Breaking News

Daily Archives: ಜನವರಿ 28, 2025

ಶಿಕ್ಷಕಿ ಹಾಗೂ ತುಂಗಭದ್ರಾ ನದಿಯಲ್ಲಿ ಶವಕ್ಕಾಗಿ ಹುಡುಕಾಟ

ದಾವಣಗೆರೆ: ಫೈನಾನ್ಸ್ ಸಾಲಗಾರರ ಕಾಟಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಪ್ರಕರಣದಲ್ಲಿ ಶಿಕ್ಷಕಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಡೆದು ಮೂರನೇ ದಿನಕ್ಕೆ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣ ರಾಘವೇಂದ್ರ ಮಠದ ಬಳಿ ಜನವರಿ 26 ರಂದು ತುಂಗಭದ್ರಾ ನದಿಗೆ ಶಿಕ್ಷಕಿ ಪುಷ್ಪಲತಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. …

Read More »

ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದ ಸಿಎಂ

ಬೆಂಗಳೂರು: ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಇದು ರಾಜಕೀಯ ಪ್ರೇರಿತ ಅಲ್ಲದೆ ಇನ್ನೇನು?. ಮುಡಾ ಕೇಸೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು. ಸಿಬಿಐಗೆ ತನಿಖೆ ಕೊಡೋ ಆತಂಕ ಇದೆಯಾ? ಎಂಬ ಬಗ್ಗೆ ಪ್ರತಿಕ್ರಿಯಿಸುತ್ತಾ, ನ್ಯಾಯಾಧೀಶರು ಏನು ಮಾಡ್ತಾರೆ ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನ ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ? ನನಗೆ ನ್ಯಾಯ …

Read More »

ಗಾಂಜಾ ಬೀಜ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ಅಬಕಾರಿ ಅಧಿಕಾರಿಗಳು, ಆತನನ್ನು ಬಂಧಿಸಿ 270ಗ್ರಾಂ ಒಣ ಗಾಂಜಾ ಬೀಜವನ್ನು ಜಪ್ತಿ ಮಾಡಿದ್ದಾರೆ.

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಕಲಾಪುರಹಟ್ಟಿ ಕ್ರಾಸ್ ಬಳಿ ಗಾಂಜಾ ಬೀಜ ಮಾರಾಟ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಸಿಬ್ಬಂದಿ ಆತನನ್ನು ಬಂಧಿಸಿ, ಅವನ ಬಳಿ ಇದ್ದ 270ಗ್ರಾಂ ಒಣ ಗಾಂಜಾ ಬೀಜವನ್ನು ಜಪ್ತಿ ಮಾಡಿದ್ದಾರೆ. ಸಕಲಾಪುರಹಟ್ಟಿಯ ಟಿ. ಬಸವರಾಜ ಬಂಧಿತ ಆರೋಪಿ. ಈತನನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಬಸವರಾಜನು 270ಗ್ರಾಂನಷ್ಟು ಗಾಂಜಾದ ಒಣ ಬೀಜವನ್ನು ಅಕ್ರಮವಾಗಿ …

Read More »

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ …

Read More »

ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!

ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ …

Read More »

ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!

ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು …

Read More »

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಕೃಷ್ಣ ಬೈರೇಗೌಡ ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ …

Read More »

ಹಿರಿಯ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಣೆ

ಹಿರಿಯ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಣೆ ಹಿರಿಯಾ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ ಗಣರಾಜ್ಯೋತ್ಸವದ ನಿಮಿತ್ಯ ನಡೆದ ಪಂದ್ಯ ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಆಯೋಜನೆ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಎಚ್ ಡಿ ಕುಮಾರಸ್ವಾಮಿ ಬಡಾವಣೆ ಬೆಳಗಾವಿಯ ಇವರ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ವಾಲಿಬಾಲ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಈ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಂತಹ ಕ್ರೀಡಾಪಟುಗಳಿಗೆ …

Read More »