ಬೆಂಗಳೂರು: ನಾವೆಲ್ಲರೂ ನಮ್ಮ ಇಲಾಖೆಯ ಕಾರ್ಯವೈಖರಿಯ ರಿಪೋರ್ಟ್ ಕಾರ್ಡ್ ಅನ್ನು ಹೈಕಮಾಂಡ್ಗೆ ನೀಡಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಹೈಕಮಾಂಡ್ ನಮ್ಮ ಬಳಿ ರಿಪೋರ್ಟ್ ಕೇಳಿತ್ತು, ಕೊಟ್ಟಿದ್ದೇವೆ. ಇಲಾಖೆಯ ಕೆಲಸ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕೇಳಿದ್ದರು. ಸಚಿವರೆಲ್ಲರೂ ಅವರವರ ಕಾರ್ಯವೈಖರಿ ಬಗ್ಗೆ ವರದಿ ನೀಡಿದ್ದಾರೆ ಎಂದರು. ಸಚಿವ ಸಂಪುಟ ಪುನರ್ರಚನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಬಳಿಯೇ ನೀವು ಕೇಳಬೇಕು. …
Read More »Daily Archives: ಜನವರಿ 2, 2025
ಐಶ್ವರ್ಯ ಗೌಡ ಮನೆ ಜಾಲಾಡಿದ ಪೊಲೀಸರು
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿಯ ಸೋಗಿನಲ್ಲಿ ಮಹಿಳೆಯೊಬ್ಬರಿಗೆ 3.25 ಕೋಟಿ ರೂ ವಂಚಿಸಿರುವ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಆರ್.ಆರ್.ನಗರ ಪೊಲೀಸರು, ಸರ್ಚ್ ವಾರೆಂಟ್ ಪಡೆದು ಬುಧವಾರ ಆರೋಪಿ ಐಶ್ವರ್ಯ ಗೌಡ ಮನೆಗೆ ತೆರಳಿ ಪರಿಶೀಲನೆ ನಡೆಸಿದರು. 3.25 ಕೋಟಿ ರೂ. ಹಾಗೂ 430 ಗ್ರಾಂ ಚಿನ್ನಾಭರಣ ವಂಚಿಸಿರುವುದಾಗಿ ಆರೋಪಿಸಿ ಶಿಲ್ಪಾ ಗೌಡ ಎಂಬವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ನ್ಯಾಯಾಲಯದಿಂದ ಸರ್ಚ್ ವಾರೆಂಟ್ …
Read More »ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಯತ್ನಾಳ್
ಬೆಂಗಳೂರು: ಬಿಜೆಪಿಯಿಂದ ನನ್ನನ್ನು ಯಾಕೆ ಉಚ್ಛಾಟನೆ ಮಾಡುತ್ತಾರೆ. ನನ್ನನ್ನು ಉಚ್ಛಾಟಿಸಲಾಗುತ್ತದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಜೊತೆಗೂ ಸಹ ನನಗೆ ಅಡ್ಜಸ್ಟ್ಮೆಂಟ್ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಬಿಜೆಪಿಯ ಮಾಜಿ ಶಾಸಕರಾದ ಎಸ್. ಎ ರಾಮದಾಸ್ ಹಾಗೂ ಎಲ್. ನಾಗೇಂದ್ರ ಲೋಕಾಯುಕ್ತ ವಿಚಾರಣೆಗೆ ಹಾಜರು
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಹಂಚಿಕೆ ವಿಚಾರ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬಿಜೆಪಿಯ ಮಾಜಿ ಶಾಸಕರಾದ ಎಸ್. ಎ ರಾಮದಾಸ್ ಹಾಗೂ ಎಲ್. ನಾಗೇಂದ್ರ ಅವರನ್ನ ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ರಾಮದಾಸ್ 5 …
Read More »ಹಾವೇರಿಯಲ್ಲಿ ಗಾಡಾ ಸ್ಪರ್ಧೆ
ಹಾವೇರಿ : ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆಗಳು ಎಂದು ಹೋರಿ ಬೆದರಿಸುವ ಸ್ಪರ್ಧೆ, ಗಾಡಾ ಓಡಿಸುವ ಸ್ಪರ್ಧೆ ಮತ್ತು ಟಗರು ಕಾಳಗ. ಸುಗ್ಗಿ ಮುಗಿಯುತ್ತಿದ್ದಂತೆ ರೈತರು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಈ ರೀತಿಯ ಸ್ಪರ್ಧೆ ಆಯೋಜಿಸುತ್ತವೆ. ಹೊಸವರ್ಷ ಮತ್ತು ಸಂಕ್ರಾಂತಿ ಅಂಗವಾಗಿ ಹಾವೇರಿಯಲ್ಲಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ ಸಾವನ್ನಪ್ಪಿದ ಕೊಬ್ಬರಿ ಹೋರಿಗಳ ಸವಿನೆನಪಿಗಾಗಿ ಗಾಡಾ ಸ್ಫರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಹಾವೇರಿ, ಬೆಳಗಾವಿ, ಮಹಾರಾಷ್ಟ್ರ …
