ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಕಳ್ಳನೋರ್ವ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಯಿಂದ ಅವರು ಗಂಭೀರ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.
Read More »Daily Archives: ಜನವರಿ 16, 2025
ಲಕ್ಕಮ್ಮ ದೇವಿ ಜಾತ್ರೆಗೆ ಊರಿಗೆ ಊರೇ ಖಾಲಿ: ದನಕರುಗಳನ್ನು ಕರೆದೊಯ್ಯುವ ಗ್ರಾಮಸ್ಥರು!
ಬಳ್ಳಾರಿ : ಇದೊಂದು ವಿಶೇಷ ಜಾತ್ರೆ. ಜಾತ್ರೆಯ ದಿನ ಆ ಊರಿನಲ್ಲಿ ಯಾವೊಬ್ಬ ವ್ಯಕ್ತಿಯೂ ಇರಲ್ಲ. ಮನುಷ್ಯರು ಮಾತ್ರವಲ್ಲ, ಗ್ರಾಮದಲ್ಲಿರುವ ದನಕರುಗಳಿಂದಿಡಿದು ಸಾಕು ಪ್ರಾಣಿಗಳು ಆ ಊರಿನಲ್ಲಿ ಇರುವುದಿಲ್ಲ. ಮನೆಗಳಿಗೆಲ್ಲ ಜನರು ಬೀಗ ಹಾಕಿರುತ್ತಾರೆ. ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿರುತ್ತೆ! ಗಣಿನಾಡು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರುನೂರು ಎಂಬ ಗ್ರಾಮದಲ್ಲಿ ವಿಶಿಷ್ಟ ಆಚರಣೆಯ ಜಾತ್ರೆ ನಡೆಯೋದು ಗ್ರಾಮದ ಒಳಗಲ್ಲ, ಬದಲಾಗಿ ಗ್ರಾಮದ ಹೊರವಲಯದಲ್ಲಿ. ಇದಕ್ಕಾಗಿ ಇಲ್ಲಿಯ ಜನತೆ ತಮ್ಮ …
Read More »ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ:
ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ.. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – …
Read More »ಮೈಸೂರು ಇನ್ಫೋಸಿಸ್ ಆವರಣದಲ್ಲಿ ಕೊನೆಗೂ ಸಿಗದ ಚಿರತೆ
ಮೈಸೂರು, ಜನವರಿ 16: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಆವರಣ ಸುಮಾರು 300 ಎಕರೆಯಷ್ಟಿದೆ. ಇನ್ಫೋಸಿಸ್ನಲ್ಲಿ …
Read More »ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ
ಮೈಸೂರು, (ಜನವರಿ 15): ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ ಏಳು ವರ್ಷಗಳ ಹಿಂದೆ ದೇವರಾಜ್ ಎನ್ನುವಾತ ಸಂಬಂಧಿಯಾಗಿದ್ದ ತೇಜಳನ್ನು ಮದುವೆಯಾಗಿದ್ದ. ಇಬ್ಬರಿಗೆ ಎರಡು ಮಕ್ಕಳು ಸಹ ಇವೆ. ಆದರೂ ತೇಜ ಪರಪುರಷನೊಂದಿಗೆ ಸಂಬಂಧ ಇಟ್ಟುಕೊಂಡಿದ್ದಳು. ಸಾಲದಕ್ಕೆ ಗಂಡ ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಮನೆ …
Read More »ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್
ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ…ಡಿ.ಸಿ.ಎಂ. ಡಿ.ಕೆ.ಶಿವಕುಮಾರ್…ಕಾಂಗ್ರೆಸನಲ್ಲಿ ಯಾವುದೇ ಗೊಂದಲಗಳಿಲ್ಲ… ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ ಡಿ.ಸಿ.ಎಂ. ಡಿ.ಕೆ.ಶಿವಕುಮಾರ್ ಹೇಳಿಕೆ ವಿಪಕ್ಷಿಯರಿಗೆ ತಿರುಗೇಟು ನೀಡಿದ ಡಿಸಿಎಂ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಒಂದೆಡೇ ಕಾಂಗ್ರೆಸಗೆ ಪೂರ್ಣ ಪ್ರಮಾಣದ ಸಾರಥಿ ನೇಮಿಸಿ ಗೊಂದಲಗಳನ್ನು ನಿವಾರಿಸಿ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದ್ರೇ ಇನ್ನೊಂದೆಡೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವನ್ನು ಹೈಕಮಾಂಡ್ ನೋಡಿಕೊಳ್ಳುತ್ತಾರೆಂದು …
Read More »ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ*
ಜಾತಿಗಣತಿ ವರದಿ : ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ – ಮುಖ್ಯಮಂತ್ರಿ ಸಿದ್ದರಾಮಯ್ಯ* 1 ಜಾತಿಗಣತಿ ಉಹಾಪೋಹದಲ್ಲೇ ಇದೆ. 2 ಈ ಕುರಿತು ವಿರೋಧಿಸುವುದು ಅನವಶ್ಯಕ. 3 ಅಂಕಿ ಅಂಶಗಳು ಇನ್ನೂ ಸಾರ್ವಜನಿಕವಾಗಿಯೇ ಇಲ್ಲ. 4 ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. …
Read More »