ಮಂಗಳೂರು: ನಗರದ ಸುರತ್ಕಲ್ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ಸಮುದ್ರಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಇಂದು (ಬುಧವಾರ) ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30) ಹಾಗೂ ಬೆಂಗಳೂರು ಜೆ.ಪಿ. ನಗರದ ನಿವಾಸಿ ಸತ್ಯವೇಲು (30) ಮೃತ ವಿದ್ಯಾರ್ಥಿಗಳು. ಬೀದರ್ ಜಿಲ್ಲೆಯ ಹಂಗರಗಾ ನಿವಾಸಿ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ. …
Read More »Daily Archives: ಜನವರಿ 9, 2025
ಮನೆಯಲ್ಲೇ ಮೂವರನ್ನು ಭೀಕರವಾಗಿ ಕೊಲೆ ಮಾಡಿ, ಆರೋಪಿಯು ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ರಾಜಧಾನಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಮಾಡಿರುವ ಜಾಲಹಳ್ಳಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ಇಂದು (ಬುಧವಾರ) ಸಂಜೆ ಬೆಳಕಿಗೆ ಬಂದಿದೆ. ಆರೋಪಿ ಗಂಗರಾಜು ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಗಂಗರಾಜು ಪತ್ನಿ ಭಾಗ್ಯಮ್ಮ (38), ಪುತ್ರಿ ನವ್ಯ (19) ಹಾಗೂ ಭಾಗ್ಯಮ್ಮರ ಅಕ್ಕನ ಮಗಳಾದ ಹೇಮಾವತಿ (22) ಕೊಲೆಗೀಡಾದವರು. ಕೌಟುಂಬಿಕ ಕಲಹದಿಂದ ಪತಿಯು ಪತ್ನಿ ಸೇರಿ ಮೂವರನ್ನು ಹತ್ಯೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇಂದು …
Read More »ಹುಕ್ಕೇರಿ ಮಠ ಜಾತ್ರೆಯಲ್ಲಿ ಭಕ್ತರಿಗಾಗಿ ಖಡಕ್ ರೊಟ್ಟಿ, ಗೋದಿ ಹುಗ್ಗಿ,
ಹಾವೇರಿ : ಏಲಕ್ಕಿ ಕಂಪಿನ ನಗರಿ ಹಾವೇರಿಗೆ ಎರಡನೇಯ ಕಲ್ಯಾಣ ಎಂಬ ಹೆಸರು ಸಹ ಇದೆ. ಇದಕ್ಕೆ ಕಾರಣ ಬಸವಣ್ಣನವರ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರದಲ್ಲಿ 63 ಮಠಗಳಿವೆ. ಈ ಮಠಗಳಲ್ಲಿ ಪ್ರಮುಖವಾದ ಹುಕ್ಕೇರಿಮಠದ ಜಾತ್ರೆ ಆರಂಭವಾಗಿದೆ. ಈ ಜಾತ್ರೆ ಆರಂಭದೊಂದಿಗೆ ಉತ್ತರ ಕರ್ನಾಟಕದ ಜಾತ್ರೆಗಳು ಆರಂಭವಾಗುತ್ತವೆ. ಈ ಮಠದ ಜಾತ್ರೆಗೆ ಜಾತ್ರೆಗಳ ಆರಂಭಿಕ ಜಾತ್ರೆ ಎಂದು ಸಹ ಕರೆಯಲಾಗುತ್ತದೆ. ಐದು ದಿನಗಳ ಕಾಲ ಈ ಮಠದಲ್ಲಿ ಸಾಂಸ್ಕೃತಿಕ, ಧಾರ್ಮಿಕ …
Read More »ಮುಂದೂಡಿಕೆಯಾಗಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಜ.21ಕ್ಕೆ: ಡಿ.ಕೆ.ಶಿ
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ …
Read More »