Breaking News

Daily Archives: ಜನವರಿ 27, 2025

ರಾಮುಲು ಕಾರ್ಯಕ್ಷೇತ್ರ ಬಳ್ಳಾರಿಯಾದರೆ ನನ್ನದು ಬೆಳಗಾವಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ಬಳ್ಳಾರಿಯ ಪ್ರಭಾವಿ ಬಿಜೆಪಿ ನಾಯಕ ಬಿ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಕರೆತಂದರೆ ತನ್ನನ್ನು ತುಳಿದಂತೆ ಆಗುವುದಿಲ್ಲ, ಅದೆಲ್ಲ ಊಹಾಪೋಹಗಳು, ಅವರ ಕಾರ್ಯಕ್ಷೇತ್ರ ಬಳ್ಳಾರಿ ಮತ್ತು ತನ್ನದು ಬೆಳಗಾವಿ, ತಮ್ಮ ನಡುವೆ ಕ್ಲ್ಯಾಷ್ ಉಂಟಾಗುವ ಸಂದರ್ಭವೇ ಉಂಟಾಗಲ್ಲ ಎಂದು ಹೇಳಿದರು. ಅಷ್ಟಕ್ಕೂ ಖುದ್ದು ಶ್ರೀರಾಮುಲು ಅವರೇ ಕಾಂಗ್ರೆಸ್ ಗೆ ಬರಲ್ಲ ಅಂತ ಹೇಳಿದ್ದಾರೆ, ಮಾಧ್ಯಮದವರಿಗೆ …

Read More »

ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ರಿಂದ ಲೋಕಾಯುಕ್ತಕ್ಕೆ ಮನವಿ

ಜನಸೇವಾ ಫೌಂಡೇಷನ್ ರಾಜ್ಯಾಧ್ಯಕ್ಷ ಜಾವಿದ್ ಖಾನ್ ರಿಂದ ಲೋಕಾಯುಕ್ತಕ್ಕೆ ಮನವಿ ಮಾನ್ವಿ ತಾಲೂಕಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಸತಿ ಶಾಲೆಯಲ್ಲಿ ಸೌಲಭ್ಯಗಳ ಕೊರತೆ ಮಾನ್ವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಗುಡುಗಿದ ಜಾವಿದ್ ಖಾನ್ ಮಾನ್ವಿ ತಾಲೂಕಿನ ಗ್ರಾಮದ ಇಂದಿರಾ ವಸತಿ ಶಾಲೆಯ ದುರಾಡಳಿತ ಬಗ್ಗೆ ಜಾವಿದ್ ಖಾನ್ ಆಕ್ರೋಶ ಇಂದಿರಾಗಾಂಧಿ ವಸತಿ ಕುರ್ಡಿ ವಸತಿ ಶಾಲೆಯ ಮಕ್ಕಳಿಗೆ ಸೌಲಭ್ಯ ಕೊರತೆ ಪರವಾನಗಿ ಇಲ್ಲದ‌ ಕಟ್ಟಡದಲ್ಲಿ ಇಂದಿರಾಗಾಂಧಿ …

Read More »

ಏರ್ ಶೋಗೆ ಮಾಂಸ ಮಾರಾಟ ನಿಷೇಧ?

ಬೆಂಗಳೂರು, ಜನವರಿ 27: ಏರೋ ಇಂಡಿಯಾ (Aeroindia) ವತಿಯಿಂದ ಯಲಹಂಕದಲ್ಲಿ ನಡೆಯುವ 2025ನೇ ಸಾಲಿನ ಏರ್ ಶೋಗೆ (Air Show) ಸಿದ್ಧತೆ ಭರದಿಂದ ಸಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಏರ್ ಶೋಗೆ ಕೌಂಟ್ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯುವ ಅಂತರರಾಷ್ಟ್ರೀಯ ಏರ್ ಶೋವನ್ನು ನೋಡಲು ಬೆಂಗಳೂರು ಜನ ಕಾತುರರಾಗಿದ್ದಾರೆ. ಏರ್ ಶೋಗೆ ಸಕಲ ತಯಾರಿ ನಡೆಯುತ್ತಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಕಣ್ತುಂಬಿಕೊಳ್ಳೋಕೆ ಸಿಟಿಮಂದಿ ಕಾತುರರಾಗಿದ್ದಾರೆ. ಅಂತರರಾಷ್ಟ್ರೀಯ …

