Breaking News

Daily Archives: ಜನವರಿ 25, 2025

ಮೈಕ್ರೋ ಫೈನಾನ್ಸ್​ಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ನಿಮ್ಮ ಸಿಬ್ಬಂದಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಶ್ರೀ ಮಾರುತೇಶ್ವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಅಂಕೋಲಾದಲ್ಲಿ ನಾಗರಿಕ ವಿಮಾನ ನಿಲ್ದಾಣ: ಮೂಲ ಸೌಕರ್ಯ ಕಲ್ಪಿಸುವವರೆಗೂ ಜಾಗ ಬಿಡಲ್ಲ ಎಂದ ನಿರಾಶ್ರಿತರು

ಕಾರವಾರ: ಅಂಕೋಲಾದ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂಸ್ವಾದೀನಗೊಳಕ್ಕೊಳಗಾದ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ನಿವೇಶನ ಹಂಚಿಕೆಗೆ ಗುರುತಿಸಿರುವ ಜಾಗಕ್ಕೆ ಬಹುತೇಕ ನಿರಾಶ್ರಿತರು ಸಹಮತ ಸೂಚಿಸಿದ್ದಾರೆ. ಆದರೆ, ಅಗತ್ಯ ಮೂಲ ಸೌಕರ್ಯ ಸಂಪೂರ್ಣ ಕಲ್ಪಿಸಿದ ಬಳಿಕವೇ ಈಗಿರುವ ಮನೆ ಜಮೀನು ತೊರೆಯುವುದಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‌ನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅಪರ …

Read More »

ಮೈಕ್ರೋ ಪೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನಾಗಪ್ಪನ ಪತ್ನಿ ಪಲ್ಲವಿ ಆರೋಪಿಸಿದ್ದಾರೆ.

ಹಾವೇರಿ: ಸಾಲದಿಂದ ನೊಂದು‌ ಕಿರಾಣಿ ಅಂಗಡಿಯ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 36 ವರ್ಷದ ನಾಗಪ್ಪ ಗುಂಜಾಳ ಎಂದು ಗುರುತಿಸಲಾಗಿದೆ. “ಕಿರಾಣಿ ಅಂಗಡಿ ನಡೆಸಲು ನಾಗಪ್ಪ ವಿವಿಧ ಪೈನಾನ್ಸ್​ಗಳಿಂದ ಸುಮಾರು 15 ಲಕ್ಷ ಸಾಲ ಮಾಡಿಕೊಂಡಿದ್ದರು. ಮೈಕ್ರೋ ಫೈನಾನ್ಸ್​ನವರು ಮನೆಯ ಮುಂದೆ ಹಾಗೂ ಅಂಗಡಿಯ ಮುಂದೆ ಬಂದು ನಿಂತು ಕಿರುಕುಳ ನೀಡುತ್ತಿದ್ದರು. ಅವರ ಕಿರುಕುಳ ತಾಳಲಾರದೇ ರಾತ್ರಿ …

Read More »

ವಿಧಾನಸೌಧ ಆವರಣದಲ್ಲಿ ಜ.27ಕ್ಕೆ 25 ಅಡಿ ಎತ್ತರದ ಕನ್ನಡಾಂಬೆ ಭುವನೇಶ್ವರಿಯ ಕಂಚಿನ‌ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಲಿದ್ದಾರೆ.

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆಯು ಜ.27ರಿಂದ ಅನಾವರಣಗೊಳ್ಳಲಿದೆ. ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ, ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ …

Read More »

ಹೆಲಿಕಾಪ್ಟರ್, ವಿಮಾನದ ಇಂಧನದಲ್ಲೂ ಕಬ್ಬಿನ ಉಪ ಉತ್ಪನ್ನ ”ಎಥೆನಾಲ್”

ಬೆಂಗಳೂರು: ಕಬ್ಬಿನ ಉಪ ಉತ್ಪನ್ನಗಳಲ್ಲಿ ಒಂದಾದ ”ಎಥೆನಾಲ್” ಅನ್ನು ಇನ್ನು ಮುಂದೆ ವಿಮಾನಗಳು ಮತ್ತು ಹೆಲಿಕಾಪ್ಟರ್​​ನಲ್ಲಿ ಬಳಸಲಾಗುವ ಇಂಧನಕ್ಕೂ ಮಿಶ್ರಣ ಮಾಡಲಾಗುತ್ತದೆ ಎಂದು ದಕ್ಷಿಣ ಭಾರತ ಸಕ್ಕರೆ ಕೈಗಾರಿಕೆಗಳ ಸಂಘ (ಸಿಸ್ಮಾ) ದ ಅಧ್ಯಕ್ಷರಾಗಿರುವ ಕೈಗಾರಿಕೋದ್ಯಮಿ ಮುರುಗೇಶ ನಿರಾಣಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಎಥೆನಾಲ್ ಅನ್ನು ವಿಮಾನ ಮತ್ತು ಹೆಲಿಕಾಪ್ಟರ್​ನಲ್ಲಿ ಬಳಸಲಾಗುವ ಇಂಧನಕ್ಕೆ ಶೇ.5 ರಷ್ಟು ಮಿಶ್ರಣ ಮಾಡಲು ಪರವಾನಗಿ ನೀಡಿದೆ. ಈ ಬೆಳವಣಿಗೆಯಿಂದ ಎಥೆನಾಲ್ ದರವು ಹೆಚ್ಚಾಗಿ ಕಬ್ಬು ಬೆಳೆಯುವ …

Read More »

ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿ: ಸ್ಪೀಕರ್ ಓಂ ಬಿರ್ಲಾ

ಹುಬ್ಬಳ್ಳಿ: “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದರು. ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಜೈನ ಸಂತ, ಆಚಾರ್ಯ ಮುನಿಗಳು ಮಹಾವೀರರ ವಿಚಾರಗಳನ್ನು ಜನತೆಗೆ ಮುಟ್ಟಿಸುತ್ತಿದ್ದಾರೆ. ಜೀವನದಲ್ಲಿ ಪ್ರತಿಕೂಲ ಪರಿಸ್ಥಿತಿ ಬಂದಾಗ ಸಂತರ ಬಳಿ ಹೋಗಲು ಪಾರ್ಶ್ವನಾಥರು ಹೇಳಿದ್ದರು. ಅಹಿಂಸಾ …

Read More »