Breaking News

Daily Archives: ಜನವರಿ 11, 2025

ರೈತರಿಗೆ ಸಿಗುವ ಸೌಲಭ್ಯಗಳನ್ನು ಮುಟ್ಟಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ.*

  *ಗೋಕಾಕ್*- ರೈತ ಸಮೂಹಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಪಕ್ಷಾತೀತವಾಗಿ ಶ್ರಮಿಸುವಂತೆ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕೌಜಲಗಿ ಪಿಕೆಪಿಎಸ್ ನೂತನ ಆಡಳಿತ ಮಂಡಳಿಯಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರ ಹಿತ ದ್ರಷ್ಟಿಯಿಂದ ಉತ್ತಮವಾದ ಸೇವೆ ಸಲ್ಲಿಸುವ ಮೂಲಕ ರೈತ ವರ್ಗದ ಪ್ರೀತಿ ಸಂಪಾದಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ರೈತರ ಆರ್ಥಿಕ ಅಭಿವೃದ್ದಿಗೆ ನೂತನ ಆಡಳಿತ ಮಂಡಳಿಯು ಹೊಸ ಹೊಸ …

Read More »

ಸಿಎಂ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್‌ ಸರ್ಕಾರದ ಪತನ ಖಚಿತ: ಜಗದೀಶ್​ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್​ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇದು ಒಂದಲ್ಲ ಒಂದು ದಿನ ಇದು ಹೊರ ಬರುತ್ತೆ ಅಂತ ಹೇಳಿದ್ದೆ.‌ ಈಗಾಗಲೇ ಔತಣಕೂಟ ಆರಂಭವಾಗಿದೆ.‌ ಕೆಲ ಸಚಿವರು ಸೇರಿ ಔತಣಕೂಟ ಆಯೋಜನೆ ಮಾಡಿದರು. ಆದರೆ, ಎಸ್‌ಸಿ, ಎಸ್‌ಟಿ …

Read More »

ಐಸೂ ಆಟ :ಕುಲಕರ್ಣಿ ಕಾರು ಸೀಜ್. ಏನಿದು ನಂಟು….!

ಬೆಂಗಳೂರು: ಚಿನ್ನ ಪಡೆದು ಹಣ ನೀಡದೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಐಶ್ವರ್ಯ ಗೌಡಗೆ ಸೇರಿದ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಈ ಕಾರನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಬಳಸುತ್ತಿದ್ದರು ಎಂದು ತಿಳಿದುಬಂದಿದೆ.   ಈ ಹಿಂದೆ ಐಶ್ವರ್ಯ ಗೌಡ ಬಳಿ ಮೂರು ಐಷಾರಾಮಿ ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದರು. ಐಶ್ವರ್ಯ ಪತಿ ಹರೀಶ್‌ ಹೆಸರಿನಲ್ಲಿದ್ದ KA01MY8585 ನಂಬರಿನ ಆಡಿ, KA1MB8555 ໖໖ KA05NL3567 3 ಫಾರ್ಚುನರ್ …

Read More »

ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್; ಡಿಸಿಎಂ ಡಿಕೆ ಶಿವಕುಮಾ‌ರ್

ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿಮ ಎಂದು ಡಿಸಿಎಂ ಡಿ ಕೆ ಶಿವಕುಮಾ‌ರ್ ಅವರು ಟೀಕಿಸಿದ್ದಾರೆ. ಶೃಂಗೇರಿಯಲ್ಲಿ ಅವರು ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಲಕ್ಷ್ಮಿ ಹೆಬ್ಬಾಳ್ಳರ್‌ ಅವರಿಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಸಿ.ಟಿ. ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ ಎಂದು ಕೇಳಿದಾಗ, “ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟ‌ರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, …

Read More »

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು …

Read More »

ಕೆರೆಗಳ ಉಳಿವಿನ ಹೋರಾಟಕ್ಕಾಗಿ ಸರ್ಕಾರ ಎಷ್ಟೇ ಕೇಸುಗಳನ್ನು ಹಾಕಿದರು ನಾವು ಬಗ್ಗುವುದಿಲ್ಲ ಜಗ್ಗುವುದಿಲ್ಲ : ಮುಖ್ಯಮಂತ್ರಿ ಚಂದ್ರು

ಇಂದು ಸಂಜೆ ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆ ವೀಕ್ಷಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸುದ್ದಿಗಾರರೊಂದಿಗೆ ಮಾತನಾಡುತ್ತ ” ನಗರದ ಕೆರೆಗಳ ಉಳಿವಿಗಾಗಿ ಆಮ್ ಆದ್ಮಿ ಪಕ್ಷ ಎಲ್ಲ ಹೋರಾಟಗಳಿಗೂ ಸರ್ವಸಮದ್ಧವಾಗಿದೆ. ಇತ್ತೀಚೆಗೆ ಹೇರೋಹಳ್ಳಿ ಕೆರೆ ಹೋರಾಟದ ಸಂದರ್ಭದಲ್ಲಿ ಪಕ್ಷದ ನಾಯಕರುಗಳ ಮೇಲೆ ಸ್ಥಳೀಯ ಶಾಸಕ ಎಸ್ ಟಿ ಸೋಮಶೇಖರ್ ಒತ್ತಡದ ಮೇಲೆ ಪೊಲೀಸರು ಕ್ರಿಮಿನಲ್ ಮೊಕದ್ದಮೆಯನ್ನು ಹಾಕಿದ್ದಾರೆ. ಈ ರೀತಿಯ ಎಷ್ಟೇ …

Read More »

ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.   ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.   ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ …

Read More »

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು : “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಶೃಂಗೇರಿಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಶನಿವಾರ ಉತ್ತರಿಸಿದರು. ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಗಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಎಂದು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಮುಸಲ್ಮಾರಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.   ಕರಂಬಳ, ಚಾಪಗಾಂವ್ ಸೇರಿ ಹಲವೆಡೆ ಕಾಡಾನೆ ಹಾವಳಿಗೆ ರೈತರು ನಲುಗಿ ಹೋಗಿದ್ದರು. ಕಬ್ಬು ಮತ್ತಿತರ ಬೆಳೆಗಳನ್ನು ಆನೆ ಹಾಳು ಮಾಡುತ್ತಿದ್ದುದರಿಂದ ಕಂಗಾಲಾಗಿದ್ದರು.   ಕಾಡಾನೆ ಹಾವಳಿಗೆ ಕಂಗೆಟ್ಟಿದ್ದ ಖಾನಾಪುರದ ರೈತರಿಗೆ ಇದೀಗ ಮುಕ್ತಿ ಸಿಕ್ಕಿದೆ ಎನ್ನಬಹುದು. ಶಿವಮೊಗ್ಗದ ಸಕ್ರೆಬೈಲು ಬಿಡಾರದಿಂದ ಬಂದಿದ್ದ ನುರಿತ ಆನೆಗಳ ಸಹಾಯದಿಂದ ಕಾಡಾನೆಯನ್ನು ಸೆರೆ …

Read More »