Breaking News

Daily Archives: ಜನವರಿ 23, 2025

ವಿವಿಧ ಪ್ರಕರಣಗಳನ್ನು ಭೇದಿಸಿದ ಪೊಲೀಸರು: ಭರ್ಜರಿ ಕಾರ್ಯಾಚರಣೆ.

ವಿಜಯಪುರ: ಭರ್ಜರಿ ಕಾರ್ಯಾಚರಣೆ ನಡೆಸಿರುವ ವಿಜಯಪುರ ಸಿಇಎನ್ ಪೊಲೀಸರು ಆನಲೈನ್ ಮೂಲಕ ವಂಚಿಸಲಾಗಿದ್ದ ನಾಲ್ಕು ಪ್ರಕರಣಗಳನ್ನು ಭೇದಿಸಿದ್ದು, ರೂ. 1 ಕೋ. 47 ಲಕ್ಷ 76 ಸಾವಿರದ 53 ನಗದನ್ನು ವಂಚನೆಗೆ ಒಳಗಾದ ಜನರಿಗೆ ಮರಳಿಸಿದ್ದಾರೆ. ಅಲ್ಲದೇ, ಈ ಪ್ರಕರಣ ಸಂಬಂಧ ಗುಜರಾತ ರಾಜ್ಯದ ಸೂರತ ಮೂಲದ ಮೂವರು ಮತ್ತು ತೆಲಂಗಾಣ ಮೂಲದ ಓರ್ವ ಸೇರಿದಂತೆ ಒಟ್ಟು ನಾಲ್ಕು ಜನ ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಕುರಿತು ಇಲ್ಲಿದೆ …

Read More »

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.

ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ …

Read More »

ಮಶೀನ್ ಟೂಲ್ ತಯಾರಿಕೆಯಲ್ಲಿ ರಾಜ್ಯದ ಸಾಧನೆ ದೊಡ್ಡದು: ಎಂ ಬಿ ಪಾಟೀಲ.

ಬೆಂಗಳೂರು: ದೇಶದ ಮಶೀನ್ ಟೂಲ್ ಉತ್ಪಾದನೆಯಲ್ಲಿ ರಾಜ್ಯವು ಶೇಕಡ 52ರಷ್ಟು ಪಾಲು ಹೊಂದಿದ್ದು, ತಯಾರಿಕೆ ವಲಯದಲ್ಲಿ ಕರ್ನಾಟಕವು ನಾವೀನ್ಯತೆ ಮತ್ತು ಉತ್ಕೃಷ್ಟತೆಗಳಿಗೆ ಇನ್ನೊಂದು ಹೆಸರಾಗಿದೆ. ಹೀಗಾಗಿ, ಸರಕಾರವು ಇವುಗಳ ಬಲವರ್ಧನೆಗೆ ನಿರ್ದಿಷ್ಟ ವಿಷನ್ ಗ್ರೂಪ್ ರಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಏರ್ಪಾಡಾಗಿರುವ ಮಶೀನ್ ಟೂಲ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಾಣಿಜ್ಯ ಪ್ರದರ್ಶನದ ಮೇಳ ಇಮ್ಟೆಕ್ಸ್-2025ರ …

Read More »

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು.

ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ. ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ …

Read More »

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ; ಸಿಎಂ ಭರವಸೆ

ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …

Read More »

ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

Read More »

ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ

ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …

Read More »

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ

ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ …

Read More »

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …

Read More »

ನೇತಾಜಿ ಸುಭಾಷ್ ಚಂದ್ರ ಬೋಸ್ : ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »