ್ತುಳಿತಕ್ಕೊಳಗಾಗಿ ಸಾವನ್ನಪ್ಪಿದ ಹುಬ್ಬಳ್ಳಿ ತಾಲೂಕಿನ ನೂಲ್ವಿ ಮಹಾದೇವಿ ಹನುಮಂತಪ್ಪ ಬಾವನೂರ್ (ಸಂಕನಗೌಡರ್) ಮೃತದೇಹಕ್ಕೆ ಗುರುವಾರ ತಡರಾತ್ರಿ ವೀರಶೈವ ಲಿಂಗಾಯತ ಸಮುದಾಯದ ವಿಧಿವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಗುರುವಾರ ರಾತ್ರಿ 10.45ರ ಸುಮಾರಿಗೆ ಬೆಳಗಾವಿಯಿಂದ ನೂಲ್ವಿ ಗ್ರಾಮಕ್ಕೆ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ತರಲಾಯಿತು. ಮೃತದೇಹ ತರುತ್ತಿರುವ ಸುದ್ದಿ ತಿಳಿದ ಗ್ರಾಮಸ್ಥರು ಮಹಾದೇವಿ ಅವರ ಮನೆ ಮುಂದೆ ಜಮಾಯಿಸಿದ್ದರು. ಮಹಾದೇವಿ ತಂದೆ ಹನುಮಂತ ಗೌಡ, ಸಹೋದರರಾದ ಬಸವನ ಗೌಡ, ಮಹಾದೇವ ಗೌಡ …
Read More »ಮೈಕ್ರೋ ಫೈನಾನ್ಸ್ ಕಿರುಕುಳ: 2-3 ದಿನಗಳಲ್ಲಿ ಸುಗ್ರೀವಾಜ್ಞೆ
ಬೆಂಗಳೂರು: “ಇನ್ನೆರಡು ಮೂರು ದಿನಗಳಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿಂದು ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ವಿಳಂಬವಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ. ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ …
Read More »