Breaking News

Daily Archives: ಜನವರಿ 3, 2025

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಸತೀಶ್ ಜಾರಕಿಹೊಳಿ

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ …

Read More »

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ

ಸಿಎಂ ಜೊತೆ ಊಟ ಇದೇ ಮೊದಲೇನಲ್ಲ ಎಂದ ಸತೀಶ್ ಜಾರಕಿಹೊಳಿ: ಇದೇ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್‌ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ದು ಇದೇ ಮೊದಲೇನಲ್ಲ. ಕಳೆದ ಇಪ್ಪತ್ತು ತಿಂಗಳಲ್ಲಿ ಹತ್ತಾರು ಬಾರಿ ನಾವು ಸೇರಿದ್ದೇವೆ ಎಂದು ಹೇಳಿದ್ದರು. ಕುವೆಂಪು ನಗರದ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ನಾವು ಅವರ ಮನೆಗೆ ಹೋಗುತ್ತೇವೆ. ಅವರು ನಮ್ಮ ಮನೆಗೆ ಬರುತ್ತಾರೆ. ಸಿಎಂ …

Read More »

‘ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು:C.M.

ಬೆಂಗಳೂರು: ”ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.‌ ವಿಧಾನಸೌಧದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ”ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆಗೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು, ಅವೆಲ್ಲಾ ಸುಳ್ಳು. ಯಾವ ಬದಲಾವಣೆಯೂ ಇಲ್ಲ. ಯಾವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ”ಊಟಕ್ಕೆ ಸೇರಿದರೆ ಅದನ್ನೇ ಸಭೆ ನಡೆಸಿದ್ದಾರೆ ಎಂದು ಊಹೆ ಮಾಡಿದರೆ ಏನು …

Read More »

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಣ ರಾಜಕೀಯ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ರಾಜ್ಯದ ನಾಯಕರೊಂದಿಗೆ ಸುದೀರ್ಘ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಬಣ ರಾಜಕೀಯವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ನಾಯಕರುಗಳ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ್ದ ಜೆ.ಪಿ.ನಡ್ಡಾ, ಬಿಜೆಪಿಯ ಬಣ ರಾಜಕೀಯಕ್ಕೆ ಅಂತ್ಯ ಹಾಡಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಹುಡುಕಲು ಏನೆಲ್ಲಾ ಮಾಡಬೇಕು, ಪಕ್ಷದ ಮಟ್ಟದಲ್ಲಿ ಯಾವ ತೀರ್ಮಾನಗಳು ಆಗಬೇಕು, ಯಾವ ರೀತಿ ಪಕ್ಷದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬೆಲ್ಲ ವಿಚಾರವಾಗಿ ರಾಜ್ಯ ಬಿಜೆಪಿಯ ಪ್ರಮುಖ ಮುಖಂಡರ ಜತೆ ಸುದೀರ್ಘ …

Read More »

ಸರ್ಕಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಹತ್ತು ಹಲವು ಯೋಜನೆ

ಹಾವೇರಿ : ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ನಿರ್ಮಿಸಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಅಕ್ಕ ಕೆಫೆಯನ್ನು ಲಿಂಗತ್ವ ಅಲ್ಪಸಂಖ್ಯಾತರೇ ನಿರ್ವಹಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತೃತ್ವದಲ್ಲಿ ನಡೆಯುವ ಅಕ್ಕ ಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ. ಹಾವೇರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಮಾರು 15 ಲಕ್ಷ ರೂಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ಇದರ …

Read More »

KLE ಕ್ಯಾನ್ಸರ್ ಆಸ್ಪತ್ರೆಗೆ 8 ಕೋಟಿ ರೂ. ದೇಣಿಗೆ

ಬೆಳಗಾವಿ : ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ‌ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ವೈದ್ಯರೊಬ್ಬರು 8 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಹೆಸರನ್ನೇ ಇಟ್ಟಿರುವ ಆ ಆಸ್ಪತ್ರೆಯನ್ನು  ಲೋಕಾರ್ಪಣೆ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಸಂಪತ್​ ಕುಮಾರ್​. ಸದಾ ತಾಯ್ನಾಡಿಗೆ ಏನಾದರು‌ ಮಾಡಬೇಕು ಎನ್ನುವ ಅವರಲ್ಲಿನ ತುಡಿತ ಈಗ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ …

Read More »

ಕಾಮಗಾರಿ ನಡೆಯುತ್ತಿದ್ದ ಜಾಗದ ಮೋರಿಯೇ ಇತನ ಬಾಳಿಗೆ ಕಂಟಕ

ಬೆಂಗಳೂರು, (ಜನವರಿ 03): ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ನಿನ್ನೆ ರಾತ್ರಿ 9.5ರ ಸುಮಾರು ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ‌ ಹರೀಶ್, ರಾತ್ರಿ ಊಟ ತೆಗೆದುಕೊಂಡು ತನ್ನ ಮನೆಗೆ ಹೊರಟಿದ್ದ. ಈ ವೇಳೆ ರಸ್ತೆಯ ಪಕ್ಕದಲ್ಲಿನ ತಡೆಗೋಡೆ ಇಲ್ಲದ ಜಾಗಕ್ಕೆ ಹೋಗಿ ಮೂರ್ತ ವಿಸರ್ಜನೆಗೆ ಹೋಗಿದ್ದಾನೆ ಅಷ್ಟೇ ಆಯತಪ್ಪಿ ಚರಂಡಿಯಲ್ಲಿ ಬಿದ್ದಿದ್ದಾನೆ. ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು …

Read More »

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾಣ ಕಳೆದುಕೊಂಡ ಯುವಕ!

ಬೆಂಗಳೂರು, : ತಾನು ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಸತೀಶ್ ಕುಮಾರ್(25) ಎಂದು ಗುರುತಿಸಲಾಗಿದ್ದು, ಈ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂದೂರಿನ ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್, ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಸಹ ಸತೀಶ್​ನ ಲವ್ ಪ್ರಪೋಸ್​ಗೆ ಒಪ್ಪಿಗೆ ನೀಡಿದ್ದಳು. ಹೀಗೆ ಪರಸ್ಪರ ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಆದ್ರೆ, ಈ …

Read More »

ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ

ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್​​ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …

Read More »

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್​ಪಿ ಸಸ್ಪೆಂಡ್

ತುಮಕೂರು, (ಜನವರಿ 03): ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ.   …

Read More »