ಕಾರವಾರ): ಮುಂಡಗೋಡದ ಉದ್ಯಮಿ ಅಪಹರಣ ಪ್ರಕರಣ ಸಂಬಂಧ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಮತ್ತು ಇನ್ನು ಮೂವರನ್ನು ಬೆನ್ನಟ್ಟಿ ಬಂಧಿಸಲಾಗಿದೆ. ಜಮೀರ್ ಅಹ್ಮದ್ ದುರ್ಗಾವಾಲೆ ಎಂಬವರನ್ನು ಅಪಹರಿಸಿದ್ದ ಆರೋಪಿಗಳಾದ ರಹೀಮ್ ಅಲ್ಲಾಹುದ್ದೀನ್ ಹಾಗೂ ಅಜಯ್ ಮಡ್ಲಿ ಎಂಬವರಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ಆರೋಪಿಗಳಿಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡಗೋಡ ಠಾಣಾ ಸಿಪಿಐ, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ಗೂ …
Read More »Daily Archives: ಜನವರಿ 13, 2025
ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ
ಬೆಳಗಾವಿ: ಎರಡು ದಿನಗಳ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಮೆರವಣಿಗೆಗೆ ಇಂದು ಬೆಳಗ್ಗೆ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಜಾನಪದ ಕಲಾವಾಹಿನಿಗಳು, ಕಲಾತಂಡಗಳು ಗಮನ ಸೆಳೆದವು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾದ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ಸಂಗೊಳ್ಳಿಯ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ರಾಯಣ್ಣನ ಪ್ರತಿಮೆಗೆ ಪ್ರಾತಃಕಾಲದಲ್ಲಿ ಪೂಜೆ ಸಲ್ಲಿಸಲಾಯಿತು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ …
Read More »ಮಾರ್ಚ್ನಿಂದ ಜಿಲ್ಲಾ ಪ್ರವಾಸ:ಹೆಚ್. ಡಿ. ದೇವೇಗೌಡ
ಬೆಂಗಳೂರು: ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಆ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ತಿಳಿಸಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ …
Read More »ಜಾತಿ-ಮತಗಳನ್ನು ನೋಡದೆ ಹಾಲು ನೀಡುವ ಹಸುಗಳ ಮೇಲಿನ ಕೃತ್ಯ ಖಂಡಿಸಿದ ಸ್ವಾಮೀಜಿ
ಹಾವೇರಿ : ಬೆಂಗಳೂರಿನ ಚಾಮರಾಜಪೇಟಿಯ ವಿನಾಯಕ ನಗರದ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಹಾವೇರಿಯ ಬಣ್ಣದಮಠದ ಅಭಿನವ ಚೆನ್ನಮಲ್ಲಿಕಾರ್ಜುನ ಶ್ರೀಗಳು ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ತಾಯಿ ಹಾಲಿಗಿಂತ ಹೆಚ್ಚು ಗೋವಿನ ಹಾಲು ಕುಡಿದು ಬೆಳೆದವನು. ಇಂತಹ ಕೃತ್ಯವೆಸಗಿದ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಶ್ರೀಗಳು ಒತ್ತಾಯಿಸಿದರು. ಆರೋಪಿಗಳು ಹಸುವಿನ ಕೆಚ್ಚಲು ಕೊಯ್ದು ಆಮಾನವೀಯವಾಗಿ ವರ್ತಿಸಿದ್ದಾರೆ. ಗೋಮಾತೆ ಯಾವುದೇ ಜಾತಿಮತಗಳನ್ನು ನೋಡದೆ ಎಲ್ಲರಿಗೂ …
Read More »ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ:ಹೆಚ್.ಸಿ. ಮಹದೇವಪ್ಪ
ಮೈಸೂರು: “ಸಿಎಂ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ” ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೂಗಾಟ, ಚರ್ಚೆ ಏನು ಇಲ್ಲ. ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅನಾವಶ್ಯಕವಾಗಿ ಸಿಎಂ ಕುರ್ಚಿ ಬಗ್ಗೆ ಚರ್ಚೆ ಆಗುತ್ತಿದೆ ಅಷ್ಟೇ” ಎಂದರು. ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿರುವ ವಿಚಾರ ಕುರಿತು …
Read More »