ಬೆಂಗಳೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಹೇಳಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು ನೀಡಿದ್ದು …
Read More »Daily Archives: ಜನವರಿ 20, 2025
ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
ಬೆಂಗಳೂರು, (ಜನವರಿ 20): ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ …
Read More »ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ
ಚಿಕ್ಕಮಗಳೂರು, (ಜನವರಿ 20): ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಿದೆ. ಚಂದ್ರು ಎನ್ನುವರೇ ಮಗಳ ಮದುವೆಯನ್ನು ಕಣ್ತುಂಬಿಕೊಳ್ಳದೇ ರಸ್ತೆ …
Read More »ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ
ನೆಲಮಂಗಲ, ಜನವರಿ 20: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ನೆರೆ ಮನೆಯ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವಂತಹ (fraud) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ ಎಂಬುವವರಿಗೆ ವಂಚಿಸಿದ್ದ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರೀಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ …
Read More »1924ರ ಕಾಂಗ್ರೆಸ್ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ: ಪ್ರಲ್ಹಾದ್ ಜೋಶಿ
ಬೆಂಗಳೂರು, ಜನವರಿ 20: ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ನೆನಪಿಗಾಗಿ ನಾಳೆ ಕಾಂಗ್ರೆಸ್ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದೆ. ಈ ಕುರಿತಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. 1924ರ ಕಾಂಗ್ರೆಸ್ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ ಎಂದು ವಾಗ್ದಾಳಿ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಲ್ಹಾದ್ ಜೋಶಿ, ನಾಳೆ ಕಾಂಗ್ರೆಸ್ (ಐ) ಪಕ್ಷವು …
Read More »ವಿಜಯೇಂದ್ರ ಹೇಳಿಕೆಗಳಿಗೆ ಬಸವಣ್ಣನ ವಚನಗಳ ರೂಪದಲ್ಲಿ ಪ್ರತಿಕ್ರಿಯೆ ನೀಡಿದ ಬಸನಗೌಡ ಯತ್ನಾಳ್
ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ತಾನು ಅಡುವ ಮಾತಗಳನ್ನು ಬಸವಣ್ಣನ ವಚನಗಳ ಹಾಗೆ ಹೇಳಲಾರಂಭಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಯತ್ನಾಳ್ ಇಟ್ಟ ಹೆಜ್ಜೆಯನ್ನು ಹಿಂತೆಗೆಯಲ್ಲ ಎಂದು ವಿಜಯೇಂದ್ರ ಹೇಳಿರುವುದಕ್ಕೆ, ನಿಮ್ಮ ತಂದೆ ಸಿಎಂ ಆಗಿದ್ದಾಗ ಖೊಟ್ಟಿ ಸಹಿ ಮಾಡಿದ್ದು ನಿನಲ್ಲವೇ ವಿಜಯೇಂದ್ರ? ನೀನು ಮಾಡಿರುವ ಎಲ್ಲ ಹಲ್ಕಾ ಕೆಲಸಗಳಿಗೆ ಇಟ್ಟ ಹೆಜ್ಜೆ ಮುಂದಿಡದೆ ಮನೆಗೆ ಹೋಗು, ಕೂಡಲಸಂಗಮದೇವಾ ಎಂದು ಹೇಳುತ್ತಾರೆ. …
Read More »ಜ. 21ರಂದು ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!
ಬೆಳಗಾವಿ (ಜನವರಿ.20): ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ …
Read More »ಬ್ಯಾಂಕ್ ಅಧಿಕಾರಿಗಳ ಜೊತೆ ಹು-ಧಾ ಪೊಲೀಸ್ ಕಮಿಷನರ್ ಸಭೆ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಇಂದು ನಗರದ ಬಿವಿಬಿ ಕಾಲೇಜಿನಲ್ಲಿ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, “ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಎರಡು ಗಂಟೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ …
Read More »ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಎರಡು ವಿವಿಗಳಿಂದ 2 ಗೌರವ ಡಾಕ್ಟರೇಟ್ ಘೋಷಣೆ
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪ್ರತ್ಯೇಕ ಗೌರವ ಡಾಕ್ಟರೇಟ್ ಘೋಷಿಸಿವೆ. 92 ವರ್ಷ ವಯಸ್ಸಿನ ಕಾಗೋಡು ತಿಮ್ಮಪ್ಪನವರಿಗೆ ಜ.22ರ ಬೆಳಗ್ಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿಯ ಬಸವ ಸಭಾ ಭವನದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಅದೇ ದಿನ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ …
Read More »ಸರ್ಕಾರಿ ಕಚೇರಿ ಮೇಲೆ ಪರಿಶೀಲನೆ ಕಾರ್ಯ ಮುಂದುವರೆಸಿದ ಲೋಕಾಯುಕ್ತರು
ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಮೇಲೆ ಪರಿಶೀಲನಾ ಕಾರ್ಯ ಮುಂದುವರೆಸಿರುವ ಲೋಕಾಯುಕ್ತ ಹಾಗೂ ಅಧಿಕಾರಿಗಳ ತಂಡ, ಸೋಮವಾರ ಕಾನೂನು ಹಾಗೂ ಮಾಪನ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿ ಸೇರಿದಂತೆ ವಿವಿಧ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಇತ್ತೀಚೆಗೆ ನಗರದ 54 ಬಿಬಿಎಂಪಿ ಕಚೇರಿಗಳ ಮೇಲೆ ತಪಾಸಣೆ ನಡೆಸಿ ನಡೆಯುತ್ತಿದ್ದ ಲೋಪದೋಷಗಳನ್ನು ಪತ್ತೆ ಹಚ್ಚಿದ ಲೋಕಾಯುಕ್ತ ನ್ಯಾ. …
Read More »