Read More »ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ
ಹುಬ್ಬಳ್ಳಿ: ಕ್ಷುಲ್ಲಕ ವಿಚಾರವಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಅಯೋಧ್ಯೆ ನಗರದ ವಾಟರ್ಟ್ಯಾಂಕ್ ಬಳಿ ನಡೆದಿದೆ. ಅಂಬೇಡ್ಕರ್ ಕಾಲೋನಿ ನಿವಾಸಿ ಮಾರುತಿ ಚಾಕು ಇರಿತಕ್ಕೊಳಗಾದ ಯುವಕ. ಬುಧವಾರ ಸಂಜೆ ವಾಟರ್ಟ್ಯಾಂಕ್ ಬಳಿ ನಿಂತಾಗ ಮೂರ್ನಾಲ್ಕು ಯುವಕರು ಬಂದು ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು ಇರಿಯುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾರುತಿಯ ಬೆನ್ನು ಹಾಗೂ ಪಕ್ಕೆಲುಬಿಗೆ ಚಾಕು ಇರಿಯಲಾಗಿದ್ದು, ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಕಾನೂನು ಸುವ್ಯವಸ್ಥೆ …
Read More »ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ಚಾಕು ಇರಿತ ಪ್ರಕರಣಏಳು ಜನ ಆರೋಪಿಗಳ ಬಂಧನ
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನ ಆರೋಪಿಗಳನ್ನ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ಹೇಳಿದರು. ಇಲ್ಲಿನ ಹಳೇಹುಬ್ಬಳ್ಳಿ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ನಗರದಲ್ಲಿ ಮಾರುತಿ ನಾರಾಯಣಪುರ ಎಂಬಾತನ ಮೇಲೆ ಯುವಕರ ಗುಂಪೊಂದು ಅಟ್ಟಾಡಿಸಿ ಚಾಕುವಿನಿಂದ ಬೆನ್ನಿಗೆ ಇರಿದಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಾರುತಿಯನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ …
Read More »ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ್ ಅವರು ಇಂದು …
Read More »ಗಂಡನ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಕೊಲೆ
ಚಿಕ್ಕೋಡಿ (ಬೆಳಗಾವಿ) : ಮದ್ಯಪಾನ ಸೇವನೆಗೆ ಹೆಂಡತಿಗೆ ಆಗಾಗ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ಡಿಸೆಂಬರ್ 10 ರಂದು ಈ ಘಟನೆ ನಡೆದಿದೆ. ಆರೋಪಿಯಾದ ಸಾವಿತ್ರಿ ಇಟ್ನಾಳೆ(30)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು …
Read More »ಟಿಕೆಟ್ ದರವನ್ನು 15%ರಷ್ಟು ಹೆಚ್ಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣಿಕರಿಗೆ ಸರ್ಕಾರ ದರ ಹೆಚ್ಚಳದ ಬರೆ ಹಾಕಿದೆ. ಟಿಕೆಟ್ ದರವನ್ನು 15%ರಷ್ಟು ಹೆಚ್ಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಶೇ.15ರಷ್ಟು …
Read More »