Breaking News

Daily Archives: ಜನವರಿ 24, 2025

 ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ:ಸತೀಶ ಜಾರಕಿಹೊಳಿ

ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ. ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಗೊತ್ತಿಲ್ಲ‌. ಟಿವಿಯಲ್ಲಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

Read More »

ಇಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ:

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಕಾರ್ಯಕ್ರಮ ರೂಪಿಸಿದೆ. ಹೆಣ್ಣುಮಕ್ಕಳ ಲಿಂಗಾನುಪಾತ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆಸ್ಪತ್ರೆಗಳನ್ನು ಪಿಂಕ್ ಲೈಟಿಂಗ್​ನಿಂದ ಸಿಂಗರಿಸಲು ತಿಳಿಸಲಾಗಿದೆ. ಅಲ್ಲದೇ ಇಂದು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ …

Read More »

ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳು ಮುಂದುವರೆದಿದ್ದು, ಬೆಳಗಾವಿಗೂ ತಟ್ಟಿದೆ. ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿದ್ದಲ್ಲದೇ, ವಾಸಿಸುವ ಮನೆ ಗೋಡೆ ಮೇಲೆ ಹರಾಜಿದೆ ಎಂದು ಬರೆದಿರುವುದಾಗಿ ಮೈಕ್ರೋ ಫೈನಾನ್ಸ್​​​ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬ ಅಳಲು ತೋಡಿಕೊಂಡಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಗಣಪತಿ ರಾಮಚಂದ್ರ ಲೋಹಾರ್ ಎಂಬುವರ ಮನೆ ಜಪ್ತಿ ಪಡಿಸಿಕೊಳ್ಳಲಾಗಿದೆ. ಬಾಣಂತಿ, ಹಸುಗೂಸು ಅಂತಾನೂ …

Read More »

ಅಭಿವೃದ್ಧಿ ಕೆಲಸಗಳಿಗೆ ವೇಗ ‌ನೀಡಲು ಸಾಲದ ಮೊರೆ: ಕೊನೆ ತ್ರೈಮಾಸಿಕದಲ್ಲಿ ₹48,000 ಕೋಟಿ ಸಾಲ ಎತ್ತುವಳಿಗೆ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರ ತೆರಿಗೆ ಆದಾಯವನ್ನು ಪಂಚಗ್ಯಾರಂಟಿ, ಬದ್ಧ ವೆಚ್ಚಕ್ಕಾಗಿ ಬಳಕೆ ಮಾಡುತ್ತಿದೆ. ಇತ್ತ ಅಭಿವೃದ್ಧಿಗಾಗಿನ ಬಂಡವಾಳ ವೆಚ್ಚಕ್ಕಾಗಿ ಸಂಪೂರ್ಣ ಸಾಲವನ್ನೆ ನೆಚ್ಚಿಕೊಂಡಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ 48,000 ಕೋಟಿ ಸಾಲ ಮಾಡಲು ಯೋಜಿಸಿದೆ. ಆರ್ಥಿಕ ವರ್ಷದ ಮುಕ್ಕಾಲು ಭಾಗ ಪೂರ್ಣವಾಗಿದೆ. ಕೊನೆಯ ತ್ರೈಮಾಸಿಕ ಚಾಲ್ತಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ನಡೆಸುತ್ತಿದೆ. ತನ್ನ ಸ್ವಂತ ತೆರಿಗೆ ಆದಾಯದ ಬಹುಪಾಲನ್ನು ಪಂಚ …

Read More »

ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ; ಮೂವರ ಸಾವು

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …

Read More »

108 ತರಕಾರಿಗಳಿಂದ ಅಲಂಕಾರಗೊಂಡ ಬನಶಂಕರಿ ತಾಯಿ: ಪಲ್ಲೇದ ಹಬ್ಬ ಕಣ್ತುಂಬಿಕೊಂಡ ಭಕ್ತರು

ಹಾವೇರಿ: ಶಿವಲಿಂಗ ನಗರದಲ್ಲಿರುವ ಬನಶಂಕರಿಯ ಜಾತ್ರಾ ಮಹೋತ್ಸವದ ವಿಶೇಷ ಪಲ್ಲೇದ ಹಬ್ಬವನ್ನು ಗುರುವಾರ ಆಚರಿಸಲಾಯಿತು. ಸುಮಾರು 108 ತರಕಾರಿಗಳಿಂದ ಬನಶಂಕರಿ ದೇವಿಯನ್ನು ಅಲಂಕರಿಸುವುದು ಈ ಪಲ್ಲೇದ ಹಬ್ಬದ ವಿಶೇಷ. ನೂರಾರು ವರ್ಷಗಳ ಹಿಂದೆ ಭೂಮಿಯಲ್ಲಿ ಬರಗಾಲ ತಾಂಡವಾಡುತ್ತಿತ್ತು. ಜನ ಜಾನುವಾರುಗಳು ನೀರಿಲ್ಲದೆ ಪರದಾಡುತ್ತಿದ್ದ ವೇಳೆ ಋಷಿಮುನಿಗಳು ದೇವಿಯ ಮೊರೆ ಹೋಗುತ್ತಾರೆ. ದೇವಿ ಬನಶಂಕರಿ ತನ್ನ ದೇಹದ ಉಷ್ಣಾಂಶ ಹೆಚ್ಚಿಸಿಕೊಂಡು ಶಾಕಾಂಬರಿಯಾಗುತ್ತಾಳೆ. ಅಲ್ಲದೆ ಬರದಿಂದ ತತ್ತರಿಸಿದ ಭೂಮಿಗೆ ಮಳೆ ತರುತ್ತಾಳೆ. ಈ ರೀತಿ …

Read More »

ವಿಜಯಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಮೂವರು ಸಾವು

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ …

Read More »

ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಪತಿ ಆತ್ಮಹತ್ಯೆ: ಗೃಹ ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ

ರಾಯಚೂರು, ಜನವರಿ 23: ಮೈಕ್ರೋ ಫೈನಾನ್ಸ್ (Micro finance) ಕಂಪನಿಗಳು ನೀಡುತ್ತಿರುವ ಕಿರುಕುಳಕ್ಕೆ ಸಾಲ ಪಡೆದ ಕಡುಬಡವರು ದಿಕ್ಕೆಟ್ಟು ಓಡುವಂತೆ ಮಾಡಿದೆ. ಸದ್ಯ ಗಡಿ ಜಿಲ್ಲೆಯಲ್ಲಿ ಇವರ ಕಿರುಕುರಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಇದೀಗ ಆ ಮೃತನ ಪತ್ನಿ ತನ್ನ ಮಾಂಗಲ್ಯ ಸರವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್​ ಅವರಿಗೆ​ ಕಳುಹಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟಕ್ಕಿಳಿದ ಮೃತನ ಪತ್ನಿ ಮೈಕ್ರೋ ಫೈನಾನ್ಸ್​ಗಳ ಕಿರುಕುಳ ಹೆಚ್ಚಾಗುತ್ತಲೇ ಇದೆ. ಈ ಕಾರಣದಿಂದ ಇದೇ …

Read More »

ಹೊಳೆನರಸೀಪುರದಲ್ಲಿ ಒಳ ಚರಂಡಿಯಲ್ಲಿ ಹಾವುಗಳ ಕಳೇಬರಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವುದು ಪತ್ತೆಯಾಗಿದೆ.

ಹಾಸನ: ಜಿಲ್ಲೆಯ ಹೊಳೆನರಸೀಪುರದಲ್ಲಿ ಹಾವುಗಳ ಕಳೇಬರಗಳು ಸಿಕ್ಕಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೊಳೆನರಸೀಪುರ ಪಟ್ಟಣದ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ಹಾಸನ – ಮೈಸೂರು ಹೆದ್ದಾರಿಯ ದರ್ಜಿ ಬೀದಿ ಒಳ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಹಾವುಗಳ ಕಳೇಬರಗಳು ಪತ್ತೆಯಾಗಿವೆ. ಹತ್ತಾರು ಹಾವುಗಳನ್ನು ಕೊಂದು ಅವುಗಳ ಚರ್ಮ ಹಾಗೂ ದೇಹದೊಳಗಿನ ನಿರುಪಯುಕ್ತ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ರಾತ್ರಿ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಪುರಸಭೆಯ ತ್ಯಾಜ್ಯ ನಿರ್ವಹಣೆ ಮಾಡುವ …

Read More »

ಮಂಗಳೂರು ಸೆಲೂನ್ ಮೇಲೆ ರಾಮಸೇನೆ ದಾಳಿ ಪ್ರಕರಣ: ಟಿವಿ ಕ್ಯಾಮರಾಮ್ಯಾನ್ ಸಹಿತ 14 ಮಂದಿ ಬಂಧನ

ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ಸ್​​ ಯುನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿ ಗಾಜು, ಪೀಠೋಪಕರಣ ಧ್ವಂಸ ಮಾಡಿದ ಪ್ರಕರಣ ಸಂಬಂಧ 14 ಮಂದಿ ರಾಮಸೇನೆ ಕಾರ್ಯಕರ್ತರು ಹಾಗೂ ಸ್ಥಳೀಯ ಚಾನೆಲ್​ನ ಕ್ಯಾಮರಾಮ್ಯಾನ್ ಸಹಿತ 14 ಮಂದಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ಯಾಮರಾಮ್ಯಾನ್ ಶರಣ್ ರಾಜ್, ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ್, ಕಾರ್ಯಕರ್ತರಾದ ಫರಂಗಿಪೇಟೆಯ ಹರ್ಷರಾಜ್, ವಾಮಂಜೂರಿನ ಮೋಹನ್ ದಾಸ್, ಕಾಸರಗೋಡಿನ ಪುರಂದರ, ವಾಮಂಜೂರಿನ ಸಚಿನ್, ರವೀಶ್, ಬೆಂಜನಪದವಿನ ಸುಕೇತ್, ವಾಮಂಜೂರಿನ …

Read More »