Read More »

ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ

ಬೆಂಗಳೂರು, ಜನವರಿ 27: ಬಿಎಂಟಿಸಿಯ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ ಬರೋಬ್ಬರಿ 1.50 ಕೋಟಿ ರುಪಾಯಿ ಪರಿಹಾರ ನೀಡುವ ಯೋಜನೆ ಕೊನೆಗೂ ಜಾರಿಗೆ ಬಂದಿದೆ. ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಆದರೆ ಬಿಎಂಟಿಸಿಯ ನೌಕರರು ಆಕ್ಸಿಡೆಂಟ್​ನಲ್ಲಿ ಪ್ರಾಣ ಕಳೆದುಕೊಂಡರೆ 50 ಲಕ್ಷ ರುಪಾಯಿ ಮಾತ್ರ ಪರಿಹಾರ ನೀಡಲಾಗುತ್ತಿತ್ತು.   ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, …

Read More »

ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್

ವಿಜಯಪುರ, ಜನವರಿ 26: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವುದು ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನನ್ನ ಹೆಸರು ಅಂತಿಮವಾದರೆ ಸ್ಪರ್ಧಿಸುವೆ. ಕೋರ್ ಕಮಿಟಿಯಲ್ಲಿ ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುತ್ತೇವೆ. ಕೋರ್ ಕಮಿಟಿ ನಿರ್ಣಯ ಮಾಡಿದವರು ಸ್ಪರ್ಧೆ ಮಾಡುತ್ತಾರೆ. ನನ್ನ ಹೆಸರು ಫೈನಲ್ ಆದರೆ ಸ್ಪರ್ಧೆ ಮಾಡ್ತೇನೆ ಎಂದು ಹೇಳಿದ್ದಾರೆ. 

Read More »

3 ಕೋಟಿ ಅಂತರದಲ್ಲಿ ವಿನ್ ಆದ ದೋಸ್ತಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ವಿನ್ನರ್ ಎಂದು ಘೋಷಣೆ ಆಗಿದೆ. ಅವರು ದೊಡ್ಮನೆಯಲ್ಲಿ ಕೆಲ ವಾರಗಳ ಬಳಿಕ ಎಂಟ್ರಿ ಕೊಟ್ಟರೂ ಮೆಚ್ಚುಗೆ ಪಡೆದರು. ಈಗ ದೊಡ್ಮನೆಯಲ್ಲಿ ಅವರು ಕಪ್ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಅವರು ದೊಡ್ಡ ಅಂತರದಿಂದ ಗೆದ್ದಿದ್ದಾರೆ ಅನ್ನೋ ವಿಚಾರ ರಿವೀಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತನಾಗಿ ಹನುಮಂತ …

Read More »

ಸುಮೇರು ಪರ್ವತದ ಮೇಲೆ ತ್ರಿವರ್ಣಧ್ವಜ: ತೀರ್ಥಂಕರರ ಮಹಾಮಸ್ತಕಾಭಿಷೇಕ ಸಂಪನ್ನ

ಹುಬ್ಬಳ್ಳಿ: “ವರೂರು ಜೈನ ದಿಗಂಬರ ನವಗ್ರಹ ಕ್ಷೇತ್ರದಲ್ಲಿ ನಡೆದ ತೀರ್ಥಂಕರರ ಪಂಚಕಲ್ಯಾಣ ಮತ್ತು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಿಂದ ಧಾರವಾಡ ಜಿಲ್ಲೆಗೆ ದೇಶ ಪ್ರಸಿದ್ಧಿ ಪ್ರಾಪ್ತವಾಗಿದೆ” ಎಂದು ರಾಜ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ವರೂರು ನವಗ್ರಹ ಕ್ಷೇತ್ರದಲ್ಲಿ ಕಳೆದ 12 ದಿನಗಳಿಂದ ಜರುಗಿದ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ, ಸುಮೇರು ಪರ್ವತ ಲೋಕಾರ್ಪಣೆ ಹಾಗೂ ಮಹಾಮಸ್ತಕಾಭಿಷೇಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ …

Read More »