ಬೆಳಗಾವಿ: ಜಿಲ್ಲೆಯ ಅಂಕಲಗಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಶಾಸಕ ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು. ಬಸನಗೌಡ ಪಾಟೀಲ್ ಮತ್ತು ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಬೆಂಕಿಯುಗುಳುತ್ತಿದ್ದಾರೆ. ಓಡಾಡುವುದು ಕಷ್ಟವಾಗುತ್ತೆ ಅಂತ ವಿಜಯೇಂದ್ರ ಜಾರಕಿಹೊಳಿಗೆ ಹೇಳಿದ್ದು ಇಬ್ಬರಿಗೂ ಸಹ್ಯವಾಗುತ್ತಿಲ್ಲ. ತಾನು ಶಿಕಾರಿಪುರಕ್ಕೆ ಹೋಗಿ ವಿಜಯೇಂದ್ರ ಮನೆ ಮುಂದಿನಿಂದಲೇ ರಾಜ್ಯ ಪ್ರವಾಸ ಶುರುಮಾಡುತ್ತೇನೆ, ತಾನೊಬ್ಬನೇ ಅಲ್ಲಿಗೆ ಹೋಗುತ್ತೇನೆ, ದಿನಾಂಕವನ್ನು ವಿಜಯೇಂದ್ರನೇ ನಿಗದಿ ಮಾಡಲಿ ಎಂದು ಜಾರಕಿಹೊಳಿ ಸವಾಲೆಸೆದರು. ಪಕ್ಷದ …
Read More »Daily Archives: ಜನವರಿ 18, 2025
ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು ಎಂದಿದ್ದಾರೆ.
ಬೆಳಗಾವಿ: “ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದರು. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದರು. “ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ …
Read More »ಅತಿ ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭ
ಬೆಂಗಳೂರು: ಅತಿ ಶೀಘ್ರವೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆಯ ಮೂಲಕ ಕರ್ನಾಟಕದ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ, ಕರ್ನಾಟಕ ಬಿಜೆಪಿ ಚುನಾವಣಾಧಿಕಾರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನದವರೆಗೂ ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಸೇರಿ …
Read More »ಬಿಜೆಪಿಯು ದ್ವೇಷ ಹಾಗೂ ಹಿಂಸೆಯ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದೂರಿದರು.
ಹುಬ್ಬಳ್ಳಿ: “ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಿದೆ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಇ.ಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಬಿಜೆಪಿ ದ್ವೇಷ ಹಾಗೂ ಹಿಂಸೆಯ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ನ ಪ್ರಭಾವಿ …
Read More »ಸಮಸ್ಯೆ ಸುಳಿಯಲ್ಲಿ ಕಮರಿಪೇಟೆ ಪೊಲೀಸ್ ಠಾಣೆ!
ಹುಬ್ಬಳ್ಳಿ: ಸಮಸ್ಯೆಯ ಸುಳಿಯಲ್ಲಿರುವ ಕಮರಿಪೇಟೆ ಪೊಲೀಸ್ ಠಾಣೆ ಕಟ್ಟಡದ ಸ್ಥಳಾಂತರಕ್ಕೆ ಕಾಲ ಕೂಡಿ ಬಂದಿದೆಯಾದರೂ, ಸ್ಥಳಾಂತರ ಭಾಗ್ಯ ಮಾತ್ರ ಇನ್ನೂ ಬಂದಿಲ್ಲ! 15 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡ ಇದಾಗಿದ್ದು, ರಾಜಕಾಲುವೆ ಮೇಲೆಯೇ ನಿರ್ಮಿಸಲಾಗಿದೆ. ಇದೇ ರಾಜಕಾಲುವೆ ಮೇಲೆ ಪಕ್ಕದ ರಾಷ್ಟ್ರೀಯ ಹೆದ್ದಾರಿ ಸಹ ಹಾದು ಹೋಗಿದ್ದು, ಕಾಲುವೆಯ ತಳಭಾಗ ಅಲ್ಲಲ್ಲಿ ಶಿಥಿಲವಾಗಿದೆ. ಠಾಣೆಯ ಎದುರು ಸರಕು ತುಂಬಿದ ಲಾರಿಯೋ ಅಥವಾ ಬೃಹತ್ ವಾಹನವೋ ಸಾಗಿದರೂ ಸಾಕು, ಕಾಲುವೆಯ ತಡೆಗೋಡೆ …
Read More »ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿ
ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ. ಕೆ ಶಿವಕುಮಾರ್ ತಿರುಗೇಟು ನೀಡಿದರು. ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ …
Read More »ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು !!
: ಹೀಗಿದೆ ವೇಳಾಪಟ್ಟಿ – KUMBH MELA ಕುಂಭಮೇಳಕ್ಕೆ ಪ್ರಯಾಣ ಬೆಳೆಸಲು ಹುಬ್ಬಳ್ಳಿಯಿಂದ ಎರಡು ವಿಶೇಷ ರೈಲುಗಳನ್ನು ಪ್ರಾರಂಭಿಸಲಾಗಿದೆ. ಈ ರೈಲು ಸಂಚಾರದ ಹೆಚ್ಚಿನ ವಿವರಗಳು ಇಲ್ಲಿವೆ. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – ಎಸ್ಎಸ್ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 20 ರಂದು (ಸೋಮವಾರ) 00:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಜನವರಿ 22 …
Read More »ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ENTRANCE ಎಲ್ಲಾ ಸ್ಥಾನಗಳಿಗೂ UN OPPOSE
ಜಿಲ್ಲಾ ಕೃಷಿಕ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ENTRANCE ಎಲ್ಲಾ ಸ್ಥಾನಗಳಿಗೂ UN OPPOSE ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ್ ಆಯ್ಕೆ ರಾಜ್ಯ ಪ್ರತಿನಿಧಿಯಾಗಿ ಬಾಳಪ್ಪ ಬೆಳಕೂಡ್ ಆಯ್ಕೆ ಬೆಳಗಾವಿ- ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಬೂದಿಗೊಪ್ಪ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುವ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರನ್ನು ಅಹ್ವಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದರು. ಇದೊಂದು ಸರ್ಕಾರೀ ಕಾರ್ಯಕ್ರಮ, ಮಹಾತ್ಮಾ ಗಾಂಧಿ ಹಾಗೂ ಡಾ ಬಿಅರ್ ಅಂಬೇಡ್ಕರ್ ಎಲ್ಲರಿಗೂ ಸೇರಿದವರು, ಸಂವಿಧಾನ ಪ್ರತಿಯೊಬ್ಬ ಭಾರತೀಯನ ಆಸ್ತಿ, ಹಾಗಾಗಿ ಶೆಟ್ಟರ್ ಅವರೊಂದಿಗೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಅವರನ್ನೂ ಆಹ್ವಾನಿಸಲಾಗಿದೆ, ತಮ್ಮ ಕಾರ್ಯಕ್ರಮಕ್ಕೆ ಜೆಡಿಎಸ್ ಮತ್ತು ಬಿಜೆಪಿಯವರನ್ನು ಬಿಟ್ಟು ಯಾರೂ ಬೇಕಾದರೂ ಬರಬಹುದು, …
Read More »